ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಿ: ಡಾ.ಗೋವಿಂದರಾಯ

| Published : Nov 17 2024, 01:18 AM IST

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಿ: ಡಾ.ಗೋವಿಂದರಾಯ
Share this Article
  • FB
  • TW
  • Linkdin
  • Email

ಸಾರಾಂಶ

ಎನ್ನೆಸ್ಸೆಸ್ ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ವ್ಯಕ್ತಿತ್ವ ವಿಕಸನಗಳಿಗೆ ಪೂರಕವಾಗಿವೆ. ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೂ ಎನ್ನೆಸ್ಸೆಸ್‌ ಶಿಬಿರಗಳು ಅನುಕೂಲ.

ಕನ್ನಡಪ್ರಭ ವಾರ್ತೆ ಮಾಗಡಿ

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಿದರೆ ಕ್ರಿಯಾತ್ಮಕ ಬೆಳವಣಿಗೆಗೆ ಪೂರಕ ಎಂದು ಪ್ರಾಧ್ಯಾಪಕ ಡಾ.ಎಂ.ಗೋವಿಂದರಾಯ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25ನೇ ಸಾಲಿನ ಕ್ರೀಡಾ, ಸೌಟ್ಸ್ ಮತ್ತು ಗೈಡ್ಸ್ ಎನ್ನೆಸ್ಸೆಸ್‌, ವೈಆರ್‌ಸಿ ಹಾಗೂ ಇತರೆ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಪದವಿ ವ್ಯಾಸಂಗ. ಎನ್ನೆಸ್ಸೆಸ್ ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ವ್ಯಕ್ತಿತ್ವ ವಿಕಸನಗಳಿಗೆ ಪೂರಕವಾಗಿವೆ. ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೂ ಎನ್ನೆಸ್ಸೆಸ್‌ ಶಿಬಿರಳು ಅನುಕೂಲ. ವ್ಯಾಸಂಗದ ಅವಧಿಯಲ್ಲಿ ಪ್ರತಿ ವಿದ್ಯಾರ್ಥಿಯೂ ಎನ್ನೆಸ್ಸೆಸ್‌ ಶಿಬಿರಗಳಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಪ್ರಾಂಶುಪಾಲ ಪ್ರೊ.ಡಿ.ರಾಜಣ್ಣ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗುವ ನಿಟ್ಟಿನಲ್ಲಿ ಬೇರೆ ಬೇರೆ ಚಟುವಟಿಕೆಗಳಿಗೂ ಆದ್ಯತೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಉತ್ಸಾಹದಿಂದ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದು ಕಾಲೇಜಿನಲ್ಲಿ ಶಿಕ್ಷಣದ ಜೊತೆಗೆ ವಿವಿಧ ರಂಗದಲ್ಲೂ ಉತ್ತಮ ಸಾಧನೆ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.

ಪ್ರಾಧ್ಯಾಪಕರಾದ ಜಿ.ಸುಮಾ ಮಾತನಾಡಿ, ಮಾಗಡಿಯಲ್ಲಿ ಪ್ರಥಮ ದರ್ಜೆ ಕಾಲೇಜು 1984ರಲ್ಲಿ ಆರಂಭವಾಗಿ ಇಲ್ಲಿಯವರೆಗೂ ಶೈಕ್ಷಣಿಕ ರಂಗದಲ್ಲಿ ಉತ್ತಮ ಸಾಧನೆ ಮಾಡಿದೆ. ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಕ್ರೀಡಾ ಚಟುವಟಿಕೆಯಲ್ಲೂ ಒತ್ತು ನೀಡಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಎನ್ಎಸ್ಎಸ್ ಶಿಬಿರಗಳಂತಹ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸುತ್ತಿದೆ. ಶಿಬಿರಗಳು ವ್ಯಕ್ತಿತ್ವ ವಿಕಸನಕ್ಕೂ ಪೂರಕ ಎಂದರು.

ಕಾರ್ಯಕ್ರಮದಲ್ಲಿ ಪ್ರೊ.ಶ್ರೀಧರ್, ಪ್ರೊ.ಯೋಗಿತ, ಪ್ರೊ.ಅರುಣ್ ಕುಮಾರ್, ಪ್ರೇಮ, ರಂಗನಾಥ್, ಉಮೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.