ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶ್ರಮಿಸಿ: ಶ್ರೀನಿವಾಸ ನರಗುಂದ

| Published : Aug 04 2025, 12:30 AM IST

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶ್ರಮಿಸಿ: ಶ್ರೀನಿವಾಸ ನರಗುಂದ
Share this Article
  • FB
  • TW
  • Linkdin
  • Email

ಸಾರಾಂಶ

ದುಶ್ಚಟಗಳಿಂದ ದೂರವಿದ್ದು, ತಮ್ಮ ಆರೋಗ್ಯ ರಕ್ಷಣೆ ಮಾಡಿಕೊಂಡು ಸದೃಢ ಸಮಾಜ ನಿರ್ಮಾಣದಲ್ಲಿ ಯುವಕರು ಮಹತ್ವದ ಪಾತ್ರ ನಿರ್ವಹಿಸಬೇಕು ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ದುಶ್ಚಟಗಳಿಂದ ದೂರವಿದ್ದು, ತಮ್ಮ ಆರೋಗ್ಯ ರಕ್ಷಣೆ ಮಾಡಿಕೊಂಡು ಸದೃಢ ಸಮಾಜ ನಿರ್ಮಾಣದಲ್ಲಿ ಯುವಕರು ಮಹತ್ವದ ಪಾತ್ರ ನಿರ್ವಹಿಸಬೇಕು ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.

ಇಲ್ಲಿನ ವಿದ್ಯಾ ಪ್ರಸಾರಕ ಮಂಡಳದ ಎಸ್.ಆರ್. ನರಸಾಪೂರ ಕಲಾ ಮತ್ತು ಎಂ.ಬಿ. ಶಿರೂರ ವಾಣಿಜ್ಯ ಮಹಾವಿದ್ಯಾಲಯದ ಎನ್ಎಸ್ಎಸ್‌ ಘಟಕ 1 ಮತ್ತು 2 ಹಾಗೂ ಐ.ಕ್ಯೂ.ಎ.ಸಿ ಶುಕ್ರವಾರ ಆಯೋಜಿಸಿದ್ದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ಭವಿಷ್ಯವಾಗಿರುವ ಯುವ ಜನತೆ ಉತ್ತಮ ಆರೋಗ್ಯದ ಮಹತ್ವ ಅರಿಯಬೇಕು. ಉತ್ತಮ ಆರೋಗ್ಯ ಇದ್ದಾಗ ಮಾತ್ರ ಸಾಧನೆ ಸಾಧ್ಯ ಎಂಬ ಅಂಶ ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳು ವ್ಯಸನಗಳಿಂದ ದೂರವಿದ್ದು, ಉತ್ತಮ ಹವ್ಯಾಸಗಳಿಂದ ಒಳ್ಳೆಯ ಆರೋಗ್ಯ ಪಡೆದುಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣರಾಗಬೇಕು. ಒಳ್ಳೆಯ ಸ್ನೇಹಿತರನ್ನು ಹೊಂದಿ ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ಮಾದಕ ವಸ್ತುಗಳ ಬಳಕೆ ತಡೆಗಟ್ಟಿ ವ್ಯಕ್ತಿ ಮತ್ತು ಸಮಾಜದ ಆರೋಗ್ಯ ರಕ್ಷಿಸಿಕೊಳ್ಳಬೇಕು ಎಂದು ಹೇಳಿದರು.

ಶ್ವೇತಾ ಕುಲಕರ್ಣಿ ಪ್ರಾರ್ಥಿಸಿದರು. ಸಂಯೋಜಕಡಾ.ಎಸ್.ಎಸ್. ಹಂಗರಗಿ ಸ್ವಾಗತಿಸಿದರು. ಎನ್ಎಸ್ಎಸ್ ಅಧಿಕಾರಿ ಎಸ್.ವೈ. ಬೊಮ್ಮಣ್ಣವರ ಪ್ರತಿಜ್ಞಾವಿಧಿ ಬೋಧಿಸಿದರು. ಗೀತಾ ಕಿಲಬನೂರ ನಿರೂಪಿಸಿದರು. ಎಚ್.ಜಿ. ಗೌಡರ ವಂದಿಸಿದರು. ಎನ್ಎಸ್ಎಸ್ ಅಧಿಕಾರಿ ಎಸ್.ಎಂ. ಹಡಪದ ಇದ್ದರು.