ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೆ ಶ್ರಮಿಸಿ: ಟಿ.ಮಧು

| Published : Aug 27 2024, 01:35 AM IST

ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೆ ಶ್ರಮಿಸಿ: ಟಿ.ಮಧು
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿ ಪಡೆದಿರುವುದು ಸಂತಸ ತಂದಿದೆ. ಇದೇ ರೀತಿ ಕ್ರೀಡೆ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲೂ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಕಾಲೇಜಿಗೂ, ಪೋಷಕರಿಗೂ, ತಾಲೂಕಿಗೆ ಒಳ್ಳೆಯ ಹೆಸರು ತರಬೇಕೆಂದು ಅಮರಭಾರತಿ ವಿದ್ಯಾ ಕೇಂದ್ರ ಗೌರವ ಕಾರ್ಯದರ್ಶಿ ಟಿ.ಮಧು ಜಗಳೂರಲ್ಲಿ ಹೇಳಿದ್ದಾರೆ.

- ಸಮಗ್ರ ಪ್ರಶಸ್ತಿ ಸಾಧಿಸಿದ ನಾಲಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ - - -

ಕನ್ನಡಪ್ರಭ ವಾರ್ತೆ ಜಗಳೂರು

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿ ಪಡೆದಿರುವುದು ಸಂತಸ ತಂದಿದೆ. ಇದೇ ರೀತಿ ಕ್ರೀಡೆ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲೂ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಕಾಲೇಜಿಗೂ, ಪೋಷಕರಿಗೂ, ತಾಲೂಕಿಗೆ ಒಳ್ಳೆಯ ಹೆಸರು ತರಬೇಕೆಂದು ಅಮರಭಾರತಿ ವಿದ್ಯಾ ಕೇಂದ್ರ ಗೌರವ ಕಾರ್ಯದರ್ಶಿ ಟಿ.ಮಧು ಹೇಳಿದರು.

ತಾಲೂಕಿನ ಬಿಳಿಚೋಡು- ಮುಗ್ಗಿದರಾಗಿಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲಾ ಆವರಣದಲ್ಲಿ ಪದವಿಪೂರ್ವ ಕಾಲೇಜಗಳ ತಾಲೂಕುಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ನಾಲಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎಲ್ಲ ವಿಭಾಗದಲ್ಲಿ ಅತಿ ಹೆಚ್ಚು ಸ್ಥಾನ ವಿಜೇತರಾಗಿ ಸಮಗ್ರ ಪ್ರಶಸ್ತಿ ಪಡೆದ ಹಿನ್ನೆಲೆ ಕಾಲೇಜು ವತಿಯಿಂದ ವಿತೇತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ಕ್ರೀಡೆಯು ಮನುಷ್ಯನ ಆರೋಗ್ಯವನ್ನು ಸ್ಥಿರವಾಗಿಡಲು ನೆರವಾಗಲಿದೆ. ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರ್ತಿಸಲು ಸಹಕಾರಿಯಾಗಲಿದೆ. ಕಾಲೇಜಿನ ವಿದ್ಯಾರ್ಥಿಗಳು ಸಾಂಸ್ಕೃತಿಕ, ಪ್ರತಿಭಾ ಕಾರಂಜಿಗಳು, ಕ್ರೀಡಾ, ಶಿಕ್ಷಣ ಕ್ಷೇತ್ರದಲ್ಲೂ ಉತ್ತಮ ಸಾಧನೆ ಮೆರೆದು ಮುನ್ನಡೆಯಬೇಕೆಂದು ತಿಳಿಸಿದರು.

ನಾಲಂದ ಕಾಲೇಜಿನ ಪ್ರಾಂಶುಪಾಲ ಬಿ.ಎನ್.ಎಂ. ಸ್ವಾಮಿ ಮಾತನಾಡಿ, ಪಠ್ಯ ಪುಸ್ತಕಗಳ ಜೊತೆ ತಾಲೂಕು ಮಟ್ಟದ ಕ್ರೀಡೆಯ ಎಲ್ಲ ವಿಭಾಗದಲ್ಲಿ ಜಯಿಸುವ ಮೂಲಕ ಸಮಗ್ರ ಪ್ರಶಸ್ತಿ ಪಡೆದರುವ ಕ್ರೀಡಾ ವಿದ್ಯಾರ್ಥಿಗಳನ್ನು ಕಾಲೇಜು ಪರವಾಗಿ ಅಭಿನಂದಿಸಿದರು.

ಈ ಸಂದರ್ಭ ಕಾಲೇಜು ಆಡಳಿತ ಮಂಡಳಿ ಸದಸ್ಯ ಸಿ.ತಿಪ್ಪೇಸ್ವಾಮಿ, ಉಪನ್ಯಾಸಕರಾದ ಪರಮೇಶ್ವರಪ್ಪ, ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗೇಶ್, ಕ್ರೀಡಾ ಕಾರ್ಯದರ್ಶಿ ಕರಿಬಸಪ್ಪ, ಯೋಜನಾಧಿಕಾರಿ ನಿಂಗಪ್ಪ, ಬಸವರಾಜಯ್ಯ ಸೇರಿದಂತೆ ಕಾಲೇಜು ಆಡಳಿತ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- - - -26ಜೆ.ಜಿ.ಎಲ್.1:

ಜಗಳೂರು ತಾಲೂಕಿನ ಪದವಿಪೂರ್ವ ಕಾಲೇಜಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ನಾಲಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆದಿದ್ದು, ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.