ಸಾರಾಂಶ
ಶಿಕ್ಷಣದ ಜೊತೆಗೆ ಮಾನವೀಯ ಮತ್ತು ನೈತಿಕ ಮೌಲ್ಯಗಳನ್ನು ಅರಿತು ಮುನ್ನಡೆಯುವ ಕಾಲಘಟ್ಟವೇ ವಿದ್ಯಾರ್ಥಿ ಜೀವನ ಎಂದು ಅಂತಾರಾಷ್ಟ್ರೀಯ ಜಾನಪದ ಗಾಯಕ ಹಾಗೂ ರಂಗವಾಹಿನಿ ಸಂಸ್ಥೆ ಅಧ್ಯಕ್ಷ ಸಿ.ಎಂ. ನರಸಿಂಹಮೂರ್ತಿ ಹೇಳಿದರು. ಚಾಮರಾನಗರದಲ್ಲಿ ಪ್ರತಿಭಾನ್ವೇಷಣಾ ದಿನಾಚರಣೆ 2024-25 ಕಾರ್ಯಕ್ರಮದಲ್ಲಿ ಮಾತನಾಡಿದರು.
ಚಾಮರಾಜನಗರ: ಶಿಕ್ಷಣದ ಜೊತೆಗೆ ಮಾನವೀಯ ಮತ್ತು ನೈತಿಕ ಮೌಲ್ಯಗಳನ್ನು ಅರಿತು ಮುನ್ನಡೆಯುವ ಕಾಲಘಟ್ಟವೇ ವಿದ್ಯಾರ್ಥಿ ಜೀವನ ಎಂದು ಅಂತಾರಾಷ್ಟ್ರೀಯ ಜಾನಪದ ಗಾಯಕ ಹಾಗೂ ರಂಗವಾಹಿನಿ ಸಂಸ್ಥೆ ಅಧ್ಯಕ್ಷ ಸಿ.ಎಂ. ನರಸಿಂಹಮೂರ್ತಿ ಹೇಳಿದರು.
ಮಂಗಳವಾರ ಜೆಎಸ್ಎಸ್ ಮಹಿಳಾ ಕಾಲೇಜಿನ ಪ್ರತಿಭಾನ್ವೇಷಣಾ ದಿನಾಚರಣೆ 2024-25 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಓದು ಬಹಳ ಮುಖ್ಯ ಓದಿನ ಜೊತೆಗೆ ಕಲೆ ಸಾಹಿತ್ಯ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ ಸಮಾಜಕ್ಕೆ ಮಾದರಿಯಾಗಿ ಬದುಕಬೇಕೆಂಬ ಛಲ ವಿದ್ಯಾರ್ಥಿಗಳಲ್ಲಿ ಬಲವಾಗಿ ಬೇರೂರಿರಬೇಕು. ವಿದ್ಯಾರ್ಥಿ ಜೀವನದ ಮಹತ್ವವನ್ನು ಅರಿತು ಮುನ್ನಡೆದರೆ ಉತ್ತಮ ಭವಿಷ್ಯ ರೂಪುಗೊಂಡು ಸಾಧನೆಯ ಶಿಖರ ಏರುವುದು ನಿಶ್ಚಿತ ಎಂದರು.ಮುಖ್ಯ ಅತಿಥಿಗಳಾಗಿ ಮಾತನಾಡಿದ ಹಿರಿಯ ವಕೀಲ ಆರ್. ವಿರೂಪಾಕ್ಷ ಡಾ.ಬಿ.ಆರ್. ಅಂಬೇಡ್ಕರ್ ಬರೆದಿರುವ ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠವಾಗಿದೆ ಎಂದರು. ಜೆಎಸ್ಎಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಎಂ ಮಹಾದೇವಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ. ಬಸವರಾಜು, ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಆರ್.ಎಂ.ಸ್ವಾಮಿ, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಜಮುನಾ, ಉಪನ್ಯಾಸಕಿ ಸುಷ್ಮಾ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷೆ ಕೃತಿಕಾ, ಕಾರ್ಯದರ್ಶಿ ಜ್ಯೋತಿ, ನಿತ್ಯಶ್ರೀ ಉಪಸ್ಥಿತರಿದ್ದರು.
;Resize=(128,128))
;Resize=(128,128))