ಸಾರಾಂಶ
ನೌಕರರು ಸರ್ಕಾರದಿಂದ 7ನೇ ವೇತನ ಆಯೋಗ ರಚನೆ ಮಾಡಬೇಕು ಹಾಗೂ ಎನ್‌ಪಿಎಸ್ ಪಂಚಣಿ ಪದ್ಧತಿ ರದ್ದುಗೊಳಿಸಬೇಕೆಂದು ಒತ್ತಾಯ ಮಾಡಿದ್ದೀರಾ. ಮುಂದಿನ ದಿನಗಳಲ್ಲಿ ಎರಡು ಸಮಸ್ಯೆಯನ್ನು ಬಗೆಹರಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ. ಸರ್ಕಾರಿ ನೌಕರರು ಒತ್ತಡದಲ್ಲಿ ಬದುಕು ನಡೆಸುತ್ತಾರೆ. ನೌಕರರು ಒತ್ತಡ ಕಡಿಮೆ ಮಾಡಿಕೊಳ್ಳಲು ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.
ಕನ್ನಡಪ್ರಭ ವಾರ್ತೆ ಪಾಂಡವಪುರ
ಸರ್ಕಾರಿ ನೌಕರರ 7ನೇ ವೇತನ ಆಯೋಗ ರಚನೆ ಹಾಗೂ ಎನ್ ಪಿಎಸ್ ರದ್ದು ಮಾಡುವಂತೆ ನೌಕರರ ಪರ ಹೋರಾಟ ನಡೆಸುತ್ತೇನೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ ನೀಡಿದರು.ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ನೌಕರರು ಸರ್ಕಾರದಿಂದ 7ನೇ ವೇತನ ಆಯೋಗ ರಚನೆ ಮಾಡಬೇಕು ಹಾಗೂ ಎನ್‌ಪಿಎಸ್ ಪಂಚಣಿ ಪದ್ಧತಿ ರದ್ದುಗೊಳಿಸಬೇಕೆಂದು ಒತ್ತಾಯ ಮಾಡಿದ್ದೀರಾ. ಮುಂದಿನ ದಿನಗಳಲ್ಲಿ ಎರಡು ಸಮಸ್ಯೆಯನ್ನು ಬಗೆಹರಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು.
ಸರ್ಕಾರಿ ನೌಕರರು ಒತ್ತಡದಲ್ಲಿ ಬದುಕು ನಡೆಸುತ್ತಾರೆ. ನೌಕರರು ಒತ್ತಡ ಕಡಿಮೆ ಮಾಡಿಕೊಳ್ಳಲು ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.ನೌಕರರ ಸಂಘದ ಅಧ್ಯಕ್ಷ ಡಾ.ಸಿ.ಎ.ಅರವಿಂದ್ ಮಾತನಾಡಿ, ಶಾಸಕರು ನೌಕರರು ಬೇಡಿಕೆ ಈಡೇರಿಸಲು ಆಶ್ವಾಸನೆ ನೀಡಿದ್ದಾರೆ. ಕ್ರೀಡೆ ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.
ಬಿಇಒ ಚಂದ್ರಶೇಖರ್ ಮಾತನಾಡಿ, ರಾಜ್ಯದಲ್ಲಿ 2.50 ಲಕ್ಷ ಸರ್ಕಾರಿ ನೌಕರರ ಹುದ್ದೆ ಖಾಲಿ ಇದ್ದು ಖಾಲಿ ಇರುವ ನೌಕರರ ಕೆಲಸವನ್ನು ಹಾಲಿ ಇರುವ ನೌಕರರೇ ಒತ್ತಡದಲ್ಲಿ ನಿಭಾಯಿಸುತ್ತಿದ್ದಾರೆ ಎಂದರು.ಬಹುತೇಕ ನೌಕರರು ಓದಿಗೂ ಕೆಲಸ ಮಾಡುತ್ತಿರುವ ಕೆಲಸಕ್ಕೂ ಯಾವುದೇ ಸಂಬಂಧವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ನೌಕರರಲೂ ಸಾಕಷ್ಟು ಪ್ರತಿಭೆ, ಕ್ರೀಡಾಪಟುಗಳಿದ್ದಾರೆ. ಅವರನ್ನು ಗುರುತಿಸುವ ಕೆಲಸವನ್ನು ಇಂತಹ ವೇದಿಕೆ ಮಾಡುತ್ತಿದೆ ಎಂದರು.
ಈ ವೇಳೆ ತಹಸೀಲ್ದಾರ್ ಶ್ರೇಯಸ್, ಮಂಜುನಾಥ್, ಕೇಶವಮೂರ್ತಿ, ಯುವರಾಜು, ವರುಣ್, ವಿಜಯ್‌ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.