ಸಾರಾಂಶ
ಶಿವಮೊಗ್ಗ ಗುತ್ಯಪ್ಪ ಕಾಲೋನಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಪದಾಧಿಕಾರಿಗಳಿಗೆ ತಾಲೂಕು ಮಟ್ಟದ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಭದ್ರಾವತಿ
ಸಂವಿಧಾನ ಬದ್ಧವಾದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್‌ಡಿಎಂಸಿ)ಗಳ ಕರ್ತವ್ಯ ಮತ್ತು ಜವಾಬ್ದಾರಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ದೃಢವಾದ ನಿಲುವಿನೊಂದಿಗೆ ಪೂರಕವಾಗಿರಬೇಕೆಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ರಾಜ್ಯಾಧ್ಯಕ್ಷ ಉಮೇಶ್ ಜಿ.ಗಂಗವಾಡಿ ಹೇಳಿದರು.ಶಿವಮೊಗ್ಗ ಗುತ್ಯಪ್ಪ ಕಾಲೋನಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಪದಾಧಿಕಾರಿಗಳಿಗೆ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಶಾಲಾ ಹಂತದಲ್ಲಿ ಮೂಲಭೂತ ಮತ್ತು ಕಡ್ಡಾಯ ಶಿಕ್ಷಣದ ಅವಶ್ಯಕತೆ ಸರ್ಕಾರದ ಆದೇಶದಂತೆ ನೀಡಬೇಕು. ಈ ನಿಟ್ಟಿನಲ್ಲಿ ಎಸ್‌ಡಿಎಂಸಿ ಪಾತ್ರ ಹೆಚ್ಚಿನದ್ದಾಗಿದೆ ಎಂದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಎಸ್ ಪಾರ್ವತಿ ಮಾತನಾಡಿ, ಶಾಲೆಗಳ ಅಭಿವೃದ್ಧಿ ವಿಷಯದಲ್ಲಿ ಎಸ್‌ಡಿಎಂಸಿ ಸಹಕಾರವನ್ನು ಇಲಾಖೆಗಳ ಸಮನ್ವತೆಯಲ್ಲಿ ನಡೆಸಿಕೊಂಡು ಹೋಬೇಕೆಂದು ಸಲಹೆ ವ್ಯಕ್ತಪಡಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ರಮೇಶ್ ಮಾತನಾಡಿ, ಎಸ್‌ಡಿಎಂಸಿ ಬಲಿಷ್ಠವಾಗಿ ಕಾರ್ಯನಿರ್ವಹಿಸುವ ಮೂಲಕ ಅಭಿವೃದ್ಧಿಗೆ ಸಹಕರಿಸಿ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಮುಂದಾಗಬೇಕೆಂದರು.ತಾಲೂಕು ಸಮಿತಿ ಅಸ್ತಿತ್ವಕ್ಕೆ:
ನೂತನವಾಗಿ ತಾಲೂಕು ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಕೆ.ಟಿ ಸಂತೋಷ್, ಉಪಾಧ್ಯಕ್ಷರಾಗಿ ಎಂ.ಎಚ್ ಜಬಿಉಲ್ಲಾಖಾನ್, ಕಾರ್ಯದರ್ಶಿಯಾಗಿ ರಮ್ಯಾ, ಖಜಾಂಚಿಯಾಗಿ ರುದ್ರೇಶ್ ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ಚಂದ್ರಶೇಖರ್ ಆಯ್ಕೆಯಾದರು.ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಜಿಲ್ಲಾಧ್ಯಕ್ಷ ಆರ್. ವೀರಾಚಾರಿ, ಉಪಾಧ್ಯಕ್ಷ ಬಿ.ಪಿ ಸತೀಶ್, ಕಾರ್ಯದರ್ಶಿ ರಂಜಿತಾ, ಸಹಕಾರ್ಯದರ್ಶಿ ಶಶಿಕುಮಾರ್, ಶಾಲೆ ಮುಖ್ಯ ಶಿಕ್ಷಕಿ ರುಕ್ಮಿಣಿ, ಭದ್ರಾವತಿ ತಾಲೂಕು ಎಸ್‌ಡಿಎಂಸಿ ಸಮಿತಿ ಅಧ್ಯಕ್ಷ ಕಾಂತರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಅಮೀರ್ ಪಾಷ ಅಧ್ಯಕ್ಷತೆ ವಹಿಸಿದ್ದರು. ಸಹ ಶಿಕ್ಷಕಿ ಭಾಗಿರತಿ ಕಾರ್ಯಕ್ರಮ ನಿರೂಪಿಸಿದರು.