ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ ವಿರುದ್ಧ ಹೋರಾಟ: ಯದುವೀರ್ ಒಡೆಯರ್

| Published : Jun 18 2024, 12:45 AM IST

ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ ವಿರುದ್ಧ ಹೋರಾಟ: ಯದುವೀರ್ ಒಡೆಯರ್
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿ ಅಧಿಕಾರದ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಷಳದ ವಿರುದ್ಧ ಸಿದ್ದರಾಮಯ್ಯ ಹೋರಾಟ ಮಾಡಿದ್ದರು. ನಮ್ಮ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಕಡಿತ ಮಾಡಲಾಗಿತ್ತು.

ಕನ್ನಡಪ್ರಭ ವಾರ್ತೆ ಮೈಸೂರು

ರಾಜ್ಯ ಸರ್ಕಾರದ ಬೆಲೆ ಏರಿಕೆಯ ಜನ ವಿರೋಧಿ ನಿಲುವನ್ನು ಖಂಡಿಸಿ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಡನೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್‌ ಸರ್ಕಾರವು ಜನ ವಿರೋಧಿ ನಿಲುವನ್ನು ಹೊಂದಿದೆ. ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಬಿಜೆಪಿ ವತಿಯಿಂದ ಈಗಾಗಲೇ ಹೋರಾಟ ಆರಂಭಿಸಲಾಗಿದೆ. ಮಂಗಳವಾರ ಮೈಸೂರಿನಲ್ಲಿಯೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ರಾಜ್ಯ ಸರ್ಕಾರದ ಧೋರಣೆ ವಿರುದ್ಧ ನಮ್ಮ ಹೋರಾಟ ಮುಂದುವರೆಯುತ್ತದೆ. ರಾಜ್ಯದಲ್ಲಿ ಮುಂಗಾರು ವಿಫಲಗೊಂಡಿರುವ ಹಿನ್ನೆಲೆಯಲ್ಲಿ ಮೈಸೂರು ಮತ್ತು ಕೊಡಗು ಭಾಗದಲ್ಲಿ ಪ್ರವಾಸ ಆರಂಭಿಸಿದ್ದೇನೆ. ಇನ್ನಷ್ಟು ಪ್ರವಾಸ ಹಮ್ಮಿಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಅವರು ಹೇಳಿದರು.

ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ ಮಾತನಾಡಿ, ಬಿಜೆಪಿ ಅಧಿಕಾರದ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಷಳದ ವಿರುದ್ಧ ಸಿದ್ದರಾಮಯ್ಯ ಹೋರಾಟ ಮಾಡಿದ್ದರು. ನಮ್ಮ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಕಡಿತ ಮಾಡಲಾಗಿತ್ತು. ಆದರೆ ಈಗ ಕಾಂಗ್ರೆಸ್ ಸರ್ಕಾರ ತೆರಿಗೆ ಹೆಚ್ಚಿಸಿ ಸಾಮಾನ್ಯ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದರು. ಕಿತ್ತೋಗಿರುವ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಮಾಡಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ ಎಂದು ಅವರು ವಾಗ್ದಾಳಿ ನಡೆಸಿದರು.