ಸಾರಾಂಶ
ಹಾಸ್ಟೆಲ್ ಪ್ರವೇಶಾತಿ, ಸಮರ್ಪಕ ವಿದ್ಯಾರ್ಥಿ ವೇತನ ವಿತರಣೆ ಮತ್ತು ಪದವಿ ಕಾಲೇಜುಗಳಿಗೆ ಉಪನ್ಯಾಸಕರ ನೇಮಕಾತಿಗೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಹಾಸ್ಟೆಲ್ ಪ್ರವೇಶಾತಿಯನ್ನು ಆರಂಭಿಸಬೇಕೆಂದು ಮತ್ತು ಹಾಸ್ಟೆಲ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಆಗ್ರಹಿಸುತ್ತೇವೆ ಎಂದರು. ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿದ್ಯಾರ್ಥಿವೇತನಗಳು ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರೂ ಸಹ ವಿದ್ಯಾರ್ಥಿಗಳಿಗೆ ಕಳೆದ ೩ ವರ್ಷಗಳಿಂದ ಸಮರ್ಪಕವಾಗಿ ವಿದ್ಯಾರ್ಥಿ ವೇತನ ಬರದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದು ದೂರಿದರು.
ಕನ್ನಡಪ್ರಭ ವಾರ್ತೆ ಹಾಸನ
ಹಾಸ್ಟೆಲ್ ಪ್ರವೇಶಾತಿ, ಸಮರ್ಪಕ ವಿದ್ಯಾರ್ಥಿ ವೇತನ ವಿತರಣೆ ಮತ್ತು ಪದವಿ ಕಾಲೇಜುಗಳಿಗೆ ಉಪನ್ಯಾಸಕರ ನೇಮಕಾತಿಗೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್ ಸಾವರ್ಕರ್ ಮಾಧ್ಯಮದೊಂದಿಗೆ ಮಾತನಾಡಿ, ಈಗಾಗಲೇ ರಾಜ್ಯದಲ್ಲೆಡೆ ಪದವಿ ಪೂರ್ವ ಕಾಲೇಜುಗಳ ತರಗತಿಗಳು ಶುರುವಾಗಿ ಎರಡು ತಿಂಗಳು ಕಳೆದಿವೆ. ಅದಷ್ಟೇ ಅಲ್ಲದೆ ಪದವಿ ವಿದ್ಯಾರ್ಥಿಗಳಿಗೂ ಸಹ ಈಗಾಗಲೇ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮುಗಿದು ತರಗತಿಗಳು ಪ್ರಾರಂಭವಾಗಿವೆ. ಹೀಗಿದ್ದರೂ ಕೂಡ ಇನ್ನೂ ಸಹಿತ ಹಾಸ್ಟೆಲ್ ಪ್ರವೇಶಾತಿಗಳು ಪ್ರಾರಂಭ ಆಗದೇ ಇರುವುದರಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಈ ಕೂಡಲೇ ಹಾಸ್ಟೆಲ್ ಪ್ರವೇಶಾತಿಯನ್ನು ಆರಂಭಿಸಬೇಕೆಂದು ಮತ್ತು ಹಾಸ್ಟೆಲ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಆಗ್ರಹಿಸುತ್ತೇವೆ ಎಂದರು. ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿದ್ಯಾರ್ಥಿವೇತನಗಳು ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರೂ ಸಹ ವಿದ್ಯಾರ್ಥಿಗಳಿಗೆ ಕಳೆದ ೩ ವರ್ಷಗಳಿಂದ ಸಮರ್ಪಕವಾಗಿ ವಿದ್ಯಾರ್ಥಿ ವೇತನ ಬರದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದು ದೂರಿದರು.ಸಮರ್ಪಕವಾಗಿ ವಿದ್ಯಾರ್ಥಿ ವೇತನ ನೀಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ. ವಿದ್ಯಾರ್ಥಿಗಳಿಗೆ ಸೂಕ್ತವಾಗಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳು ಅವರ ತರಗತಿಗಳು ಸಂಪೂರ್ಣವಾಗದೇ ಪರೀಕ್ಷೆಗಳಿಗೆ ಹಾಜರಾಗುವ ಪರಿಸ್ಥಿತಿ ಇದೆ. ಈಗಾಗಲೇ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಪದವಿ ಕಾಲೇಜುಗಳು ಈಗಾಗಲೇ ತರಗತಿಗಳು ಆರಂಭವಾಗಿದ್ದು, ಆದ್ದರಿಂದ ಸರ್ಕಾರ ತಡ ಮಾಡದೆ ಕೂಡಲೇ ಉಪನ್ಯಾಸಕರ ಸಂಪೂರ್ಣ ನೇಮಕಾತಿಯನ್ನು ಮಾಡಬೇಕೆಂದು ವಿದ್ಯಾರ್ಥಿ ಪರಿಷತ್ ಒತ್ತಾಯಿಸುತ್ತದೆ. ಎಲ್ಲಾ ಮೇಲಿನ ಮೂರು ಬೇಡಿಕೆಗಳು ವಿದ್ಯಾರ್ಥಿಗಳಿಗೆ ದೃಷ್ಟಿಯಿಂದ ಬಹಳ ಮಹತ್ವಪೂರ್ಣವಾಗಿದ್ದು, ಸರ್ಕಾರ ಈ ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಲೇಪಾಕ್ಷ ಇತರರು ಇದ್ದರು.