ವಿದ್ಯಾರ್ಥಿಗಳು ತಮ್ಮೊಳಗಿನ ಶಕ್ತಿ ಸದ್ಬಳಕೆ ಮಾಡಿಕೊಂಡರೆ ಸಾಧನೆಯ ಶಿಖರ ಏರಬಹುದು

| Published : Aug 26 2024, 01:43 AM IST

ವಿದ್ಯಾರ್ಥಿಗಳು ತಮ್ಮೊಳಗಿನ ಶಕ್ತಿ ಸದ್ಬಳಕೆ ಮಾಡಿಕೊಂಡರೆ ಸಾಧನೆಯ ಶಿಖರ ಏರಬಹುದು
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿ ಜೀವನ ಬದುಕಿನಲ್ಲಿ ಅತ್ಯಂತ ಪ್ರಮುಖವಾದ ಹಂತವಾಗಿದ್ದು, ಜಗತ್ತಿನ ಜ್ಞಾನವನ್ನು ವ್ಯವಸ್ಥಿತವಾಗಿ ಪಡೆಯುವ ಸುವರ್ಣ ಅವಕಾಶವಾಗಿದೆ. ಈಗ ಕನಸುಗಳಿಗೆ ಬಣ್ಣ ತುಂಬಿ ನನಸು ಮಾಡುವ ಉತ್ಸಾಹವಿರುತ್ತದೆ. ವಿದ್ಯಾರ್ಥಿಗಳು ತಮ್ಮೊಳಗಿನ ಈ ಶಕ್ತಿಯನ್ನು ಸದ್ಬಳಕೆ ಮಾಡಿಕೊಂಡರೆ ಸಾಧನೆಯ ಶಿಖರವನ್ನು ಏರಬಹುದು ಎಂದು ವಿಧಾಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.

