ಜಾನಪದ ಕಲೆಗಳ ಉಳಿವಿಗೆ ಶ್ರಮಿಸಿ: ಅನಿತಾ

| Published : Nov 30 2024, 12:46 AM IST

ಸಾರಾಂಶ

ರಾಮನಗರ:ಯುವ ಪೀಳಿಗೆಗೆ ದೇಸಿಯ ಜನಪದ ಕಲೆಗಳ ಬಗ್ಗೆ ಇನ್ನಷ್ಟು ಅರಿವು ಮೂಡಿಸುವುದು ಯುವಜನೋತ್ಸವದ ಉದ್ದೇಶ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಅನಿತಾ ಹೇಳಿದರು.

ರಾಮನಗರ:ಯುವ ಪೀಳಿಗೆಗೆ ದೇಸಿಯ ಜನಪದ ಕಲೆಗಳ ಬಗ್ಗೆ ಇನ್ನಷ್ಟು ಅರಿವು ಮೂಡಿಸುವುದು ಯುವಜನೋತ್ಸವದ ಉದ್ದೇಶ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಅನಿತಾ ಹೇಳಿದರು. ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ಎನ್ನೆಸ್ಸೆಸ್‌ ಘಟಕ ಆಯೋಜಿಸಿದ್ದ ರಾಮನಗರ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವರ್ಷವೂ ಯುವಜನೋತ್ಸವ ಆಚರಿಸಲಾಗುತ್ತದೆ. ಆ ಮೂಲಕ ಯುವ ಪೀಳಿಗೆಯಲ್ಲಿ ಅಡಗಿರುವ ಜನಪದ ವಿವಿಧ ಬಗೆಯ ಕಲೆಗಳು, ಹಾಡುಗಾರಿಕೆ, ಚಿತ್ರಕಲೆ ಇತ್ಯಾದಿ ಪ್ರತಿಭೆಯನ್ನು ಪ್ರೋತ್ಸಾಹಿಸಿ ಬೆಳೆಸುವುದೇ ಈ ಯುವಜನೋತ್ಸವ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಮೊಬೈಲ್ ಹಾವಳಿಯಿಂದಾಗಿ ಯುವಜನತೆಯಲ್ಲಿ ಜನಪದ ಕಲಾಪ್ರಕಾರಗಳಲ್ಲಿ ಭಾಗವಹಿಸುವಿಕೆ ಕಡಿಮೆಯಾಗುತ್ತಿದೆ. ಈ ಕಾರ್ಯಕ್ರಮದ ಪ್ರಯೋಜನವನ್ನು ಪ್ರತಿಯೊಬ್ಬ ಯುವಕರು ಸದುಪಯೋಗ ಪಡೆದುಕೊಳ್ಳಬೇಕು. ಮೊಬೈಲ್‌ಗಳಿಂದ ದೂರವಿದ್ದು ದೇಶೀಯ ಕಲೆ, ಸಂಸ್ಕೃತಿ, ಪರಂಪರೆ ತಿಳಿದುಕೊಳ್ಳುವಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಪುಸ್ತಕ, ದಿನಪತ್ರಿಕೆಗಳನ್ನು ಓದುವುದನ್ನು ಯುವಕರು ಅಭ್ಯಾಸ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವಿವಿಧ ಶಾಲಾ - ಕಾಲೇಜು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ನೆಹರು ಯುವಕೇಂದ್ರದ ಸಹಾಯಕ ನಿರ್ದೇಶಕರಾದ ಶ್ರೀವಾಣಿ, ಜಾನಪದ ಲೋಕದ ಕ್ಯೂರೇಟರ್ ಡಾ. ರವಿ ಯು.ಎಂ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

29ಕೆಆರ್ ಎಂಎನ್ 2.ಜೆಪಿಜಿ

ರಾಮನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಅತಿಥಿಗಳು ಉದ್ಘಾಟಿಸಿದರು.