ಸಾರಾಂಶ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಾಲಕರು ಮಕ್ಕಳಿಗೆ ಮೊಬೈಲ್ ಗೀಳು ತಪ್ಪಿಸಲು ಗುಣಮಟ್ಟದ ಶಿಕ್ಷಣದ ಜೊತೆಗೆ ದೈಹಿಕ ಸಾಮರ್ಥ್ಯ ಹೆಚ್ಚಿಸುವ ಸ್ಕೇಟಿಂಗ್ ನಂತಹ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಪ್ರೆರೇಪಿಸಬೇಕು. ದೇಶದ ಪರಂಪರೆ, ಸಂಸ್ಕಾರ ನೀಡುವ ಮೂಲಕ ಎಲ್ಲ ರಂಗದಲ್ಲೂ ಪ್ರತಿನಿಧಿಸುವಂತೆ ಮಾಡಿ ದೇಶದ ಆಸ್ತಿಯನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಪಾಲಕರು ಮಕ್ಕಳಿಗೆ ಮೊಬೈಲ್ ಗೀಳು ತಪ್ಪಿಸಲು ಗುಣಮಟ್ಟದ ಶಿಕ್ಷಣದ ಜೊತೆಗೆ ದೈಹಿಕ ಸಾಮರ್ಥ್ಯ ಹೆಚ್ಚಿಸುವ ಸ್ಕೇಟಿಂಗ್ ನಂತಹ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಪ್ರೆರೇಪಿಸಬೇಕು. ದೇಶದ ಪರಂಪರೆ, ಸಂಸ್ಕಾರ ನೀಡುವ ಮೂಲಕ ಎಲ್ಲ ರಂಗದಲ್ಲೂ ಪ್ರತಿನಿಧಿಸುವಂತೆ ಮಾಡಿ ದೇಶದ ಆಸ್ತಿಯನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.ಪಟ್ಟಣದ ಹುಡ್ಕೋ ಬಡಾವಣೆಯ ಡಾ.ಬಾಬಾಸಾಹೇಬ್ ಅಂಬೇಡ್ಕರ ಭವನದಲ್ಲಿ ರಾಜ್ಯ ಕರಾಟೆ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳನ್ನು ಸನ್ಮಾನಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಸ್ಕೇಟಿಂಗ್ ಕ್ರೀಡೆ ಉಪಯುಕ್ತವಾಗಿದೆ. ವಿದೇಶದಲ್ಲಿಯೂ ಕೂಡ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಇಲ್ಲಿ ಮಕ್ಕಳು ಸ್ಕೇಟೆಂಗ್ ಪ್ರದರ್ಶನ ನೋಡಿದರೆ ಮನಸ್ಸಿಗೆ ಸಂತೋಷವಾಗುತ್ತದೆ. ಮುದ್ದೇಬಿಹಾಳ ಪಟ್ಟಣದಲ್ಲಿ ಕರಾಟ ತರಬೇತಿ ಜೊತೆಗೆ ಸ್ಕೇಟಿಂಗ್ ತರಬೇತಿ ನೀಡುವ ಮೂಲಕ ಮಕ್ಕಳಲ್ಲಿ ಕ್ರೀಡಾ ಮನೋಭಾವ ಮೂಡಿಸುತ್ತಿರುವ ಶಿವಕುಮಾರ ಶಾರದಳ್ಳಿಯವರ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಪಟ್ಟಣದ ಮಕ್ಕಳಿಗೆ ಕ್ರೀಡಾಂಗಣ ಅತ್ಯಂತ ಅವಶ್ಯವಾಗಿದೆ. ಈ ಹಿನ್ನಲೆಯಲ್ಲಿ ಪಟ್ಟಣದ ಹೃದಯ ಭಾಗದಲ್ಲಿಯೇ ಸರ್ಕಾರಿ ಜಾಗದಲ್ಲಿ ಒಳಕ್ರೀಡಾಂಗಣ ನಿರ್ಮಿಸುವ ಉದ್ದೇಶವಿದ್ದು, ಮುಖ್ಯಮಂತ್ರಿಗಳಲ್ಲಿ ₹ 10 ಕೋಟಿಗಳ ವಿಶೇಷ ಅನುದಾನ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದ್ದೇನೆ. ಅವರು ಸಕಾರಾತ್ಮಕ ಸ್ಪಂದಿಸಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಬೇಗ ಪಟ್ಟಣದೊಳಗೆ ಒಳಾಂಗಣ ಕ್ರೀಡಾಂಗಣ ಮತ್ತು ತಾಲೂಕಿನ ಬಿದರಕುಂದಿ ವ್ಯಾಪ್ತಿಯ ನಿಯೋಜಿತ ಸರ್ಕಾರಿ ಜಾಗೆಯಲ್ಲಿ ಹೊರಾಂಗಣ ಕ್ರೀಡಾಂಗಣ ನಿರ್ಮಿಸಿ ಕ್ರೀಡಾಪಟುಗಳಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.ಈ ವೇಳೆ ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮಾತನಾಡಿ, ಯಾವುದೇ ಫಲಾಪೇಕ್ಷೆಯಿಲ್ಲದೇ ಸ್ಕೇಟಿಂಗ್ ಕ್ರೀಡೆಗೆ ತರಬೇತಿ ನೀಡುವ ಮೂಲಕ ಮಕ್ಕಳಲ್ಲಿ ವಿನೂತನ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದ ತರಬೇತುದಾರ ಶಿವಕುಮಾರ ಶಾರದಳ್ಳಿ ಕ್ರೀಡಾಮನೋಭಾವ ಸ್ಪೂರ್ತಿಯಾಗಿ ನಿಲ್ಲುತ್ತೇನೆ. ರಾಷ್ಟ್ರೀಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಕ್ರಿಡಾಪಟುಗಳಿಗೆ ಆರ್ಥಿಕ ಸಹಾಯ ಮಾಡುತ್ತೇನೆ ಎಂದರು.ಇದೇ ವೇಳೆ ಫೆ. 8,9 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಆಯ್ಕೆಯಾದ ಕ್ರೀಡಾಪಟುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಇದಕ್ಕೂ ಮೊದಲು ನೂರಾರು ಮಕ್ಕಳು ಸ್ಕೇಟಿಂಗ್ ಪ್ರದರ್ಶನ ನೀಡಿದ್ದನ್ನು ಮೆಚ್ಚಿ ಶಾಸಕರು ಚಾಕಲೇಟ್ ನೀಡಿ ಪ್ರೋತ್ಸಾಹಿಸಿದರು.ತಹಸೀಲ್ದಾರ್ ಬಲರಾಮ ಕಟ್ಟಿಮನಿ, ಪುರಸಭೆ ಅಧ್ಯಕ್ಷ ಮೈಬೂಬ ಗೊಳಸಂಗಿ, ಕಸಾಪ ತಾಲೂಕು ಅಧ್ಯಕ್ಷ ಕಾಮರಾಜ ಬಿರಾದಾರ, ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದ ರಾಜ್ಯ ವಕ್ತಾರ ಮೌನೇಶ.ಎಸ್.ವಿ, ರಾಜ್ಯ ಕರಾಟೆ ಸಂಘದ ವಕ್ತಾರ ಹಾಗೂ ಸ್ಕೇಟಿಂಗ್ ತರಬೇತುದಾರ ಶಿವುಕುಮಾರ ಶಾರದಳ್ಳಿ, ಎಂಡೋರೆನ್ಸ್ ಕರ್ನಾಟಕ ಸ್ಕೇಟಿಂಗ್ ರಾಜ್ಯಾಧ್ಯಕ್ಷ ಕಟ್ಟೆಸ್ವಾಮಿ ಬಳ್ಳಾರಿ, ಪ್ರಧಾನ ಕಾರ್ಯದರ್ಶಿ ಸೋಮಶೇಖರ, ಅಬ್ದೂಲ ರಜಾಕ, ಪೆಂಕಾಕ ಶಿಲಕ, ತರಬೇತುದಾರ ಶ್ರೀನಿವಾಸ, ಹಿರಿಯ ಪತ್ರಕರ್ತ ಪರುಶುರಾಮ ಕೊಣ್ಣೂರ, ಪುರಸಭೆ ಸದಸ್ಯೆ ಸಹನಾ ಬಡಿಗೇರ, ಪ್ರಗತಿ ಪರ ಚಿಂತಕ ಅರವಿಂದ ಕೊಪ್ಪ ಸೇರಿ ಹಲವರು ಇದ್ದರು.