ಬಸ್‌ನಿಂದ ಬಿದ್ದು ವಿದ್ಯಾರ್ಥಿ ಸಾವು

| Published : Aug 22 2024, 12:50 AM IST

ಸಾರಾಂಶ

ಬಸ್‌ನಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ನಿಟ್ಟೆಯಲ್ಲಿ ನಡೆದಿದೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಬಸ್‌ನಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಬುಧವಾರ ನಿಟ್ಟೆಯಲ್ಲಿ ನಡೆದಿದೆ.ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿ. ಈತ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಬೆಳಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದಿದ್ದು ಆತನ ಮೈ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದಿರುತ್ತದೆ. ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ತಕ್ಷಣವೇ ಗಾಜಿಯಾ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜನಿತ್ ಕೊನೆಯುಸಿರೆಳೆದಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.