ವಿದ್ಯಾರ್ಥಿ ಮನೋಜ್‌ಗೆ ಸನ್ಮಾನ

| Published : Nov 19 2025, 01:30 AM IST

ಸಾರಾಂಶ

ಕ್ರೀಡೆಯಲ್ಲಿ ಸಾಧಿಸಿದ ಸಾಧನೆಗಾಗಿ ತಿತಿಮತಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಮನೋಜ್‌ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಪೊನ್ನಂಪೇಟೆ: ಕ್ರೀಡೆಯಲ್ಲಿ ಸಾಧಿಸಿದ ಸಾಧನೆಗಾಗಿ ತಿತಿಮತಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಜೆ.ಎಂ. ಮನೋಜ್ ಅವರನ್ನು ಸರ್ಕಾರದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.14 ವರ್ಷದೊಳಗಿನ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಸಾಧನೆಗಾಗಿ ಮನೋಜ್ ಅವರನ್ನು ಬಿರ್ಸಾ ಮುಂಡ ರವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಹ್ವಾನಿಸಿ ಸನ್ಮಾನಿಸಲಾಯಿತು.

ಹಾಡಿಯಲ್ಲಿ ಹುಟ್ಟಿ ಬೆಳೆದು, ಇದೀಗ ತಿತಿಮತಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮನೋಜ್ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದ ಹಿನ್ನೆಲೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಯೋಗೇಶ್ ಅವರು ಸರ್ಕಾರದ ಪರವಾಗಿ ಸನ್ಮಾನಿಸಿ ಅಭಿನಂದಿಸಿದರು.