ಸಾರಾಂಶ
ಶಾಲೆಯಲ್ಲಿ ಹಮ್ಮಿಕೊಳ್ಳುವ ಪ್ರಬಂಧ, ರಸಪ್ರಶ್ನೆ ಸೇರಿದಂತೆ ನಾನಾ ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಶಿಕ್ಷಕರು ಮುಂಚಿತವಾಗಿ ಮಕ್ಕಳಿಗೆ ಮಾಹಿತಿ ನೀಡಬೇಕು
ಕನಕಗಿರಿ: ಪಟ್ಟಣದ ಆದರ್ಶ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಪಾಲಕರ ಸಭೆ ನಡೆಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹೊನ್ನೂರುಸಾಬ ಉಪ್ಪು ಮಾತನಾಡಿ, ಮಕ್ಕಳ ಶೈಕ್ಷಣಿಕ ಸುಧಾರಣೆಗೆ ಶಿಕ್ಷಕರು ಹಾಗೂ ಪಾಲಕರು ಶ್ರಮಿಸಬೇಕು. ಶಾಲೆಯಲ್ಲಿ ಹಮ್ಮಿಕೊಳ್ಳುವ ಪ್ರಬಂಧ, ರಸಪ್ರಶ್ನೆ ಸೇರಿದಂತೆ ನಾನಾ ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಶಿಕ್ಷಕರು ಮುಂಚಿತವಾಗಿ ಮಕ್ಕಳಿಗೆ ಮಾಹಿತಿ ನೀಡಬೇಕು. ಅರ್ಧ ವಾರ್ಷಿಕ ಪರೀಕ್ಷೆ ಬರುತ್ತಿದ್ದು, ಬಾಕಿ ಉಳಿದ ಪಾಠಗಳನ್ನು ಪೂರ್ಣಗೊಳಿಸಬೇಕು. ಮಕ್ಕಳಿಗೆ ಅರ್ಥವಾಗದ ಪಾಠಗಳನ್ನು ಮರು ಬೋಧನೆ ಮಾಡಿ ಶಿಕ್ಷಣದ ಪ್ರಗತಿಗೆ ಮುಂದಾಗಬೇಕು. ಮಕ್ಕಳಿ ಶಾಲೆಗೆ ಮೂಲಸೌಲಭ್ಯ ಕಲ್ಪಿಸಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.ಇದೇ ವೇಳೆ ವಲಯ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆಯಾದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಶಿವಕುಮಾರ, ಶಿಕ್ಷಕರಾದ ಶಾರದಾ, ಶಶಿಭೂಷಣ್, ಕಾವ್ಯ, ದೀಪಾ, ಎಸ್ಡಿಎಂಸಿ ಸದಸ್ಯರು ಹಾಗೂ ಪಾಲಕರು ಇದ್ದರು.