ಸಾರಾಂಶ
ಹಾವೇರಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಬೇಸರಗೊಂಡು ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದ ತಾಂಡಾದ ವಿದ್ಯಾರ್ಥಿನಿಯೊಬ್ಬಳು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಾವ್ಯ ಬಸಪ್ಪ ಲಮಾಣಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕಾವ್ಯ ನಾಲ್ಕು ವಿಷಯದಲ್ಲಿ ಫೇಲ್ ಆಗಿದ್ದಳು. ಇದರಿಂದ ಬೇಸರಗೊಂಡು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಾಲಬಾಧೆ: ದಂಪತಿ ಆತ್ಮಹತ್ಯೆರಾಣಿಬೆನ್ನೂರು: ಸಾಲಬಾಧೆ ತಾಳಲಾರದೇ ಗಂಡ -ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತಾಲೂಕಿನ ಕರೂರ ಗ್ರಾಮದಲ್ಲಿ ಸೋಮವಾರ ನಡೆದಿದೆ.ಗ್ರಾಮದ ಗುಡಪ್ಪ ಮಡಿವಾಳರ(32) ಹಾಗೂ ಪತ್ನಿ ಸೌಮ್ಯ ಮಡಿವಾಳರ(25) ಆತ್ಮಹತ್ಯೆಗೆ ಶರಣಾದ ದಂಪತಿ.ಖಾಸಗಿ ಸೊಸೈಟಿಯಲ್ಲಿ ₹2 ಲಕ್ಷ ಸಾಲ ಮಾಡಿದ್ದರು. ಸಾಲ ತೀರಿಸುವ ಚಿಂತೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕುಮಾರಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ.
ರಥದ ಗಾಲಿಗೆ ಸಿಲುಕಿ ವ್ಯಕ್ತಿಗೆ ಗಾಯರಟ್ಟೀಹಳ್ಳಿ: ಪಟ್ಟಣದ ಕ್ಷೇತ್ರನಾಥ ವೀರಭದ್ರೇಶ್ವರ ದೊಡ್ಡ ರಥೋತ್ಸವ ವೇಳೆ ತೇರಿನ ಗಾಲಿಗೆ ಸಿಲುಕಿ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಬಾಗಲಕೋಟೆ ಮೂಲದ ವಿಕಾಸ (36) ಗಾಯಗೊಂಡ ವ್ಯಕ್ತಿ. ಪಟ್ಟಣದ ಹಳೇ ಪೊಲೀಸ್ ಠಾಣೆ ಹತ್ತಿರ ಬೆಳಗ್ಗೆ 7.30ರ ಸುಮಾರಿಗೆ ರಥೋತ್ಸವ ಬರುವ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿತ್ತು. ಆಗ ವಿಕಾಸ ಎಂಬವರು ರಥದ ಗಾಲಿಗೆ ಕಾಲು ಸಿಲುಕಿದೆ. ಪರಿಣಾಮ ಬಲಗಾಲಿನ ಎಲ್ಲ ಬೆರಳುಗಳು ತುಂಡಾಗಿವೆ. ಕೂಡಲೇ ಅವರನ್ನು ಸ್ಥಳೀಯರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ಕರೆದೊಯ್ಯಲಾಗಿದೆ.