ವಿದ್ಯಾರ್ಥಿಗಳು ಪರಿಸರದ ರಾಯಭಾರಿಗಳಾಗಿ: ವರ್ಣಿತ್ ನೇಗಿ

| Published : Jun 06 2024, 12:33 AM IST

ವಿದ್ಯಾರ್ಥಿಗಳು ಪರಿಸರದ ರಾಯಭಾರಿಗಳಾಗಿ: ವರ್ಣಿತ್ ನೇಗಿ
Share this Article
  • FB
  • TW
  • Linkdin
  • Email

ಸಾರಾಂಶ

ಬುಧವಾರ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಸಭಾ ಕಾರ್ಯಕ್ರಮ ನಡೆಯಿತು. ಜಿ.ಪಂ.ಸಿಇಒ ವರ್ಣಿತ್ ನೇಗಿ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಪರಿಸರ ಸಂರಕ್ಷಣೆ ಮಾಡಿದಲ್ಲಿ ಉತ್ತಮ ಮಳೆ, ಬೆಳೆ ನಿರೀಕ್ಷಿಸಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಸರದ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಪರಿಸರ ಸಂರಕ್ಷಣೆ ಮಾಡಿದಲ್ಲಿ ಉತ್ತಮ ಮಳೆ, ಬೆಳೆ ನಿರೀಕ್ಷಿಸಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಸರದ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಜಿ.ಪಂ.ಸಿಇಒ ವರ್ಣಿತ್ ನೇಗಿ ಕರೆ ನೀಡಿದ್ದಾರೆ.

ಬುಧವಾರ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ನಡೆದ ವಿಶ್ವ ಪರಿಸರ ದಿನದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ವಕೀಲರ ಸಂಘ, ಮಡಿಕೇರಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲಾ ಸಮಿತಿ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಪರಿಸರ ಸಂರಕ್ಷಣೆ ಪ್ರತಿನಿತ್ಯ ಚಟುವಟಿಕೆಯಾಗಿದ್ದು, ಪರಿಸರ ಸ್ವಚ್ಛತೆಗೆ ಹೆಚ್ಚಿನ ಗಮನಹರಿಸಬೇಕು. ಎಲ್ಲೆಂದರಲ್ಲಿ ಕಸ ಬಿಸಾಡಬಾರದು. ಪರಿಸರ ಸ್ವಚ್ಛತೆಗೆ ಆದ್ಯತೆ ನೀಡುವುದರ ಜೊತೆಗೆ ಗಿಡ ಮರಗಳನ್ನು ಬೆಳೆಸಬೇಕು. ಪರಿಸರದಲ್ಲಿ ಶುದ್ದ ಗಾಳಿ, ಶುದ್ಧ ನೀರು ಪಡೆಯಲು ಪರಿಸರ ಉಳಿವು ಅತ್ಯಗತ್ಯ ಎಂದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ಮಾನವ ಸಂಕುಲ, ಜೊತೆಗೆ ಅರಣ್ಯ ಮತ್ತು ವನ್ಯ ಸಂಪತ್ತು ಉಳಿಸಿ ಬೆಳೆಸುವಂತಾಗಲು ಗಿಡ ಮರಗಳನ್ನು ಹೆಚ್ಚಾಗಿ ಬೆಳೆಸಬೇಕು. ಪರಿಸರ ಸಂರಕ್ಷಣೆಗೆ ಹಿಂದಿಗಿಂತ ಇಂದು ಹೆಚ್ಚಿನ ಕಾಳಜಿ ವಹಿಸಬೇಕು. ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎಂ.ಚಂದ್ರಕಾಂತ್ ಮಾತನಾಡಿ, ಮನುಕುಲದ ಉಳಿವಿಗಾಗಿ ಪರಿಸರ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು. ವಿದ್ಯಾರ್ಥಿಗಳು ಉತ್ತಮ ಪರಿಸರದ ಮಹತ್ವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ನಗರಸಭೆ ಪೌರಾಯುಕ್ತ ವಿಜಯ್ ಮಾತನಾಡಿ, ಪರಿಸರವನ್ನು ಸ್ವಚ್ಛವಾಗಿಡಲು ಸ್ಥಳೀಯ ಸಂಸ್ಥೆಗಳ ಜೊತೆ ಕೈಜೋಡಿಸಬೇಕು ಎಂದರು.

ಜಿಲ್ಲಾ ಪರಿಸರ ಅಧಿಕಾರಿ ರಘುರಾಮ್ ಮಾತನಾಡಿ, ಅರಣ್ಯ ಮತ್ತು ವನ್ಯ ಸಂಪತ್ತು ಸಂರಕ್ಷಣೆ ಮಾಡಿದ್ದಲ್ಲಿ, ಪರಿಸರ ಸಮತೋಲನ ಕಾಣಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಮ್ಮಿ ಸೀಕ್ವೇರಾ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ, ತರಬೇತಿದಾರ ಕೆ.ಯು.ರಂಜಿತ್, ಸಿ.ಎಂ.ಸುಲೋಚನ, ಸಿಆರ್‌ಪಿ ಶ್ರುತಿ ಶ್ರೀ ಇತರರು ಇದ್ದರು.

ಡಿವೈಪಿಸಿ ಎಂ. ಕೃಷ್ಣಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರಾಣಿ ಮಾಚಯ್ಯ, ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸೀಕ್ವೇರಾ, ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಕಾರ್ಯಾಧ್ಯಕ್ಷ ಕೆ.ಎ.ದೇವಯ್ಯ, ಸಸ್ಥೆಯ ಆಡಳಿತಾಧಿಕಾರಿ ಎನ್.ಎ.ಪೊನ್ನಮ್ಮ, ಶಾಲೆಯ ಪ್ರಾಂಶುಪಾಲ ಎಂ.ಜಿ.ಸವಿತಾ, ಕಾನೂನು ಸೇವಾ ಪ್ರಾಧಿಕಾರದ ಆಡಳಿತಾಧಿಕಾರಿ ಬಿ.ಎಸ್.ಜಯಪ್ಪ, ಕ್ಲಬ್ ಮಹೇಂದ್ರದ ವ್ಯವಸ್ಥಾಪಕ ವಿಶಾಂತ್ ಪೋಟ್ರಿ, ನವೀನ್ ರ‍್ಹೋನ, ಸ್ಕೌಟ್ ಮತ್ತು ಗೈಡ್ಸ್ನ ಸಂಯೋಜಕ ದಮಯಂತಿ, ನಗರಸಭೆಯ ಪರಿಸರ ಎಂಜಿನಿಯರ್ ಸೌಮ್ಯ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ಎನ್‌ಸಿಸಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಪರಿಸರ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು. ಶಾಲೆಯ ಶಿಕ್ಷಕ ಕೆ.ಎನ್.ಭರತ್, ಕೆ.ಶಶಿ ನಿರೂಪಿಸಿದರು.