ವಿದ್ಯಾರ್ಥಿಗಳೇ ದೇಶ, ಸಮಾಜಕ್ಕೆ ಉತ್ತಮ ವ್ಯಕ್ತಿಗಳಾಗಿ: ಶಿವಾನಂದ ಶ್ರೀ

| Published : May 26 2024, 01:32 AM IST

ವಿದ್ಯಾರ್ಥಿಗಳೇ ದೇಶ, ಸಮಾಜಕ್ಕೆ ಉತ್ತಮ ವ್ಯಕ್ತಿಗಳಾಗಿ: ಶಿವಾನಂದ ಶ್ರೀ
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳ ಜೀವನ ರೂಪಿಸಲು ತಮ್ಮ ಪೋಷಕರು ತಮ್ಮ ಜೀವನವನ್ನು ಮುಡುಪಿಟ್ಟಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ದೇಶ ಹಾಗೂ ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳಾಗಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸವೆಂದರೆ ಬರೀ ಸಂಪಾದನೆಗೆ ಮಾತ್ರವೆಂದು ತಿಳಿಯಬಾರದು, ಅವರು ಉತ್ತಮ ವ್ಯಕ್ತಿಗಳಾಗಿ ಹೊರಹೊಮ್ಮಬೇಕು.

ಕನ್ನಡಪ್ರಭ ವಾರ್ತೆ ತುಮಕೂರುವಿದ್ಯಾರ್ಥಿಗಳು ದೇಶ ಹಾಗೂ ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳಾಗಬೇಕು ಎಂದು ತುಮಕೂರಿನ ಹಿರೇಮಠಾಧ್ಯಕ್ಷ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.ನಗರದ ಶಿರಾ ರಸ್ತೆಯ ಶ್ರೀದೇವಿ ಪದವಿ ಕಾಲೇಜು ಮತ್ತು ಶ್ರೀದೇವಿ ಸ್ನಾತಕೋತ್ತರ ಕೇಂದ್ರದ ವತಿಯಿಂದ ಶ್ರೀ ಸೃಷ್ಟಿ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚು ಸಮಯ ನೀಡಬೇಕು ಎಂದು ಶೈಕ್ಷಣಿಕ ವ್ಯವಸ್ಥೆ, ರಾಜಕೀಯ ವ್ಯವಸ್ಥೆ, ಧಾರ್ಮಿಕ ವ್ಯವಸ್ಥೆ, ಆರ್ಥಿಕ ವ್ಯವಸ್ಥೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಪ್ರತಿಯೊಬ್ಬ ತಂದೆ-ತಾಯಿಯವರು ತಮ್ಮ ಮಕ್ಕಳು ವೈದ್ಯರು, ಇಂಜಿನಿಯರ್ ಗಳಾಗಬೇಕು ಎಂಬ ಕನಸು ಕಾಣುತ್ತಿರುತ್ತಾರೆ. ವಿದ್ಯಾರ್ಥಿಗಳಿಗೆ ರಾಮಾಯಣ ಮತ್ತು ವಾಲ್ಮೀಕಿಯ ಕಥೆಯ ತುಣುಕುಗಳನ್ನು ತಿಳಿಸಿ, ವಿದ್ಯಾರ್ಥಿಗಳು ತಮ್ಮ ಜೀವನವನ್ನು ಯಾವ ರೀತಿ ರೂಪಿಸಿಕೊಳ್ಳಬೇಕು ಎಂಬುದನ್ನು ಮನದಟ್ಟು ಮಾಡಿಸಿದರು.ಶ್ರೀದೇವಿ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಮಕ್ಕಳಿಗೆ ಒಳ್ಳೆಯ ಕೆಲಸಕ್ಕೆ ನಿರ್ವಹಿಸಬೇಕು. ಮಕ್ಕಳು ಜೀವನ ರೂಪಿಸಲು ತಮ್ಮ ಪೋಷಕರು ತಮ್ಮ ಜೀವನವನ್ನು ಮುಡುಪಿಟ್ಟಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ದೇಶ ಹಾಗೂ ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳಾಗಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸವೆಂದರೆ ಬರೀ ಸಂಪಾದನೆಗೆ ಮಾತ್ರವೆಂದು ತಿಳಿಯಬಾರದು, ಅವರು ಉತ್ತಮ ವ್ಯಕ್ತಿಗಳಾಗಿ ಹೊರಹೊಮ್ಮಬೇಕು ಎಂದು ಕಿವಿಮಾತು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್‌ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಪದವೀಧರರಿಗೆ ತಮ್ಮ ವೃತ್ತಿ ಜೀವನವನ್ನು ಮುಂದುವರೆಸಲು ವಿಶಾಲ ಮಾಗೋಪಾರ್ಯಗಳಿವೆ. ಅಧ್ಯಯನಶೀಲತೆಯಲ್ಲಿ ತೊಡಗಿಸುತ್ತಾ ವ್ಯಕ್ತಿತ್ವವನ್ನು ರೂಪಿಸಿಕೊಂಡರೆ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಾಗುತ್ತದೆ ಎಂದು ತಿಳಿಸಿದರು. ಪದವಿ ಮುಗಿಸಿ ಹೊರ ಬರುತ್ತಿರುವ ವಿದ್ಯಾರ್ಥಿಗಳ ಕೈಯಲ್ಲಿ ರಾಷ್ಟ್ರದ ಭವಿಷ್ಯವಿರುತ್ತದೆ. ಒಬ್ಬ ವಿದ್ಯಾರ್ಥಿ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಬೇಕು, ತಮ್ಮ ಜೀವನವನ್ನು ಹೇಗೆ ರೂಪಿಸಿಕೊಳ್ಳಬೇಕು ಎಂಬುದರ ಬಗ್ಗೆ ಚಿಂತಿಸಬೇಕಾಗುತ್ತದೆ ಎಂದು ಅರ್ಥಪೂರ್ಣವಾಗಿ ವಿವರಿಸಿದರು.ಕಾರ್ಯಕ್ರಮದಲ್ಲಿ ಶ್ರೀದೇವಿ ವೈದ್ಯಕೀಯ ನಿರ್ದೇಶಕ ಡಾ. ರಮಣ್ ಆರ್ ಹುಲಿನಾಯ್ಕರ್, ಶ್ರೀದೇವಿ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ.ಎಸ್.ಪಾಟೀಲ್, ಶ್ರೀದೇವಿ ಚಾರಿಟೇಬಲ್ ಟ್ರಸ್ಟಿ ಅಂಬಿಕಾ ಎಂ ಹುಲಿನಾಯ್ಕರ್, ಶ್ರೀದೇವಿ ಆಸ್ಪತ್ರೆಯ ನೇತ್ರ ತಜ್ಞೆ ಡಾ.ಲಾವಣ್ಯ, ಶ್ರೀದೇವಿ ಸಂಸ್ಥೆಯ ಆಡಳಿತಾಧಿಕಾರಿ ಟಿ.ವಿ.ಬ್ರಹ್ಮದೇವಯ್ಯರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದರು.ಶ್ರೀದೇವಿ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲರು ಮುಬಾರಕ್‌ರವರು ವಾರ್ಷಿಕ ವರದಿಯನ್ನು ಮಂಡಿಸುತ್ತಾ ವಿದ್ಯಾರ್ಥಿಗಳ ಜವಾಬ್ದಾರಿ, ನೈಪುಣ್ಯತೆ, ಜೀವನದ ಮುಂದಿನ ಸವಾಲುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನದಟ್ಟಾಗುವಂತೆ ಹಾಗೂ ಜೀವನದಲ್ಲಿ ಆಳವಡಿಸಿಕೊಳ್ಳಬೇಕೆಂದು ತಿಳಿಸಿದರು. ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಕೋ- ಆರ್ಡಿನೇಟರ್‌ರಾದ ಪ್ರೊ.ರಾಘವೇಂದ್ರ ಜಟ್ಟಣ ಭಾಗವಹಿಸಿದ್ದರು, ಸಮಾರಂಭದಲ್ಲಿ ಶೋಭಾರವರು ಪ್ರಾರ್ಥಿಸಿ, ಪ್ರೊ.ಅಷಿಯಾಭಾನುರವರು ಸ್ವಾಗತಿಸಿ, ಫಹಾನ್ ನಾಜ್‌ರವರು ನಿರ್ವಹಿಸಿದರು. ಪ್ರೊ. ಪುಷ್ಪಾರವರು ವಂದಿಸಿದರು. ಪ್ರೊ.ಸಾರೀಯ ಖಾನಂ, ಪ್ರೊ.ಚಂದ್ರಿಕಾ, ಪ್ರೊ.ವತ್ಸಲ, ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.