ಮಡಿಕೇರಿ: ಪೊನ್ನಂಪೇಟೆ ತಾಲೂಕು ಆಡಳಿತದಿಂದ ಆಚರಿಸಿದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಭಾಗವಹಿಸಿದರು. ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಶಾಸಕರು, ನಮಗೆ ಸ್ವಾತಂತ್ರ್ಯ ಒದಗಿಸಿಕೊಟ್ಟ ಎಲ್ಲ ಮಹನೀಯರನ್ನು ಸ್ಮರಿಸುವುದು ನಮ್ಮ ಜವಾಬ್ದಾರಿ. ದೇಶದ ಭವಿಷ್ಯದ ಬಗ್ಗೆ ಚಿಂತಿಸುವ ಪ್ರಜೆಗಳಾಗಿ ನಾವು ರೂಪಗೊಂಡು ಸದೃಢ ಭಾರತ ನಿರ್ಮಿಸುವತ್ತ ನಮ್ಮ ಗಮನಹರಿಸಬೇಕು ಎಂದರು.
ಹಿರಿಯರ ಹೋರಾಟದಿಂದ ಭಾರತಕ್ಕೆ ದೊರಕಿದ ಸ್ವಾತಂತ್ರ್ಯವನ್ನು ನಮ್ಮ ಮುಂದಿನ ಪೀಳಿಗೆಗೆ ನೀಡುವ ಬಹು ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ತಾಲೂಕು ಬಗರ್ ಹುಕುಂ ಅಧ್ಯಕ್ಷ ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ಪೊನ್ನಂಪೇಟೆ ತಹಸೀಲ್ದಾರ್ ಸಂಜನಾ, ಇ.ಒ. ರಾಜೇಶ್, ಹಿರಿಯರಾದ ಮುಕಳೇರ ಕುಶಾಲಪ್ಪ, ಪಂಚಾಯಿತಿ ಅಧ್ಯಕ್ಷ ಹರೀಶ್, ಉಪಾಧ್ಯಕ್ಷ ರಶೀದ್, ಸದಸ್ಯರು, ಪಕ್ಷದ ಮುಖಂಡರು ಹಾಗೂ ಪ್ರಮುಖರು ಇದ್ದರು.