ತಾಲೂಕು ಆಡಳಿತ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಮಿನಿ ವಿಧಾನ ಸೌಧ ಆವರಣದಲ್ಲಿ ನಡೆಯಿತು. ಬೆಳ್ತಂಗಡಿ ತಹಸೀಲ್ದಾರ್‌ ಎಸ್.ಎನ್. ನರಗುಂದ ಧ್ವಜರೋಹಣ ನೆರವೇರಿಸಿ, ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ನೆನಪಿಸಿದರು.

ಬೆಳ್ತಂಗಡಿ: ತಾಲೂಕು ಆಡಳಿತ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಮಿನಿ ವಿಧಾನ ಸೌಧ ಆವರಣದಲ್ಲಿ ನಡೆಯಿತು. ಬೆಳ್ತಂಗಡಿ ತಹಸೀಲ್ದಾರ್‌ ಎಸ್.ಎನ್. ನರಗುಂದ ಧ್ವಜರೋಹಣ ನೆರವೇರಿಸಿ, ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ನೆನಪಿಸಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಕಸಿತ ಭಾರತ ಕನಸು ಈಡೇರಲು ಎಲ್ಲರೂ ಒಟ್ಟಾಗಿ ಪ್ರಯತ್ನಿಸಬೇಕು. ದೇಶದ ಸ್ವಾತಂತ್ರ್ಯ ಹೋರಾಟಸ ಇತಿಹಾಸವನ್ನು ಅರಿತುಕೊಂಡು ಅವರನ್ನು ಅನುಸರಿಸಿ ದೇಶ ಕಟ್ಟುವ ಕಾರ್ಯವನ್ನು ಮಾಡೋ‌ಣ ಎಂದರು. ವಾಣಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಮೀನಾಕ್ಷಿ ಎನ್. ಸ್ವಾತಂತ್ರ್ಯಹೋರಾಟದ ಇತಿಹಾಸ ಹಾಗೂ ದೇಶದ ಇಂದಿನ ಬೆಳವಣಿಗೆಗಳನ್ನು ವಿವರಿಸಿದರು.ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ರವಿ ಬಿ.ಎಸ್., ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್‌ ಕೆ., ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ, ಮಾಜಿ ಸೈನಿಕ ಗೋಪಾಲಕೃಷ್ಣ ಕಾಂಚೋಡ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಜೋಸೆಫ್, ಅಬಕಾರಿ ಉಪ ನೀರಿಕ್ಷ ಲಕ್ಷ್ಮಣ ಉಪ್ಪಾರ, ಎಇಇ ಜರ್ನಾದನ, ಗ್ರಾಮೀಣ ಕುಡಿಯುವ ನೀರು ಮತ್ತು ನೖರ್ಮಲ್ಯ ಇಲಾಖೆ ಎಇಇ ತಿರುಪತಿ, ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕ ಚಂದ್ರಶೇಖರ್, ಅಗ್ನಿಶಾಮಕ ಠಾಣಾಧಿಕಾರಿ ವೆಂಕಟೇಶ್, ಪಶು ವೖದ್ಯಾಧಿಕಾರಿ ಆಡಳಿತ ಡಾ. ರವಿ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಧನಂಜಯ್, ಗೃಹ ರಕ್ಷಕ ದಳದ ಜಯಾನಂದ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಬೆಳ್ತಂಗಡಿ ಪೊಲೀಸ್ ಠಾಣೆ ಎಸ್‌ಐ ಸಿಕಂದರ್ ಪಾಶಾ ನೇತೃತ್ವದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ತಾಪಂ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್ ಎನ್. ಸ್ವಾಗತಿಸಿ, ಶಿಕ್ಷಕ ಧರ್ಮೇಂದ್ರ ಜೈನ್ ಹಾಗೂ ವಾರಿಜ ನಿರೂಪಿಸಿದರು, ಹಿಂದುಳಿದ‌ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ವಂದಿಸಿದರು.