ಸಾರಾಂಶ
ಕೆ.ಎಂ.ದೊಡ್ಡಿ: ಮದ್ದೂರು ತಾಲೂಕಿನ ಮಣಿಗೆರೆ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಲಾಯಿತು.
ಕೆ.ಎಂ.ದೊಡ್ಡಿ: ಮದ್ದೂರು ತಾಲೂಕಿನ ಮಣಿಗೆರೆ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಲಾಯಿತು. ಸಮುದಾಯ ಆರೋಗ್ಯ ಕೇಂದ್ರ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಶಿವರಾಜು ಮಾತನಾಡಿ, ಕ್ಷಯರೋಗದ ಲಕ್ಷಣಗಳು ಹರಡುವ ಬಗೆ, ಪರೀಕ್ಷೆ ಹಾಗೂ ಚಿಕಿತ್ಸೆ ವಿಧಾನಗಳ ಬಗ್ಗೆ ತಿಳಿಸಿದರು. ಕ್ಷಯ ರೋಗದ ಪರೀಕ್ಷೆ ಹಾಗೂ ಚಿಕಿತ್ಸೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ದೊರೆಯುತ್ತಿವೆ. ರೋಗ ಲಕ್ಷಣಗಳಿರುವವರು ಆದಷ್ಟು ಬೇಗ ಪರೀಕ್ಷಿಸಿಕೊಳ್ಳಬೇಕು. ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ತಿಳಿದು ಕ್ಷಯ ಮುಕ್ತ ಭಾರತ ಮಾಡುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಮುಖ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಪುನೀತ, ಉಮೇಶ್, ಎಸ್ ಟಿ ಎಸ್ ಕೆಂಪೇಗೌಡ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.