ಲಕ್ಷ್ಮೇಶ್ವರದಲ್ಲಿ ವಿದ್ಯಾರ್ಥಿಗಳಿಂದ ರಸ್ತೆತಡೆ

| Published : Jul 25 2025, 12:33 AM IST

ಸಾರಾಂಶ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಲಕ್ಷ್ಮೇಶ್ವರ ಘಟಕದಿಂದ ಪಟ್ಟಣದ ಬಸ್ ನಿಲ್ದಾಣದ ಎದುರು ರಸ್ತೆ ತಡೆದು ನೂರಾರು ವಿದ್ಯಾರ್ಥಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು. ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.

ಲಕ್ಷ್ಮೇಶ್ವರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಲಕ್ಷ್ಮೇಶ್ವರ ಘಟಕದಿಂದ ಪಟ್ಟಣದ ಬಸ್ ನಿಲ್ದಾಣದ ಎದುರು ರಸ್ತೆ ತಡೆದು ನೂರಾರು ವಿದ್ಯಾರ್ಥಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು.

ಲಕ್ಷ್ಮೇಶ್ವರ ತಾಲೂಕಿನ ಸುತ್ತಮುತ್ತಲಿನ ಗ್ರಾಮದ ಸಾವಿರಾರು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬಸ್ ತಡೆದು ಪ್ರತಿಭಟಿಸಿದರು.

ಈ ವೇಳೆ ಅಭಿಷೇಕ ಉಮಚಗಿ ಮಾತನಾಡಿ, ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ಸರಿಯಾದ ಮೂಲ ಸೌಲಭ್ಯ ನೀಡುವಲ್ಲಿ ವಿಫಲವಾಗಿದೆ. ಸರಿಯಾದ ವೇಳೆಗೆ ಬಸ್ ಇಲ್ಲದೆ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ, ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ಸಿನ ವ್ಯವಸ್ಥೆ ಮಾಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬಸ್ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಉಗ್ರ ಹೋರಾಟ ಮಾಡಲಾಗುವುದು. ತಕ್ಷಣ ವಿದ್ಯಾರ್ಥಿಗಳ ವೇತನ ಜಾರಿ ಮಾಡಬೇಕು ಹಾಗೂ ಹಾಸ್ಟೆಲ್ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಎಬಿವಿಪಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ವೇಳೆ ತಹಸೀಲ್ದಾರ್‌ ಧನಂಜಯ ಮನವಿ ಸ್ವೀಕರಿಸಿ ಸರ್ಕಾರಕ್ಕೆ ಕಳುಹಿಸಿ ಕೊಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಿಪಿಐ ನಾಗರಾಜ ಮಾಡಳ್ಳಿ ಪಿಎಸ್ಐ ನಾಗರಾಜ ಗಡದ ಹಾಗೂ ಟಿ.ಕೆ. ರಾಠೋಡ ಇದ್ದರು.

ಈ ವೇಳೆ ಎಬಿವಿಪಿಯ ಅಭಿಷೇಕ್ ಉಮಚಗಿ, ಪ್ರಕಾಶ ಕುಂಬಾರ, ವಿನಯ ಸಪಡ್ಲ, ಯಶವಂತ ಶಿರಹಟ್ಟಿ, ಮನೋಜ ತಂಡಗೇರ, ವಿನಾಯಕ ಕುಂಬಾರ, ಅಭಿಷೇಕ್ ಇಸನಗೌಡರ, ವಿನಾಯಕ ಹುಂಬಿ, ಅರವಿಂದ ಇಚ್ಚಂಗಿ, ಯುವರಾಜ ದುರ್ಗದ, ಸಂಜನಾ ಪಾಟೀಲ, ರತ್ನಾ ಕಮತದ, ರಕ್ಷಿತಾ ಗಂಟಿ, ಅನುಷಾ ಸವಿತಾ ಕರೆಯತ್ತಿನ, ಅನು ಅಣ್ಣಿಗೇರಿ, ಗೀತಾ ಹುಲ್ಲೂರ, ತೇಜಸ್ವಿನಿ ಕ್ಷತ್ರಿಯ ಇದ್ದರು.