ವಿದ್ಯಾರ್ಥಿಗಳೇ ದೇಶ ಭವಿಷ್ಯ ರೂಪಿಸುವವರು

| Published : Jun 30 2024, 12:59 AM IST

ಸಾರಾಂಶ

ರಾಮನಗರ: ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿ ಜೀವನ ಸಕಾಲವಾಗಿರುತ್ತದೆ. ಇಂದಿನ ವಿದ್ಯಾರ್ಥಿಗಳೆ ಮುಂದೆ ದೇಶದ ಭವಿಷ್ಯ ರೂಪಿಸುವವರು ಎಂದು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಟಿ.ಮಹೇಶ್ ಹೇಳಿದರು.

ರಾಮನಗರ: ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿ ಜೀವನ ಸಕಾಲವಾಗಿರುತ್ತದೆ. ಇಂದಿನ ವಿದ್ಯಾರ್ಥಿಗಳೆ ಮುಂದೆ ದೇಶದ ಭವಿಷ್ಯ ರೂಪಿಸುವವರು ಎಂದು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಟಿ.ಮಹೇಶ್ ಹೇಳಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಅಬಕಾರಿ ಇಲಾಖೆ ಮತ್ತು ಸ್ನಾತಕೋತ್ತರ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಕಳ್ಳ ಸಾಗಣೆ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ನೇಹಿತರ ಒತ್ತಾಯ, ದೈಹಿಕ-ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು, ಸಮಸ್ಯೆ ಮರೆಯಲು ಹೀಗೆ ಅನೇಕ ಕಾರಣಗಳಿಗಾಗಿ ಮಾದಕ ದ್ರವ್ಯ ಸೇವನೆ ಪ್ರಾರಂಭಿಸುತ್ತಾರೆ. ಆದರೆ, ಅದು ವ್ಯಸನವಾಗಿ ಅನೇಕ ರೀತಿಯ ಸಮಸ್ಯೆಗಳಿಗೆ ಉಂಟಾಗುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ಕೆಟ್ಟ ಸಹವಾಸ, ದುಶ್ಚಟಗಳಿಂದ ದೂರವಿದ್ದು, ಒಳ್ಳೆ ಅಭ್ಯಾಸಗಳ ಕಡೆ ಗಮನ ಕೊಡಬೇಕು ಮನಸ್ಸನ್ನು ಯಾವಾಗಲು ಶುದ್ಧವಾಗಿ ಇಟ್ಟುಕೊಳ್ಳಲು ಪ್ರಯತ್ನಿಸಬೇಕು ಎಂದರು.ಜಾಥಾಕ್ಕೆ ಚಾಲನೆ: ರಾಮನಗರದ ಸ್ನಾತ್ತಕೋತ್ತರ ಕೇಂದ್ರದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯವರೆಗೆ ಏರ್ಪಡಿಸಿದ್ದ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ. ಅವಿನಾಶ್, ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ, ಎಸ್ಪಿ ಕಾರ್ತಿಕ್ ರೆಡ್ಡಿ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹೇಶ್ ಚಾಲನೆ ನೀಡಿದರು.

ಪ್ರಾಧ್ಯಾಪಕ ಡಾ. ಡೊಮಿನಿಕ್, ಅಬಕಾರಿ ನಿರೀಕ್ಷಕರಾದ ರಾಘವೇಂದ್ರ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಪದ್ಮಾ, ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಮಂಜುನಾಥ್, ಮನೋರೋಗ ತಜ್ಞರಾದ ಡಾ. ಆದರ್ಶ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಅರ್ಪಿತ, ಮನೋ ವೈದ್ಯಕೀಯ ಕಾರ್ಯಕರ್ತರಾದ ಪದ್ಮರೇಖಾ ಸೇರಿದಂತೆ ಆರೋಗ್ಯ ಸಿಬ್ಬಂದಿ, ಸ್ನಾತ್ತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

27ಕೆಆರ್ ಎಂಎನ್ 3.ಜೆಪಿಜಿ

ರಾಮನಗರದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ನಡೆದ ಜಾಥಾಕ್ಕೆ ಜಿಲ್ಲಾಧಿಕಾರಿ ಅವಿನಾಶ್ ಹಸಿರು ನಿಶಾನೆ ತೋರಿಸಿದರು.

----------------------------