ಸಾರಾಂಶ
ರಬಕವಿ-ಬನಹಟ್ಟಿ: ಮನೆಯಿಂದ ಸೈಕಲ್ ಮೇಲೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಟ್ರ್ಯಾಕ್ಟರ್ ಹಾಯ್ದು ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾದ ಮಾರ್ಗಮಧ್ಯೆ ಮೃತಪಟ್ಟ ಘಟನೆ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಟ್ಟಿಯಲ್ಲಿ ಮಂಗಳವಾರ ನಡೆದಿದೆ. ಯಲ್ಲಟ್ಟಿ ಗ್ರಾಮದ ವಿದ್ಯಾರ್ಥಿನಿ ಸಂಸ್ಕೃತಿ ಭಜಂತ್ರಿ (೧೩) ಮೃತ ಬಾಲಕಿ. ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ
ಮನೆಯಿಂದ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಟ್ರ್ಯಾಕ್ಟರ್ ಹಾಯ್ದು ಮೃತಪಟ್ಟ ಘಟನೆ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಟ್ಟಿಯಲ್ಲಿ ಮಂಗಳವಾರ ನಡೆದಿದೆ. ಯಲ್ಲಟ್ಟಿ ಗ್ರಾಮದ ವಿದ್ಯಾರ್ಥಿನಿ ಸಂಸ್ಕೃತಿ ಭಜಂತ್ರಿ (೧೩) ಮೃತ ವಿದ್ಯಾರ್ಥಿ. ಗ್ರಾಮದ ರಾಣಿ ಚನ್ನಮ್ಮ ವೃತ್ತದ ಬಳಿ ಬೆಳಗ್ಗೆ ೯.೩೦ರ ಸುಮಾರಿಗೆ ಶಾಲೆಗೆ ಸೈಕಲ್ ಮೇಲೆ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ತಲೆಗೆ ಭಾರಿ ಪೆಟ್ಟಾಗಿದೆ. ಚಿಕಿತ್ಸೆಗೆಂದು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗಿದೆ ಕೊನೆಯುಸಿರೆಳೆದಿದ್ದಾಳೆ.ತಕ್ಷಣ ಟ್ರ್ಯಾಕ್ಟರ್ ಚಾಲಕ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಒದಗಿಸಿದ್ದಾನೆ. ಆದಾಗ್ಯೂ ತೀವ್ರ ರಕ್ತಸ್ರಾವದಿಂದ ಬಾಲಕಿ ಮೃತಪಟ್ಟಿದ್ದಾಳೆ. ಈ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.