ಸಾರಾಂಶ
ಶೃಂಗೇರಿ, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಸಂಸ್ಕೃತಿ ಹಾವಳಿ ಹೆಚ್ಚುತ್ತಿದೆ. ಮೊಬೈಲ್ ಅತಿಯಾದ ಬಳಕೆ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಸಂಸ್ಕೃತಿಯಿಂದ ಆದಷ್ಟು ದೂರವಿರಬೇಕು ಎಂದು ಶೃಂಗೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅರುಣ್ ಕುಮಾರ್ ಹೇಳಿದರು.
- ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶೈಕ್ಷಣಿಕ, ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ
ಕನ್ನಡಪ್ರಭ ವಾರ್ತೆ, ಶೃಂಗೇರಿಇತ್ತೀಚಿನ ದಿನಗಳಲ್ಲಿ ಮೊಬೈಲ್ ಸಂಸ್ಕೃತಿ ಹಾವಳಿ ಹೆಚ್ಚುತ್ತಿದೆ. ಮೊಬೈಲ್ ಅತಿಯಾದ ಬಳಕೆ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಸಂಸ್ಕೃತಿಯಿಂದ ಆದಷ್ಟು ದೂರವಿರಬೇಕು ಎಂದು ಶೃಂಗೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅರುಣ್ ಕುಮಾರ್ ಹೇಳಿದರು.
ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಶೈಕ್ಷಣಿಕ, ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು. ಬದುಕಿಗೆ ಉತ್ತಮ ಸಂಸ್ಕಾರ ಬೇಕು. ಅದು ಶಿಕ್ಷಣದಿಂದ ಬರಬೇಕು. ಶಿಕ್ಷಣವೆಂಬುದು ಕೇವಲ ಅಂಕಗಳಿಕೆ, ಫಲಿತಾಂಶಗಳಿಗೆ ಮಾತ್ರ ಸೀಮಿತವಾಗಿರದೇ ಭವಿಷ್ಯದ ಬದುಕಿಗೆ ಪೂರಕವಾಗಿರಬೇಕು.ವಿದ್ಯಾರ್ಥಿಗಳು ಸಮಯಪ್ರಜ್ಞೆ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ಜೀವನ ಮಹತ್ತರ ಘಟ್ಟವಾಗಿದೆ. ಕಲಿಕೆ ದಿನಗಳಲ್ಲಿ ಸಮಯಕ್ಕೆ ಹೆಚ್ಚಿನ ಮಹತ್ವ ನೀಡಿ ಉತ್ತಮ ಅಧ್ಯಯನ ಮಾಡಬೇಕು. ಉತ್ತಮ ಸಂಸ್ಕಾರ, ಶಿಸ್ತು, ಪ್ರಾಮಾಣಿಕತೆ ಅಳವಡಿಸಿಕೊಳ್ಳಬೇಕು. ಪಠ್ಯೇತರ ಚಟುವಟಿಕೆಗಳಳ್ಲಿ ತೊಡಗಿಸಿಕೊಳ್ಳುವ ಜೊತೆ ತಮ್ಮಲ್ಲಿರುವ ಪ್ರತಿಭೆ ಹೊರತರಬೇಕು. ಸೋಮರಿಗಳಾಗದೇ ಶ್ರಮಜೀವಿಗಳಾಗಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು.
ಪ್ರತಿಯೊಬ್ಬರೂ ತಪ್ಪುಗಳನ್ನು ಮಾಡುತ್ತಾರೆ. ಅದನ್ನು ತಿದ್ದಿಕೊಂಡು ಹೋಗುವುದನ್ನು ಕಲಿತುಕೊಳ್ಳಬೇಕು. ಶಿಕ್ಷಣ ಪಡೆದ ಎಲ್ಲರಿಗೂ ಉದ್ಯೋಗ ಸಿಗಲು ಸಾಧ್ಯವಿಲ್ಲ. ಒಳ್ಳೆತನ ಶಿಸ್ತು ಬೆಳೆಸಿಕೊಳ್ಳಬೇಕು ಎಂದರು. ಕಾಲೇಜಿನ ಪ್ರಾಂಶುಪಾಲರಾದ ಭಾರತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಉತ್ತಮ ಸಂಸ್ಕೃತಿ ಸಂಸ್ಕಾರ ಬೆಳೆಸಿಕೊಳ್ಳಬೇಕು. ಮಾನವೀಯ, ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು. ಪ್ರತಿಯೊಬ್ಬರಲ್ಲಿ ಒಂದೊಂದು ರೀತಿ ಪ್ರತಿಭೆಗಳಿರುತ್ತದೆ. ಇಂತಹ ವೇದಿಕೆಯ ಮೂಲಕ ಅವುಗಳನ್ನು ಹೊರತುರುವ ಪ್ರಯತ್ನ ಮಾಡಬೇಕು ಎಂದರು.ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಕಾಲೇಜಿನಲ್ಲಿ ಕಚೇರಿ ಸಹಾಯಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮಂಜೇಗೌಡ, ಸಿಬ್ಬಂದಿ ಚಂದ್ರಾವತಿಯವರಿಗೆ ಅಭಿನಂದಿಸಲಾಯಿತು. ಕ್ರೀಡಾ, ಸಾಂಸ್ಕೃತಿಕ ಕ್ಷೇತ್ರ, ಎನ್ಎಸ್ಎಸ್ ನಲ್ಲಿ ಉತ್ತಮ ಸಾಧನೆ ಮಾಡಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ, ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ತ್ರಿಮೂರ್ತಿ, ಸದಸ್ಯರಾದ ಯಡದಾಳು ಪ್ರದೀಪ್, ಉಪನ್ಯಾಸಕರಾದ ಡಿ,ಎಸ್.ಮಂಜುನಾಥ್, ಆಶಾ ಬಾರ್ಕೂರು, ಡಾ.ಆಶಾ ಬಿ.ಜಿ.ತೇಜಸ್ವಿನಿ, ರಾಘವೇಂದ್ರ ಪ್ರಸಾದ್, ರಾಘವೇಂದ್ರ ರೆಡ್ಡಿ ,ರವಿಶಂಕರ್, ಮರೀಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.9 ಶ್ರೀ ಚಿತ್ರ 1-
ಶೃಂಗೇರಿ ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಶೈಕ್ಷಣಿಕ, ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.