ಸಾರಾಂಶ
ಶಿಗ್ಗಾಂವಿ: ಬೆಳಗಾವಿಯಲ್ಲಿ ಓದುತ್ತಿದ್ದ ತಾಲೂಕಿನ ಚಿಕ್ಕಮಲ್ಲೂರ ಗ್ರಾಮದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯನ್ನು ಪೊಲೀಸರು, ಸಮಗ್ರ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡು ವಿದ್ಯಾರ್ಥಿನಿ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ಶಾಸಕ ಯಾಸೀರಖಾನ್ ಪಠಾಣ ಒತ್ತಾಯಿಸಿದರು.ಭಾನುವಾರ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಪಾಲಕರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯಾರ್ಥಿನಿಗೆ ಕರೆ ಮಾಡಿ ಶಿಗ್ಗಾಂವಿಯ ಫರ್ನಿಚರ್ ಅಂಗಡಿ ಮಾಲೀಕರೊಬ್ಬರು ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಈ ಘಟನೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಳ್ಳಬೇಕು. ಸತ್ಯಾಸತ್ಯತೆಯನ್ನು ಹೊರತಂದು ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.ವಿದ್ಯಾರ್ಥಿನಿ ಆತ್ಮಹತ್ಯೆ ಘಟನೆಯಿಂದ ವೈಯಕ್ತಿಕವಾಗಿ ನೋವಾಗಿದೆ. ಈ ಕುರಿತು ಪೊಲೀಸ್ ಇಲಾಖೆ ಉನ್ನತ ಅಧಿಕಾರಿಗಳಿಗೆ ಪತ್ರ ಬರೆದು ನ್ಯಾಯಯುತ ತನಿಖೆಗೆ ಮನವಿ ಮಾಡುತ್ತೇನೆ ಮತ್ತು ಗೃಹ ಸಚಿವರ ಗಮನಕ್ಕೂ ತಂದು ತ್ವರಿತಗತಿಯಲ್ಲಿ ತಪಿತಸ್ಥರಿಗೆ ಕಾನೂನು ಶಿಕ್ಷೆ ನೀಡುವಂತೆ ಕೇಳಿಕೊಳ್ಳುತ್ತೇನೆ. ಕ್ಷೇತ್ರದಲ್ಲಿ ಅಪರಾಧಿಗಳನ್ನು ರಕ್ಷಿಸುವವರನ್ನು ಸಹಿಸುವುದಿಲ್ಲ ಮತ್ತು ಅನಾವಶ್ಯಕ ಕಿರುಕುಳ ಕೊಟ್ಟು ಸಾವಿಗೆ ಕಾರಣರಾಗುವರನ್ನು ಕಾನೂನು ಮೂಲಕ ಸೆದೆಬಡಿಯುವುದಾಗಿ ಶಾಸಕರು ಎಚ್ಚರಿಸಿದರು.ಕಾನೂನುಗಿಂತ ದೊಡ್ಡವರು ಯಾರು ಇಲ್ಲ. ಬೆಳಗಾವಿ ನಗರದ ವಸತಿನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಚಿಕ್ಕಮಲ್ಲೂರಿನ ವಿದ್ಯಾರ್ಥಿನಿ ಸಾವಿಗೆ ಕಾರಣರಾದ ಯಾವುದೇ ಜಾತಿಗೆ ಸೇರಿದ ವ್ಯಕ್ತಿಯಾಗಿರಲಿ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ತನಿಖೆ ಚುರುಕುಗೊಳಿಸಲು ಈಗಾಗಲೇ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ಮನವಿ ಮಾಡಿದ್ದಾಗಿ ಶಾಸಕ ಪಠಾಣ ತಿಳಿಸಿದರು.ಮುಖಂಡ ಎಸ್.ಎಫ್. ಮಣಕಟ್ಟಿ, ಕೆಎಂಎಫ್ ನಿರ್ದೇಶಕ ಶಂಕರಗೌಡ ಪಾಟೀಲ, ಶಿವಾನಂದ ಮಾದರ, ಗುಡ್ಡಪ್ಪ ಜಲದಿ, ಮಾಲತೇಶ ಸಾಲಿ, ಚಂದ್ರು ಕೊಡ್ಲಿವಾಡ, ಡಿವೈಎಸ್‌ಪಿ, ಸಿಪಿಐ ಇದ್ದರು.ಇಂದು ಬಿಜೆಪಿಯಿಂದ ಜನಾಕ್ರೋಶ ಯಾತ್ರೆ
ಹಾವೇರಿ: ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ನಗರದಲ್ಲಿ ಏ. 21ರಂದು ಮಧ್ಯಾಹ್ನ 2 ಗಂಟೆಗೆ ಜನಾಕ್ರೋಶ ಯಾತ್ರೆ ಹಮ್ಮಿಕೊಳ್ಳಲಾಗಿದೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಜನಾಕ್ರೋಶ ಯಾತ್ರೆ ಆರಂಭಗೊಂಡು ಮಹಾತ್ಮ ಗಾಂಧಿ ರಸ್ತೆ ಮೂಲಕ ಸಾಗಿ ಹುತಾತ್ಮ ಮೈಲಾರ ಮಹಾದೇವಪ್ಪ ವೃತ್ತದಲ್ಲಿ ಸಮಾವೇಶಗೊಳ್ಳಲಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಮಾಜಿ ಸಚಿವರು, ಶಾಸಕರು, ರಾಜ್ಯ ಬಿಜೆಪಿಯ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.