ಸಾರಾಂಶ
ತಾಲೂಕು ಕಚೇರಿ ಆವರಣದಲ್ಲಿ ನಡೆಸುತ್ತಿರುವ 2ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿ
ಕನ್ನಡಪ್ರಭ ವಾರ್ತೆ, ಕಡೂರುಮೂಲಭೂತ ಸೌಕರ್ಯಗಳ ಜೊತೆ ಅನೇಕ ಬೇಡಿಕೆಗಳ ಈಡೇರಿಸದಿದ್ದರೆ ರಾಜ್ಯಾದ್ಯಂತ ನಡೆಯುತ್ತಿರುವ ಗ್ರಾಮ ಆಡಳಿತಾಧಿಕಾರಿಗಳ ಹೋರಾಟ ಮುಂದುವರಿಯಲಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಯೋಗೀಶ್ ನಾಯ್ಕ ತಿಳಿಸಿದರು.
ಗ್ರಾಮ ಆಡಳಿತ ಅಧಿಕಾರಿಗಳು ತಾಲೂಕು ಕಚೇರಿ ಆವರಣದಲ್ಲಿ ನಡೆಸುತ್ತಿರುವ 2ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ನಮ್ಮ ನ್ಯಾಯಯುತ ಬೇಡಿಕೆ ಬಗ್ಗೆ ಸರ್ಕಾರ ಪರಿಗಣಿಸಬೇಕು. ಹಿಂದಿನ ಮುಷ್ಕರದಲ್ಲಿ ಬೇಡಿಕೆಗಳ ಈಡೇರಿಸುವ ಬಗ್ಗೆ ಸರ್ಕಾರ ನೀಡಿದ್ದ ಭರವಸೆ ಈಡೇರಿಲ್ಲ. ನಮ್ಮ ಹಕ್ಕುಗಳನ್ನು ನಾವುಗಳು ಕೇಳುತ್ತಿದ್ದು. ಕೂಡಲೇ ಬಗೆಹರಿಸಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.ಜಿ.ಪಂ ಮಾಜಿ ಸದಸ್ಯ ಶರತ್ ಕೃಷ್ಣಮೂರ್ತಿ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಸಾರ್ವಜನಿಕರ ಕೆಲಸ ಕಾರ್ಯಗಳ ಮೇಲೆ ಪರಿಣಾಮ ಬೀರುತ್ತಿದೆ. ಕಂದಾಯ ಇಲಾಖೆ ವ್ಯಾಪ್ತಿ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸುವ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆ ಬಗ್ಗೆ ಸರಕಾರವು ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಬೆಂಬಲಿಸಿದ ಕರ್ನಾಟಕ ಬ್ಲ್ಯೂ ಆರ್ಮಿ ಸಂಘಟನೆ ರಾಜ್ಯಾಧ್ಯಕ್ಷ ಶೂದ್ರ ಶ್ರೀನಿವಾಸ್ ಮಾತನಾಡಿ. ನೌಕರರಿಗೆ ಸುಸಜ್ಜಿತ ಕಚೇರಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳು ಕಲ್ಪಿಸಿಕೊಡದೆ ಸಮಸ್ಯೆ ಉಂಟಾಗುತ್ತಿದೆ. ಅಂತರ ಜಿಲ್ಲಾ ವರ್ಗಾವಣೆಗೆ ಹೊಸ ಮಾರ್ಗಸೂಚಿ ರಚನೆ ಸೇರಿ ಅನೇಕ ಬೇಡಿಕೆಗಳನ್ನು ರಾಜ್ಯ ಸರಕಾರ ಕೂಡಲೇ ಬಗೆಹರಿಸಿಕೊಡಬೇಕು ಎಂದರು.ಗ್ರಾಮಾಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಎಸ್.ಕೆ. ರವೀಂದ್ರ ಮಾತನಾಡಿ, ನಮ್ಮ ಹಕ್ಕುಗಳ ನ್ಯಾಯಸಮ್ಮತ ಬೇಡಿಕೆಗೆ ರೈತ ಸಂಘಟನೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸುತ್ತಿದೆ. ಸರಕಾರದ ಸ್ಪಂದನೆ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ. ಕೂಡಲೇ ರಾಜ್ಯ ಸರಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.ಗ್ರಾಮಾಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಆರ್. ಹನುಮಂತಪ್ಪ, ಜಿಲ್ಲಾ ಪ್ರಧಾನ ಸಂಚಾಲಕ ಸಿದ್ದಪ್ಪ, ಲಿಂಗರಾಜು, ಶೃತಿ, ಸಂತೋಷ್ ಕುಮಾರ್, ಬಿ.ಎಂ.ಕುಮಾರ್, ರಮೇಶ್, ತೇಜಸ್, ಸುಮಾ, ರಂಜಿತಾ ಮತ್ತಿತರಿದ್ದರು.16ಕೆಕೆಡಿಯು1.ಕಡೂರು ತಾಲೂಕು ಕಚೇರಿ ಆವರಣದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ನಡೆಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳ 6ನೇ ಮುಷ್ಕರಕ್ಕೆ ಸಂಘದ ರಾಜ್ಯಾಧ್ಯಕ್ಷ ಯೋಗೀಶ್ ನಾಯ್ಕ್ ಭಾಗವಹಿಸಿದ್ದರು. ಎಸ್.ಕೆ. ರವೀಂದ್ರ, ಹನುಮಂತಪ್ಪ, ಜಿ.ಪಂ ಮಾಜಿ ಸದಸ್ಯ ಶರತ್ ಕೃಷ್ಣಮೂರ್ತಿ, ಸಂತೋಷ್‍ಕುಮಾರ್, ರಮೇಶ್ ಮತ್ತಿತರಿದ್ದರು.