ಸಾರಾಂಶ
ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ರಾಹುಲ್ ಬಿ.ಜೆ.(16) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಿಕ್ಕನಾಯಕನಹಳ್ಳಿ: ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ರಾಹುಲ್ ಬಿ.ಜೆ.(16) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ತಾಲೂಕಿನ ಭೈರಾಪುರದ ಜಯರಾಂ ಎಂಬುವರ ಮಗ ರಾಹುಲ್, ಶುಕ್ರವಾರ ಶಾಲೆಗೆ ಹೋಗಿ ಬಂದ ನಂತರ ಮನೆಯಲ್ಲಿ ರಾತ್ರಿ 9.30ರ ವೇಳೆ ಓದುತ್ತಿರುವಾಗ ತೀವ್ರ ಎದೆ ನೋವು ಕಾಣಿಸಿಕೊಂಡಿದೆ.
ತಕ್ಷಣ ಪೋಷಕರು ಹುಳಿಯಾರಿನ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಚಿಕಿತ್ಸೆ ಫಲಕಾರಿಯಾಗದೆ, ರಾತ್ರಿ 10 ಗಂಟೆಗೆ ಹುಳಿಯಾರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಮೃತರ ಗೌರವಾರ್ಥ ಶಾಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ, ಶಾಸಕ ಸಿ.ಬಿ.ಸುರೇಶ್ ಬಾಬು, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ಕಾಂತರಾಜು, ಚಿಕ್ಕನಾಯಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ಸಿಬ್ಬಂದಿ ವರ್ಗ ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ, ಕಂಬನಿ ಮಿಡಿದಿದ್ದಾರೆ. ಸ್ವಗ್ರಾಮ ಭೈರಾಪುರದಲ್ಲಿ ಮೃತ ವಿದ್ಯಾರ್ಥಿಯ ಅಂತಿಮ ಸಂಸ್ಕಾರ ನೆರವೇರಿತು.