ಹಾವೇರಿ: ವಿದ್ಯಾರ್ಥಿ ಜೀವನ ಬದುಕಿನಲ್ಲಿ ಅತ್ಯಂತ ಪ್ರಮುಖವಾದ ಹಂತವಾಗಿದ್ದು, ಜಗತ್ತಿನ ಜ್ಞಾನವನ್ನು ವ್ಯವಸ್ಥಿತವಾಗಿ ಪಡೆಯುವ ಸುವರ್ಣ ಅವಕಾಶವಾಗಿದೆ. ಈಗ ಕನಸುಗಳಿಗೆ ಬಣ್ಣ ತುಂಬಿ ನನಸು ಮಾಡುವ ಉತ್ಸಾಹವಿರುತ್ತದೆ. ವಿದ್ಯಾರ್ಥಿಗಳು ತಮ್ಮೊಳಗಿನ ಈ ಶಕ್ತಿಯನ್ನು ಸದ್ಬಳಕೆ ಮಾಡಿಕೊಂಡರೆ ಸಾಧನೆಯ ಶಿಖರವನ್ನು ಏರಬಹುದು ಎಂದು ವಿಧಾಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ೨೦೨೪-೨೫ನೇ ಸಾಲಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿನಿಯರಿಗೆ ಸ್ವಾಗತ ಮತ್ತು ಸಾಂಸ್ಕೃತಿಕ, ಕ್ರೀಡೆ, ನವೀಕೃತ ವಿಜ್ಞಾನ ಪ್ರಯೋಗಾಲಯಗಳು, ಎನ್.ಎಸ್.ಎಸ್. ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.ಯಾವುದೇ ಸಾಧನೆಗೆ ಶಿಸ್ತುಬದ್ಧ ಶಿಕ್ಷಣ ಮುಖ್ಯ. ಶಿಕ್ಷಣದಿಂದಲೇ ವಿದ್ಯಾರ್ಥಿಗಳ ಬದುಕು ಬೆಳಕಾಗುತ್ತದೆ. ಆದ್ದರಿಂದ ವಿದ್ಯಾರ್ಥಿನಿಯರು ಅತ್ಯಂತ ಶಿಸ್ತು ಮತ್ತು ನಿರಂತರ ಅಧ್ಯಯನದಿಂದ ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಬೇಕು. ಈ ಕಾಲೇಜಿನಲ್ಲಿ ಪ್ರತಿಭಾವಂತ ಉಪನ್ಯಾಸಕರ ತಂಡವಿದ್ದು, ಪಾಠ ಪ್ರವಚನಗಳು ಚೆನ್ನಾಗಿ ನಡೆಯುತ್ತಿರುವುದರಿಂದ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಳವಾಗುತ್ತಿದೆ. ಅದಕ್ಕೆ ತಕ್ಕಂತೆ ಕಾಲೇಜಿಗೆ ಮೂಲಭೂತ ಸೌಲಭ್ಯಗಳನ್ನು ನೀಡಲಾಗಿದೆ ಎಂದ ಅವರು ವಿದ್ಯಾರ್ಥಿನಿಯರು ಸಲ್ಲಿಸಿದ ಬೇಡಿಕೆಗಳ ಮನವಿ ಪತ್ರವನ್ನು ಸ್ವೀಕರಿಸಿ ಅದರಲ್ಲಿನ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜೀಗೌಡ್ರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವಿರಬೇಕು. ಕಾಲೇಜಿನ ಮತ್ತು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯನ್ನು ಕಂಡು ಖುಷಿಯಾಗಿದೆ. ಸರ್ಕಾರಿ ಕಾಲೇಜಿನ ಮಕ್ಕಳು ಯಾವುದರಲ್ಲೂ ಕಡಿಮೆ ಇಲ್ಲ ಎಂಬುದನ್ನು ತೋರಿಸಿದ್ದೀರಿ. ಕಾಲೇಜಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಲು ಶ್ರಮಿಸುತ್ತೇವೆ ಎಂದರು.ಸಾಂಸ್ಕೃತಿಕ ಕಾರ್ಯದರ್ಶಿ ಶೇಖರ ಭಜಂತ್ರಿ ಮಾತನಾಡಿ, ಎಲ್ಲ ಉಪನ್ಯಾಸಕರ ಸಾಂಘಿಕ ಪ್ರಯತ್ನದ ಫಲವಾಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ಇಲ್ಲಿ ಸಾಕಷ್ಟು ಪ್ರತಿಭಾವಂತ ವಿದ್ಯಾರ್ಥಿನಿಯರಿದ್ದು ವಿವಿಧ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಕಾಲೇಜಿನ ಅಭಿವೃದ್ಧಿಗೆ ಶಾಸಕರು ಸ್ಪಂದಿಸಿರುವುದನ್ನು ಸ್ಮರಿಸಿಕೊಂಡು ವಿದ್ಯಾರ್ಥಿನಿಯರ ಭವಿಷ್ಯ ರೂಪಿಸಲು ಗುರುಗಳು, ಜನಪ್ರತಿನಿಧಿಗಳು ಮತ್ತು ಸಮಾಜ ಕೈ ಜೋಡಿಸುತ್ತಿರುವುದರಿಂದ ಇದೆಲ್ಲ ಸಾಧ್ಯವಾಗಿದೆ ಎಂದರು.ಇದೇ ವೇಳೆ ವರ್ಗಾವಣೆಗೊಂಡ ಉಪನ್ಯಾಸಕ ವಿಶ್ವನಾಥ ಬಿ.ಎನ್. ಅವರಿಗೆ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ನೂತನವಾಗಿ ಆಗಮಿಸಿದ ಉಪನ್ಯಾಸಕ ರಮೇಶ ಲಮಾಣಿ, ಬೀರಪ್ಪ ಕುರುಬರ ಅವರನ್ನು ಸನ್ಮಾನಿಸಿ ಸ್ವಾಗತಿಸಲಾಯಿತು. ಪ್ರಾಚಾರ್ಯ ನಾಗರಾಜ ಹಕ್ಕೇರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಸಂಜೀವಕುಮಾರ ನೀರಲಗಿ, ಸದಸ್ಯ ನಾಗರಾಜ ತಳವಾರ, ಸಿಬಿಸಿ ಉಪಾಧ್ಯಕ್ಷ ಗುಡ್ಡನಗೌಡ ಅಂದಾನಿಗೌಡ್ರು, ಸದಸ್ಯರಾದ ಕೆಂಚವೀರಪ್ಪ, ಸುರೇಖಾ, ಶಿವಯೋಗಿ ಹಿರೇಮಠ, ಬಸವರಾಜ ಮಾಳಗಿ, ಹಿರಿಯ ಉಪನ್ಯಾಸಕ ವೀರೇಶ ಹೊನ್ನಪ್ಪನವರ, ಎಸ್.ಸಿ. ಮರಡಿ, ರವಿ ಸಾದರ, ವಿ. ಎಸ್. ಪಾಟೀಲ, ಪುಷ್ಪಲತಾ ಡಿ.ಎಲ್., ಮಂಜುನಾಥ ಹತ್ತಿಯವರ, ಈಶ್ವರಗೌಡ ಪಾಟೀಲ, ಸುನಂದ ಶೀಲಿ, ಬೀರಪ್ಪ, ಸುಮಾ, ಸುಧಾ, ವಂದನ, ನಂದಾ, ಪ್ರೀತಿ, ಅಶ್ವಿನಿ, ಉಸ್ಮಾನ್ ಇತರರು ಪಾಲ್ಗೊಂಡಿದ್ದರು.ಕಲ್ಪನಾ ಮತ್ತು ಬೇಬಿ ಮತ್ತಿಹಳ್ಳಿ ಪ್ರಾರ್ಥಿಸಿದರು. ಪ್ರೀತಿ ಗೌಡ್ರ ಸ್ವಾಗತಿಸಿದರು. ಅಫೀಫಾ ಮತ್ತು ಸುಶ್ಮಿತಾ ತಳ್ಳಳ್ಳಿ ನಿರೂಪಿಸಿದರು. ಚೈತ್ರ ವಂದಿಸಿದರು. ಮಧ್ಯಾಹ್ನ ಕಾಲೇಜಿನ ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಜರುಗಿದವು.೨೫ಎಚ್‌ವಿಆರ್೩-ಹಾವೇರಿ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ೨೦೨೪-೨೫ನೇ ಸಾಲಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿನಿಯರಿಗೆ ಸ್ವಾಗತ ಮತ್ತು ಸಾಂಸ್ಕೃತಿಕ, ಕ್ರೀಡೆ ಸೇರಿದಂತೆ ವಿವಿಧ ಚಟುವಟಿಕೆಗಳ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.