ವಕ್ಫ್ ಕಾಯ್ದೆ ವಿರುದ್ಧ ಜಿಲ್ಲೆಯಲ್ಲಿ ಹೋರಾಟ: ಎನ್. ಮಹೇಶ್

| Published : Nov 21 2024, 01:04 AM IST

ವಕ್ಫ್ ಕಾಯ್ದೆ ವಿರುದ್ಧ ಜಿಲ್ಲೆಯಲ್ಲಿ ಹೋರಾಟ: ಎನ್. ಮಹೇಶ್
Share this Article
  • FB
  • TW
  • Linkdin
  • Email

ಸಾರಾಂಶ

ವಕ್ಫ್ ಕಾಯ್ದೆ ವಿರುದ್ಧ ನ. ೨೨ರಂದು ಜಿಲ್ಲಾ ಕೇಂದ್ರದಲ್ಲಿ ಧರಣಿ ನಡೆಸಲಾಗುವುದು. ಜಿಲ್ಲೆಯಲ್ಲೂ ವಕ್ಫ್ ಸಂಬಂಧಪಟ್ಟಂತೆ ಸಮಸ್ಯೆಗಳಿದ್ದರೆ ಮನವಿ ಸ್ಪೀಕರಿಸಲಾಗುವುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಹೇಳಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ವಕ್ಫ್ ಕಾಯ್ದೆ ವಿರುದ್ಧ ನ. ೨೨ರಂದು ಜಿಲ್ಲಾ ಕೇಂದ್ರದಲ್ಲಿ ಧರಣಿ ನಡೆಸಲಾಗುವುದು. ಜಿಲ್ಲೆಯಲ್ಲೂ ವಕ್ಫ್ ಸಂಬಂಧಪಟ್ಟಂತೆ ಸಮಸ್ಯೆಗಳಿದ್ದರೆ ಮನವಿ ಸ್ಪೀಕರಿಸಲಾಗುವುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಹೇಳಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ೧೯೯೫ ಮತ್ತು ೨೦೧೩ರ ವಕ್ಫ್ ಕಾಯ್ದೆ ತಿದ್ದುಪಡಿ ತರುವ ಸಂಬಂಧ ಪ್ರಕ್ರಿಯೆ ಆರಂಭಿಸಿದ ನಂತರ ರಾಜ್ಯದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಸೇರಿ ವಕ್ಫ್ ಬೋರ್ಡ್ ಹೆಸರಿನಲ್ಲಿ , ರೈತರು, ಮಠಮಂದಿರಗಳು, ಶಾಲೆಗಳು ಸೇರಿದಂತೆ ಸಾವಿರಾರು ಜನರಿಗೆ ನಿಮ್ಮ ಆಸ್ತಿ ವಕ್ಫ್ ಬೋರ್ಡ್‌ಗೆ ಸೇರಿದ್ದು ಎಂದು ನೋಟಿಸ್ ನೀಡುವ ಮೂಲಕ ರಾಜ್ಯದಲ್ಲಿ ಆತಂಕ ಮೂಡಿಸಿದ್ದಾರೆ ಎಂದರು.ಯಾವ ನ್ಯಾಯಾಲದಲ್ಲೂ ಪ್ರಶ್ನಿಸಿದೆ ಇರುವ ವಕ್ಫ್ ಕಾಯ್ದೆ ವಿರುದ್ದ ಪ್ರತಿಪಕ್ಷ ಬಿಜೆಪಿ ಮಾತನಾಡಿದರೆ ಮುಖ್ಯಮಂತ್ರಿಗಳು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎನ್ನುತ್ತಾರೆ. ಸಂವಿಧಾನ ವಿರೋಧಿಯಾಗಿರುವ ವಕ್ಫ್ ಕಾಯ್ದೆ ಪರವಾಗಿರುವ ಕಾಂಗ್ರೆಸ್‌ ನಿಜವಾಗಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.ನ. ೨೧ ಮತ್ತು ೨೨ ರಂದು ರಾಜ್ಯಾದ್ಯಂತ ಬಿಜೆಪಿಯಿಂದ ಈ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಹಸೀಲ್ದಾರ್ ಕಚೇರಿಗಳ ಮುಂದೆ ಹೋರಾಟ ನಡೆಸಲಾಗುವುದು. ಅಲ್ಲದೇ, ಅಹವಾಲು ಸ್ವೀಕಾರ ಮಾಡಲಾಗುವುದು. ಸಾರ್ವಜನಿಕ ಆಸ್ತಿಗಳ ಕುರಿತು ಅಹವಾಲು ಸ್ವೀಕರಿಸುತ್ತೇವೆ. ಸಮಸ್ಯೆಯ ಗಂಭೀರತೆಯನ್ನು ಜಿಲ್ಲಾವಾರು ಪರಾಮರ್ಶೆ ಮಾಡುತ್ತೇವೆ ಎಂದರು.

