ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳು ಪ್ರಮುಖ: ಎ.ಕೆ.ಮನುಮುತ್ತಪ್ಪ

| Published : Aug 20 2025, 02:00 AM IST

ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳು ಪ್ರಮುಖ: ಎ.ಕೆ.ಮನುಮುತ್ತಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಸಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಎ.ಕೆ.ಮನುಮುತ್ತಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಪ್ರಮುಖಪಾತ್ರ ವಹಿಸಬೇಕು ಎಂದು ಸಮೀಪದ ಬಲ್ಲಮಾವಟಿ ಗ್ರಾಮದ ನೇತಾಜಿಯ ಪ್ರೌಢ ಶಾಲೆಯ ಅಧ್ಯಕ್ಷ ಎ.ಕೆ.ಮನುಮುತ್ತಪ್ಪ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ , ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬಲ್ಲಮಾವಟಿ ಮತ್ತು ನೇತಾಜಿ ಪ್ರೌಢ ಶಾಲೆ ಸಂಯುಕ್ತ ಆಶ್ರಯದಲ್ಲಿ ಇಲ್ಲಿಗೆ ಸಮೀಪದ ನೇತಾಜಿ ಪ್ರೌಢ ಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ ದುಶ್ಚಟಗಳಿಂದ ದೂರವಿರಿ ವಿಷಯ ಕುರಿತು ಆಯೋಜಿಸಲಾಗಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿಯ ಶಿಬಿರಾಧಿಕಾರಿ ಪಿ.ಪಿ.ನಂದಕುಮಾರ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡಿದ ಮಹನೀಯರನ್ನು ಮಾದರಿಯಾಗಿ ತೆಗೆದುಕೊಂಡು ಶ್ರದ್ಧೆಯಿಂದ ಕಲಿತರೆ ಜವಾಬ್ದಾರಿಯುತ ಸ್ಥಾನ ಹಾಗೂ ಹುದ್ದೆಯನ್ನು ಪಡೆಯಬಹುದು ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಸುನಿಲ್ ಕುಮಾರ್, ಕೃಷಿ ಅಧಿಕಾರಿ ವೆಂಕಟೇಶ್, ಮುಖ್ಯಶಿಕ್ಷಕ ಸಿ.ಎಸ್.ಸುರೇಶ್, ಸೇವಾಪ್ರತಿನಿಧಿಗಳಾದ ಹೇಮಾ, ಶಾರದಾ, ಶಿಕ್ಷಕವೃಂದ ಉಪಸ್ಥಿತರಿದ್ದರು.

ಶಿಕ್ಷಕ ಮೆಹಬೂಬ್ ಸಾಬ್ ಸ್ವಾಗತಿಸಿದರು. ಉಮೇಶ್ ನಿರೂಪಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಸುನಿಲ್ ಕುಮಾರ್ ವಂದಿಸಿದರು.