ಸಾರಾಂಶ
ಗುಬ್ಬಿ: ಕೊಪ್ಪ ಗ್ರಾಮದ ಶಾಲಾ ಕಾಲೇಜು ವಿದ್ಯಾರ್ಥಿಗಳು ಕೆಎಸ್ಆರ್‌ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದರು.
-ಕೊಪ್ಪ ಗ್ರಾಮದ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಗುಬ್ಬಿ: ಕೊಪ್ಪ ಗ್ರಾಮದ ಶಾಲಾ ಕಾಲೇಜು ವಿದ್ಯಾರ್ಥಿಗಳು ಕೆಎಸ್ಆರ್‌ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದರು.ವಿದ್ಯಾರ್ಥಿನಿ ಶೈಲಾ ಮಾತನಾಡಿ, ಈ ಭಾಗದ ವಿದ್ಯಾರ್ಥಿಗಳಿಗೆ ಬಸ್ ಬರದೆ ಶಾಲಾ-ಕಾಲೇಜಿಗೆ ಹೋಗಲು ಅನಾನುಕೂಲ ಉಂಟಾಗಿದೆ. ಪ್ರತಭಟನಾ ಸ್ಥಳಕ್ಕೆ ಅಧಿಕಾರಿಗಳು ಬರುವವರೆಗೂ ಬಸ್ ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.
ವಿದ್ಯಾರ್ಥಿನಿ ತನುಜ ಮಾತನಾಡಿ, ತಾಲೂಕಿನ ಜೀವನ ಹಳ್ಳಿ ಬಳಿ ಕೆಲವೊಮ್ಮೆ ವಿದ್ಯಾರ್ಥಿಗಳು ನಿಂತಿರುವುದನ್ನು ನೋಡಿ ಬಸ್ ನಿಲ್ಲಿಸದೆ ಹೊರಟು ಹೋಗುತ್ತಾರೆ ಎಂದು ಆರೋಪಿಸಿದರು.ಸರ್ಕಾರ ಉಚಿತ ಬಸ್ ವ್ಯವಸ್ಥೆ ಮಾಡಿದ್ದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸಬೇಕಾಗಿದೆ. ಇದೇ ರೀತಿ ಮುಂದುವರಿದರೆ ಶಾಲಾ ಕಾಲೇಜು ವಿದ್ಯಾರ್ಥಿಗಳು ತುಮಕೂರ್ ಡಿಪೋ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ವಿದ್ಯಾರ್ಥಿ ನಂದೀಶ್ ಮಾತನಾಡಿ, ಈ ಭಾಗದಲ್ಲಿ ಒಂದೇ ಒಂದು ಬಸ್ ಬಿಟ್ಟಿದ್ದು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಬಸ್ ತೊಂದರೆಯಾಗುತ್ತಿದೆ. ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚಿಗೆ ಬಸ್ ಬಿಡಬೇಕೆಂದು ಒತ್ತಾಯಿಸಿದರು.ಫೋಟೊ......
21 ಜಿ ಯು ಬಿ 1ಗುಬ್ಬಿ ತಾಲೂಕು ಕೊಪ್ಪ ಗ್ರಾಮದ ಶಾಲಾ ವಿದ್ಯಾರ್ಥಿಗಳಿಂದ ನಡೆದ ಪ್ರತಿಭಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಆಗಮಿಸಿ, ಹೆಚ್ಚಿಗೆ ಬಸ್ ಬಿಡುವಂತೆ ತಿಳಿಸಿದ ನಂತರ ವಿದ್ಯಾರ್ಥಿಗಳು ಮನವಿ ಪತ್ರವನ್ನು ನೀಡಿದರು.