೩ ತಂಡಗಳನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಈಗಾಗಲೇ ಪ್ರಕಟಿಸಿದ್ದಾರೆ. ಅವರ ನೇತೃತ್ವದ ಒಂದು ತಂಡ, ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ತಂಡಗಳು ಕಾರ್ಯನಿರ್ವಹಿಸುತ್ತವೆ. ಈ ಮೂರು ತಂಡಗಳು ಡಿಸೆಂಬರ್ ಮೊದಲ ವಾರದಿಂದ ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ. ರೈತರು, ಮಠಮಾನ್ಯಗಳು ಮತ್ತು ಸಾರ್ವಜನಿಕರ ಸಮಸ್ಯೆಯನ್ನು ಆಲಿಸಲಿದೆ. ಅವರ ಸಮಸ್ಯೆಯನ್ನು ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ ಹಾಗೂ ನೈಜ ವರದಿಯನ್ನು ಸದನದಲ್ಲಿ ಚರ್ಚಿಸುತ್ತೇವೆ ಎಂದರು,ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಹಾಗೂ ಪ್ರಮುಖ ರಾಜ್ಯ ನಾಯಕರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಪ್ರತಿ ತಂಡವು ಕನಿಷ್ಟ ೮-೧೦ ಜಿಲ್ಲೆಗಳನ್ನು ಪ್ರವಾಸ ಮಾಡಲಿದ್ದು, ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು. ಕಾನೂನಾತ್ಮಕ ಹೋರಾಟಕ್ಕೆ ಶಕ್ತಿ ತುಂಬುವ ಸಲುವಾಗಿ ಈ ತಂಡ ರಚಿಸಲಾಗಿದೆ. ನಮ್ಮ ಭೂಮಿ- ನಮ್ಮ ಹಕ್ಕು ಶೀರ್ಷಿಕೆಯ ಅಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಮಠಾಧೀಶರೂ ಸೇರಿದಂತೆ ಜಿಲ್ಲೆಯ ಪ್ರಮುಖ ವ್ಯಕ್ತಿಗಳನ್ನು ಒಳಗೊಂಡಂತೆ ಎಲ್ಲರನ್ನೂ ಭೇಟಿ ಮಾಡುವುದರ ಮೂಲಕ ಜನಜಾಗೃತಿ ಮೂಡಿಸುತ್ತಿದ್ದೇವೆ. ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ನಾವು ಕಾರ್ಯಕ್ರಮವನ್ನು ರೂಪಿಸಿದ್ದೇವೆ. ನೋಟಿಸ್ ಹಿಂಪಡೆಯುವಂತೆ ಮುಖ್ಯಮಂತಿಗಳು ಹೇಳಿದ್ದು ಕೇವಲ ಮಹಾರಾಷ್ಟ್ರ ಮತ್ತು ಜಾಖಂಡ್ ಚುನಾವಣೆಯ ಕಣ್ಣೂರೆಸುವ ತಂತ್ರ, ರೈತರ ಕುರಿತು ಕಾಂಗ್ರೆಸ್ಸಿನದು ಮೊಸಳೆ ಎಂದರು.ಗ್ಯಾರಂಟಿಗಳಿಗೆ ಹಣ ಒದಗಿಸಲಾಗಿದೆ. ಈಗ ಬಿಪಿಎಲ್ ಹೆಸರಿನಲ್ಲಿ ೨೪ ಲಕ್ಷ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲು ಹೊರಟಿದ್ದು, ಬಡವರ ವಿರೋಧಿ ನೀತಿಯನ್ನು ಸರ್ಕಾರ ಅನುಸರಿಸುತ್ತಿದ್ದು, ಇದರ ವಿರುದ್ದ ನಾವು ಹೋರಾಟಕ್ಕಿಳಿಯುತ್ತೇವೆ ಎಂದರು.

ಜಿಲ್ಲಾ ಪ್ರದಾನಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಎಂ.ರಾಮಚಂದ್ರ, ನೂರೊಂದುಶೆಟ್ಟಿ, ಎಸ್. ಬಾಲರಾಜು, ಕಾಡಹಳ್ಳಿ ಕುಮಾರ್, ವೀರೇಂದ್ರ ಇದ್ದರು.