ಬಿಜೆಪಿ ಸದಸ್ಯತ್ವ ಅಭಿಯಾನ ಯಶಸ್ವಿಗೆ ಶ್ರಮಿಸಿ: ರಾಜೂಗೌಡ

| Published : Sep 21 2024, 01:49 AM IST

ಸಾರಾಂಶ

Strive for success in BJP membership campaign: Raju Gowda

-ಪ್ರಧಾನಿ ಮೋದಿ ಜನ್ಮದಿನ, ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಾಜೂಗೌಡ

-----

ಕನ್ನಡಪ್ರಭ ವಾರ್ತೆ ಹುಣಸಗಿ

ಬಿಜೆಪಿ ಪಕ್ಷವು ದೇಶಾದ್ಯಂತ ಸದಸ್ಯತ್ವ ಅಭಿಯಾನ ಹಮ್ಮಿಕೊಂಡಿದ್ದು, ಪಕ್ಷದ ಕಾರ್ಯತರ್ಕರು ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಬೇಕೆಂದು ಮಾಜಿ ಸಚಿವ ರಾಜೂಗೌಡ ಹೇಳಿದರು.

ಪಟ್ಟಣ ಸಮೀಪದ ಕೋಜಾಪೂರ ದೇವಸ್ಥಾನದ ಆವರಣದಲ್ಲಿ ನಡೆದ ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬ ಹಾಗೂ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾರ್ಯಕರ್ತರು ಮೊದಲು ತಮ್ಮ ಮನೆಯ ಸದಸ್ಯರನ್ನು, ನಂತರ ಪಕ್ಕದ ಮನೆಯವರನ್ನು ಬಳಿಕ ಗ್ರಾಮಸ್ಥರನ್ನು ಪಕ್ಷದ ಸದಸ್ಯರನ್ನಾಗಿ ಮಾಡಬೇಕು. ಪಕ್ಷವು ಹಿಂದೆ ವಹಿಸಿದ್ದ ಎಲ್ಲ ಕಾರ್ಯ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿತ್ತು. ಸದಸ್ಯತ್ವ ಅಭಿಯಾನವನ್ನು ಜಿಲ್ಲೆಯಲ್ಲಿ ಅಷ್ಟೇ ಅಲ್ಲದೇ ರಾಜ್ಯ ಮಟ್ಟದಲ್ಲಿ ಗಮನ ಸೆಳೆಯುವ ರೀತಿಯಲ್ಲಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಸದಸ್ಯತ್ವ ಅಭಿಯಾನವನ್ನು ಪಕ್ಷದ ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಬೇಕು. ಪ್ರತಿ ಕಾರ್ಯಕರ್ತರು ತಮ್ಮ ಬೂತ್‍ಗಳಲ್ಲಿ ಸಾಧ್ಯವಾದಷ್ಟು ಹೆಚ್ಚು ಸದಸ್ಯರನ್ನು ಸೇರ್ಪಡೆ ಮಾಡಲು ಪ್ರಯತ್ನಿಸಬೇಕು. ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳು, ನಾನು ಶಾಸಕನಾದ ನಂತರ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳು, ಸಾಮಾಜಿಕ ಸೇವೆಗಳ ಬಗ್ಗೆ ತಿಳುವಳಿಕೆ ನೀಡಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಪಾಟೀಲ್ ಯಾಳಗಿ ಮಾತನಾಡಿ, ದೇಶಾದ್ಯಂತ ಬಿಜೆಪಿ ಸದಸ್ಯತ್ವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಅ.2 ರವರೆಗೂ ನಿರಂತರ ಸದಸ್ಯತ್ವ ಅಭಿಯಾನವನ್ನು ಪಕ್ಷದ ಕಾರ್ಯಕರ್ತರು ಹಾಗೂ ತಂಡಗಳು ಮಾಡಲಿದ್ದಾರೆ ಎಂದು ತಿಳಿಸಿದರು. ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಿಜೆಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಬಸವರಾಜಸ್ವಾಮಿ ಸ್ಥಾವರಮಠ ಮಾತನಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾದ ಪರಮಣ್ಣ ತೇರಿನ, ಕಾರ್ಯದರ್ಶಿ ರಮೇಶ ಅಗತೀರ್ಥ ಅವರಿಗೆ ಮಾಜಿ ಸಚಿವ ರಾಜೂಗೌಡ ಅವರು ಸನ್ಮಾನಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ, ಬಿಜೆಪಿ ಮುಖಂಡರಾದ ವಿರೇಶ ಚಿಂಚೋಳಿ, ಎಂ.ಎಸ್. ಚಂದಾ, ಸೋಮಶೇಖರ ಸ್ಥಾವರಮಠ, ಬಸಣ್ಣ ದೇಸಾಯಿ, ಬಸವರಾಜ ವಿಭೂತಿಹಳ್ಳಿ, ತಿರುಪತಿ ಹತ್ತಕಟಿಗಿ, ಪರಮಣ್ಣ ತೇರಿನ, ಮೇಲಪ್ಪ ಗುಳಗಿ, ಸಿದ್ದನಗೌಡ ಕರಿಬಾವಿ, ಶಿವರುದ್ರ ದೇಸಾಯಿ, ಬಸಣ್ಣ ಬಾಲಗೌಡ್ರ, ಅಮಲಪ್ಪ ಹಳ್ಳಿ, ಆನಂದ ಬಾರಿಗಿಡದ, ಬಸನಗೌಡ ಕುಪ್ಪಿ, ಹಣಂಮತ್ರಾಯ, ಹಣಮರೆಡ್ಡಿ ಕುಪ್ಪಿ ಇದ್ದರು.

----

20ವೈಡಿಆರ್5: ಹುಣಸಗಿ ಸಮೀಪದ ಕೋಜಾಪೂರ ದೇವಸ್ಥಾನದ ಆವರಣದಲ್ಲಿ ನಡೆದ ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬ ಹಾಗೂ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಮಾಜಿ ಸಚಿವ ರಾಜೂಗೌಡ ಚಾಲನೆ ನೀಡಿ ಮಾತನಾಡಿದರು.