ಸಾರಾಂಶ
ಈತ ತನ್ನ ಐವರು ಸ್ನೇಹಿತರ ಜೊತೆ ಕೆ.ಆರ್.ಎಸ್ ಸಮೀಪದ ಹುಲಿಕರೆ ಗ್ರಾಮದ ಬಳಿಯ ವರುಣಾ ನಾಲೆಯಲ್ಲಿ ಈಜಲು ತೆರಳಿದ್ದ ವೇಳೆ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ.
ಶ್ರೀರಂಗಪಟ್ಟಣ: ಈಜಲು ಹೋದ ಪದವಿ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ತಾಲೂಕಿನ ಹುಲಿಕೆರೆ ಗ್ರಾಮದ ಬಳಿಯ ವರುಣಾ ನಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ನಾಪತ್ತೆಯಾದವನು ಮೈಸೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ಪದವಿ ವ್ಯಾಸಂಗ ಮಾಡುತ್ತಿದ್ದ ಚಂದನ್ (19) ಎಂದು ತಿಳಿದು ಬಂದಿದೆ. ಈತ ತನ್ನ ಐವರು ಸ್ನೇಹಿತರ ಜೊತೆ ಕೆ.ಆರ್.ಎಸ್ ಸಮೀಪದ ಹುಲಿಕರೆ ಗ್ರಾಮದ ಬಳಿಯ ವರುಣಾ ನಾಲೆಯಲ್ಲಿ ಈಜಲು ತೆರಳಿದ್ದ ವೇಳೆ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಈ ಸಂಬಂಧ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಯುವಕನ ಪತ್ತೆ ಕಾರ್ಯ ಕೈಗೊಂಡಿದ್ದಾರೆ.