ಸಾರಾಂಶ
ದಾವಣಗೆರೆ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಪಕ್ಷದಿಂದ ನಗರದ ಉತ್ತರ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಸರಣಿ ಸಭೆಗಳನ್ನು ನಡೆಸಲಾಗುತ್ತಿದೆ.ಉತ್ತರ ಕ್ಷೇತ್ರದ ಅಧ್ಯಕ್ಷ ಕೆ.ಜಿ.ಶಿವಕುಮಾರ ಮಾತನಾಡಿ, ಪ್ರತಿ ವಾರ್ಡ್‌ನ ಅಧ್ಯಕ್ಷರು, ಪಾಲಿಕೆ ಕಾಂಗ್ರೆಸ್ ಸದಸ್ಯರು, ಕಾರ್ಯಕರ್ತರು, ಅಭಿಮಾನಿಗಳು ಪ್ರತಿ ಮನೆಮನೆಗೂ ತೆರಳಿ, ಮತದಾರರಿಗೆ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನರನ್ನು ಬೆಂಬಲಿಸಿ, ಮತ ನೀಡಲು ಮನವಿ ಮಾಡುವಂತೆ ತಿಳಿಸಿದರು.
ಕಾಂಗ್ರೆಸ್ ನುಡಿದಂತೆ ನಡೆಯುತ್ತಿದೆ. ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನೆಲ್ಲಾ ಜಾರಿಗೊಳಿಸಿದ ಸರ್ಕಾರ ನಮ್ಮದು.ದಾವಣಗೆರೆ ನಗರ, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಬೇಕು. ಸರ್ಕಾರದ ಯೋಜನೆಗಳು ವಾರ್ಡ್‌ಗಳಲ್ಲಿ ಯಾರಿಗಾದರೂ ತಲುಪದೇ ಇದ್ದರೆ, ಅಂತಹವರ ಬಗ್ಗೆ ಮಾಹಿತಿ ನೀಡಿದರೆ ಯೋಜನೆಯನ್ನು ತಲುಪಿಸುವ ಕೆಲಸ ಮಾಡೋಣ ಎಂದು ಹೇಳಿದರು. ನಿಟುವಳ್ಳಿ, ಆಂಜನೇಯ ಬಡಾವಣೆ, ಆವರಗೆರೆ ವಾರ್ಡ್‌ನಲ್ಲಿ ಕಾಂಗ್ರೆಸ್ ಪಕ್ಷ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಟ್ಟು, ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸುವ ಗುರಿ ಹೊಂದಬೇಕು. ಪ್ರತಿಯೊಬ್ಬ ಮತದಾರರೂ ಕಾಂಗ್ರೆಸ್‌ಗೆ ಭಾರೀ ಮತಗಳ ಅಂತರದಲ್ಲಿ ಗೆಲ್ಲಿಸುವ ಮೂಲಕ ಡಾ.ಪ್ರಭಾ ಅವರನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಮನವಿ ಮಾಡಿದರು.
ನಗರದ ಪಾಲಿಕೆಯ 29 ಮತ್ತು 30ನೇ ವಾರ್ಡ್‌ನಲ್ಲಿ ಉತ್ತರ ಕ್ಷೇತ್ರದ ಅಧ್ಯಕ್ಷ ಕೆ.ಜಿ.ಶಿವಕುಮಾರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ.ಶೆಟ್ಟಿ, ಆರ್.ಎಚ್.ನಾಗಭೂಷಣ, ಎಸ್.ಮಲ್ಲಿಕಾರ್ಜುನ, ಎ.ನಾಗರಾಜ, ಮಹಿಳಾ ಅಧ್ಯಕ್ಷೆ ಅನಿತಾ ಬಾಯಿ ಮಾಲತೇಶ ಇತರರು ಮಾತನಾಡಿದರು.ಕೆಪಿಸಿಸಿ ಸದಸ್ಯ ಆರ್.ಎಸ್.ಶೇಖರಪ್ಪ, ಪಾಲಿಕೆ ಸದಸ್ಯರಾದ ಜಯಮ್ಮ ಗೋಪಿನಾಯ್ಕ, ರೇಣುಕಮ್ಮ ಶಾಂತರಾಜ, ಮಂಜಮ್ಮ ಹನುಮಂತಪ್ಪ, ಟಿ.ಡಿ.ಹಾಲೇಶ, ಕರೇಗೌಡ್ರು ಮಂಗಳಮ್ಮ, ರೇವಣಪ್ಪ, ಮಂಜಣ್ಣ, ಹನುಮಂತಪ್ಪ, ಡಿ.ಎಸ್.ಕೆ.ಪರಶುರಾಮ್, ಪ್ರವೀಣಕುಮಾರ್, ಕರಿಯಪ್ಪ, ಅಣ್ಣೇಶ ನಾಯ್ಕ ಮತ್ತಿತರರಿದ್ದರು.