ಸಾರಾಂಶ
ವಿದ್ಯಾರ್ಥಿಗಳು ಬೆಟ್ಟದ ಮೇಲಿರುವ ಕೊಳದಲ್ಲಿ ಸ್ನಾನ ಮಾಡಲು ಹೋದಾಗ ಓರ್ವ ವಿದ್ಯಾರ್ಥಿ ನೀರಿನಲ್ಲಿ ಮುಳುಗುತ್ತಿದ್ದಾಗ ರಕ್ಷಣೆ ಮಾಡಲು ಹೋದ ಶ್ರೇಯಸ್ ನೀರಿನಲ್ಲಿ ಮುಳುಗಿದ್ದಾನೆ. ನೀರಿನಲ್ಲಿ ಮುಳುಗುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕನಕಪುರ: ಸ್ನಾನ ಮಾಡಲು ಹೋಗಿ ಯುವಕ ನೀರು ಪಾಲಾಗಿರುವ ಘಟನೆ ಕಬ್ಬಾಳು ಬೆಟ್ಟದ ಕೊಳದಲ್ಲಿ ನಡೆದಿದೆ. ಬೆಂಗಳೂರು ಮೂಲದ ಶ್ರೇಯಸ್ (18) ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ವಿದ್ಯಾರ್ಥಿ. ತಾಲೂಕಿನ ಸಾತನೂರು ಹೋಬಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಬ್ಬಾಳು ಕ್ಷೇತ್ರದ ಬಳಿ ಇರುವ ಕಬ್ಬಾಳು ಬೆಟ್ಟಕ್ಕೆ ಬೆಂಗಳೂರು ಮೂಲದ ಐವರು ವಿದ್ಯಾರ್ಥಿಗಳು ಶುಕ್ರವಾರ ತೆರಳಿದ್ದರು. ವಿದ್ಯಾರ್ಥಿಗಳು ಬೆಟ್ಟದ ಮೇಲಿರುವ ಕೊಳದಲ್ಲಿ ಸ್ನಾನ ಮಾಡಲು ಹೋದಾಗ ಓರ್ವ ವಿದ್ಯಾರ್ಥಿ ನೀರಿನಲ್ಲಿ ಮುಳುಗುತ್ತಿದ್ದಾಗ ರಕ್ಷಣೆ ಮಾಡಲು ಹೋದ ಶ್ರೇಯಸ್ ನೀರಿನಲ್ಲಿ ಮುಳುಗಿದ್ದಾನೆ. ನೀರಿನಲ್ಲಿ ಮುಳುಗುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತಕ್ಷಣ ಸಾತನೂರು ಪೊಲೀಸರು, ಅಗ್ನಿಶಾಮಕದಳ ಸ್ಥಳಕ್ಕೆ ಭೇಟಿ ನೀಡಿ ನೀರಿನಲ್ಲಿ ಮುಳುಗಿರುವ ವಿದ್ಯಾರ್ಥಿ ಮೃತ ದೇಹ ಮೇಲೆತ್ತಲು ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಮೃತ ದೇಹ ಪತ್ತೆಯಾಗಿಲ್ಲ, ಕಾರ್ಯಾಚರಣೆ ಶನಿವಾರ ಮುಂದುವರಿಯಲಿದ್ದು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.