ಸಾರಾಂಶ
ಹಗರಿಬೊಮ್ಮನಹಳ್ಳಿ: ಮಾ.೧೯ರಂದು ಹೊಸಪೇಟೆಯಲ್ಲಿ ನಡೆಯುವ ಬಿಜೆಪಿ ಒಬಿಸಿ ಮೋರ್ಚಾದ ಜಿಲ್ಲಾಮಟ್ಟದ ಸಮಾವೇಶದ ಹಿನ್ನೆಲೆಯಲ್ಲಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಒಬಿಸಿ ಮೋರ್ಚಾದ ತಾಲೂಕು ಪದಾಧಿಕಾರಿಗಳ ಸಭೆ ನಡೆಯಿತು.ಜಿಲ್ಲಾ ಒಬಿಸಿ ಮೋರ್ಚಾದ ಮಾಜಿ ಅಧ್ಯಕ್ಷ ಮುಟುಗನಹಳ್ಳಿ ಕೊಟ್ರೇಶ್ ಮಾತನಾಡಿ, ದೇಶವನ್ನು ಸುಸ್ಥಿತಿಯಲ್ಲಿಟ್ಟಿರುವ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಶ್ರೀರಾಮುಲು ಗೆಲುವಿಗೆ ಪಕ್ಷದ ವಿವಿಧ ಮೋರ್ಚಾದ ಪದಾಧಿಕಾರಿಗಳು ಶ್ರಮಿಸಬೇಕು. ಬಿಜೆಪಿ ಪಕ್ಷ ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸುತ್ತದೆ ಎಂದು ತಿಳಿಸಿದರು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಲ್ಲಾಹುಣ್ಸಿ ರಾಮಣ್ಣ ಮಾತನಾಡಿ, ದೇಶವನ್ನು ಸಮರ್ಥವಾಗಿ ಮುನ್ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಅವಧಿಗೆ ಪ್ರಧಾನಿಯಾಗಲು ಒಕ್ಕೊರಲಿನ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.ಬಿಜೆಪಿ ಮಂಡಲ ಅಧ್ಯಕ್ಷ ಬೆಣ್ಣಿಕಲ್ಲು ಪ್ರಕಾಶ್, ಒಬಿಸಿ ಮೋರ್ಚಾದ ತಾಲೂಕು ಅಧ್ಯಕ್ಷ ಕರಿಬಸಪ್ಪ, ಮಾಜಿ ಅಧ್ಯಕ್ಷ ಅನಿಲ್ ಜಾಣರ್ ಮಾತನಾಡಿದರು.ಪಕ್ಷದ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜೋಗಿ ಹನುಮಂತಪ್ಪ, ಕೋಗಳಿ ಹನುಮಂತಪ್ಪ, ಉಪಾಧ್ಯಕ್ಷ ನರೇಗಲ್ ಮಲ್ಲಿಕಾರ್ಜುನ, ಮುಖಂಡರಾದ ರವಿ ಭಂಡಾರಿ, ಎಂ.ನಾಗರಾಜ ಇದ್ದರು. ಮುಖಂಡರಾದ ಉಲುವತ್ತಿ ವೆಂಕಟೇಶ, ಬಸವರಾಜ ನಿರ್ವಹಿಸಿದರು.