ವಿದ್ಯಾರ್ಥಿಗಳು ಗುಣಾತ್ಮಕ ಚಿಂತನೆ ಬೆಳೆಸಿಕೊಳ್ಳಿ: ಎಸ್‌ಪಿ ರಾಜರಾಮನ್

| Published : Jan 15 2024, 01:48 AM IST

ವಿದ್ಯಾರ್ಥಿಗಳು ಗುಣಾತ್ಮಕ ಚಿಂತನೆ ಬೆಳೆಸಿಕೊಳ್ಳಿ: ಎಸ್‌ಪಿ ರಾಜರಾಮನ್
Share this Article
  • FB
  • TW
  • Linkdin
  • Email

ಸಾರಾಂಶ

ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ವಿರಾಜಪೇಟೆ ವತಿಯಿಂದ 2023- 24ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ದಂತ ವೈದ್ಯಕೀಯ ಕಾಲೇಜಿನ ಬೆಳ್ಳಿ ಮಹೋತ್ಸವ ಉದ್ಘಾಟನಾ ಸಮಾರಂಭ ನಡೆಯಿತು. ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕನ್ನಡಪ್ರಭ ವಾರ್ತೆ ವಿರಾಜಪೇಟೆ

ವಿದ್ಯಾರ್ಥಿಗಳ ಜೀವನ ಅತ್ಯಅಮೂಲ್ಯವಾದುದು. ಉತ್ತಮ ವ್ಯಕ್ತಿತ್ವ, ಗುಣಾತ್ಮಕ ಚಿಂತನೆಯಿಂದ ಸಮಾಜದ ಏಳಿಗೆ ಸಾದ್ಯ ಎಂದು ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್ ಹೇಳಿದರು. ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ವಿರಾಜಪೇಟೆ ವತಿಯಿಂದ 2023- 24ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ದಂತ ವೈದ್ಯಕೀಯ ಕಾಲೇಜಿನ ಬೆಳ್ಳಿ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಗುಣಮಟ್ಟದ ಶಿಕ್ಷಣ ಪಡೆದ ಪ್ರತಿಯೊಬ್ಬರೂ ಸಮಾಜದಲ್ಲಿ ಗುರುತಿಸುವಂತಹ ವ್ಯಕ್ತಿಯಾಗಿ ರೂಪುಗೊಳ್ಳುತ್ತಾನೆ. ಸಮಾಜದೊಂದಿಗೆ ಬೆರೆತು ಸಮಾಜದ ವಿವಿಧ ಸ್ತರಗಳಲ್ಲಿರುವ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುವುದುರಿಂದ ಸಮಾಜದೊಂದಿಗೆ ಉತ್ತಮ ಬಾಂದವ್ಯ ಸೃಷ್ಟಿಯಾಗುತ್ತದೆ. ಪ್ರಸ್ತುತ ಯುವ ಸಮುದಾಯವು ಮಾದಕ ದ್ರವ್ಯಗಳ ಮತ್ತು ವಸ್ತುಗಳ ವ್ಯಸನಿಗಳಾಗುತ್ತಿರುವುದು ವಿಷಾದನೀಯ ಎಂದರು. ವಾಯು ಸೇನೆಯ ನಿವೃತ್ತ ಅಧಿಕಾರಿ ಮತ್ತು ಪ್ರೋಫೆಸರ್ ಡಾ. ಅನ್‌ಮೊಲ್ ಕಾಲ್ಹ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಬದ್ಧತೆ, ಮೌಲ್ಯಾಧಾರಿತ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು. ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ಸುನೀಲ್ ಮುದ್ದಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೊಡಗು ದಂತ ವೈಧ್ಯಕೀಯ ಕಾಲೇಜು ವಿಧ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅತ್ಯಾಧುನಿಕ ದಂತ ವೈಧ್ಯಕೀಯ ಉಪಕರಣಗಳು, ನುರಿತ ಉಪನ್ಯಾಸಕರು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಿದೆ. ವಿದ್ಯಾರ್ಥಿ ಸಂಘವು ಉತ್ತಮ ನಾಯಕತ್ವ ಬೆಳೆಸುವಂತ ವೇದಿಕೆಯಾಗಿರುವುದರಿಂದ ಸಂಘದ ಎಲ್ಲ ಪದಾಧಿಕಾರಿಗಳು ಹಾಗೂ ಸದಸ್ಯರು ಪದವಿಗಳಿಗೆ ಚ್ಯುತಿ ಬಾರದರೀತಿಯಲ್ಲಿ ಮುಂದುವರಿಯಬೇಕು ಎಂದರು. 2023- 24ನೇ ಸಾಲಿನ ವಿದ್ಯಾರ್ಥಿ ಸಂಘದ ಅದ್ಯಕ್ಷರಾಗಿ ಜಿಲ್ನಾ ಎ.ಸಿ, ಪ್ರಧಾನ ಕಾರ್ಯಧರ್ಶಿಯಾಗಿ ಸೂಸನ್ನಾ ಪರಕಟ್ಟು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪದವಿ ಲೋಕೇಶ್, ಕ್ರೀಡಾ ಕಾರ್ಯದರ್ಶಿ ಗೌತಮ್ ಟಿ. ಆಯ್ಕೆಯಾದರು. ಏಂಜೆಲ್‌ ರೋಸ್ ಮ್ಯಾಥ್ಯೂ, ಎ.ಆರ್. ಗಾಯತ್ರಿ, ನವಜೋದ್ ಟಿ.ಪಿ. ಅನಶ್ವರ ಕೆ.ಎ. ಮತ್ತು ಸಂಯುಕ್ತಾ ಅವರುಗಳು ಸದಸ್ಯರಾಗಿ ಆಯ್ಕೆಗೊಂಡರು. ನೂತನವಾಗಿ ಆಯ್ಕೆಗೊಂಡ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಸಿ. ಪೊನ್ನಪ್ಪ ಪ್ರಮಾಣ ವಚನ ಬೋಧಿಸಿದರು. ವಿವಿಧ ಸ್ನಾತ್ತೋಕೊತ್ತರ ಪದವಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಡಾ. ಶ್ರಯನ ನಾಣಯ್ಯ ಸ್ವಾಗತಿಸಿ ನಿರೂಪಿಸಿದರು. ಜಿಲ್ನಾ ವಂದಿಸಿದರು.