ಸಾರಾಂಶ
ಕನ್ನಡಪ್ರಭ ವಾರ್ತೆ ಮಾಲೂರು
ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಮುಖ್ಯ ಶಿಕ್ಷಕರು ಇಚ್ಛಾಶಕ್ತಿ ವಹಿಸಿ ಸರ್ಕಾರ ನೀಡುವ ಸವಲತ್ತುಗಳು ಜೊತೆಗೆ ಸಂಘ ಸಂಸ್ಥೆಗಳು ದಾನಿಗಳ ಸಹಕಾರ ಪಡೆದು ಶಾಲೆಗಳಲ್ಲಿ ಪೂರಕ ವಾತಾವರಣ ನಿರ್ಮಾಣ ಮಾಡಿದರೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಲಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರುಅವರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸುವರ್ಣ ಭವನದ ಸಭಾಂಗಣದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.
ಗುಣಾತ್ಮಕ ಶಿಕ್ಷಣ ನೀಡಬೇಕುಸರ್ಕಾರಿ ಶಾಲೆಗಳ ಸ್ಥಿತಿಗತಿಗಳು ಹಾಗೂ ಮಕ್ಕಳ ದಾಖಲಾತಿ ಮತ್ತು ಫಲಿತಾಂಶದ ಬಗ್ಗೆ ಮಾಹಿತಿಯನ್ನು ಪಡೆದು ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವುದರ ಮೂಲಕ ಮೇಲ್ದರ್ಜೆಗೇರಿಸಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದರ ಮೂಲಕ ಫಲಿತಾಂಶವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿಯೇ ಇದೇ ಮೊದಲ ಬಾರಿಗೆ ಮುಖ್ಯ ಶಿಕ್ಷಕರ ಸಭೆ ಕರೆದು ಮಾಹಿತಿ ಪಡೆದು ಚರ್ಚಿಸಲಾಗುತ್ತಿದೆ ಎಂದರು.ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಬಡ ಹಾಗೂ ಮಾಧ್ಯಮ ವರ್ಗದ ಮಕ್ಕಳೇ ವ್ಯಾಸಂಗ ಮಾಡುತ್ತಿದ್ದು ಮಕ್ಕಳ ದಾಖಲಾತಿ ಹೆಚ್ಚಳ ಮಾಡಲು ಶಾಲೆಗಳಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡುವುದರ ಜೊತೆಗೆ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತಹ ಗುಣಾತ್ಮಕವಾದ ಶಿಕ್ಷಣವನ್ನು ನೀಡಬೇಕು ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯ ಪ್ರವೃತ್ತರಾಗಬೇಕು ಎಂದರು.
ಸರ್ಕಾರಿ ಶಾಲೆ ಉಳಿಸಬೇಕುಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಅಗತ್ಯವಿದ್ದು, ಸರ್ಕಾರ ಹಲವು ರೀತಿಯ ಸವಲತ್ತುಗಳನ್ನು ಸರ್ಕಾರಿ ಶಾಲೆಗಳಿಗೆ ಒದಗಿಸಿದರು ಸಹ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಳವಾಗದಿದ್ದಲ್ಲಿ ಕೆಲವು ಶಾಲೆಗಳನ್ನು ಸರ್ಕಾರ ಮುಚ್ಚುತ್ತಿದೆ. ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಇಚ್ಛಾಶಕ್ತಿ ವಹಿಸಿ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಪೋಷಕರ ಮನವೊಲಿಸಿ ದಾಖಲಾತಿ ಮಾಡಿಕೊಳ್ಳಬೇಕು. ಸರ್ಕಾರಿ ಶಾಲೆಗಳಿಗೆ ಇಲಾಖೆಯಿಂದ ಯಾವ ರೀತಿಯ ಸವಲತ್ತುಗಳು ಒದಗಿಸಿದರೆ ದಾಖಲಾತಿ ಹೆಚ್ಚಳ ಮಾಡಲು ಸಾಧ್ಯವಾಗುತ್ತದೆ ಎಂದರು.
ತಾಲೂಕಿನಲ್ಲಿ ಕೆಲವು ಸಂಸ್ಥೆಗಳು ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸುತ್ತಿದೆ, ಸಭೆಯಲ್ಲಿ ನೀವು ನೀಡುವ ಮಾಹಿತಿಯ ಮೇರೆಗೆ ಯಾವ ಶಾಲೆಗೆ ಯಾವ ರೀತಿಯ ಸೌಕರ್ಯ ಅಗತ್ಯವಿದೆ ಎಂಬುದರ ಬಗ್ಗೆ ಪಟ್ಟಿ ಮಾಡಿ ಸರ್ಕಾರದಿಂದ ಶಾಲೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಾಗಲಿ, ಕೊಠಡಿಗಳ ಕೊರತೆಯಾಗಲಿ, ಶಿಕ್ಷಕರ ಕೊರತೆಯಾದರೆ ನೀಗಿಸಲಾಗುವುದು ಎಂದರು. ಫಲಿತಾಂಶ ಉತ್ತಮಪಡಿಸಲು ಶ್ರಮಿಸಿಕೆಲವು ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಕಡಿಮೆಯಾಗುತ್ತಿದೆ, ಫಲಿತಾಂಶದಲ್ಲಿಯೂ ಸಹ ಇಳಿಕೆ ಕಂಡುಬಂದಿದ್ದು ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಒಗ್ಗಟ್ಟಾಗಿ ಶಾಲೆಗಳಲ್ಲಿ ದಾಖಲಾತಿಯನ್ನು ಹೆಚ್ಚಳ ಮಾಡುವುದರ ಮೂಲಕ ಫಲಿತಾಂಶದಲ್ಲಿಯೂ ಸಹ ಹೆಚ್ಚಳ ಮಾಡಿದ್ದಲ್ಲಿ ಅಂತಹ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರನ್ನು ಅಭಿನಂದಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂವಿ ರೂಪ, ತಾ.ಪಂ ಇ ಒ ವಿ ಕೃಷ್ಣಪ್ಪ, ಪುರಸಭೆ ಮುಖ್ಯ ಅಧಿಕಾರಿ ಎಬಿ ಪ್ರದೀಪ್, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಲಾ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ವಿ.ಶ್ರೀನಿವಾಸ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಷಣ್ಮುಖಯ್ಯ, ಕ್ಷೇತ್ರ ಸಮನ್ವಯ ಅಧಿಕಾರಿ ಟಿ ವೆಂಕಟಸ್ವಾಮಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆನಂದಮೂರ್ತಿ, ಉಪಪ್ರಾಂಶುಪಾಲ ರಾಮಕೃಷ್ಣಪ್ಪ, ಇಸಿಓಗಳಾದ ಶಶಿಧರ್, ಜಗದಾಂಬ, ಶ್ರೀನಿವಾಸ್, ನಟರಾಜ್, ಮೋಹನ್, ಪ್ರೌಢಶಾಲಾ ಶಿಕ್ಷಕ ನಂಜುಂಡೇಗೌಡ ಇನ್ನಿತರರು ಹಾಜರಿದ್ದರು.