ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಿ: ಡಾ.ರ‍್ಯಾಖಾ

| Published : Mar 11 2024, 01:16 AM IST

ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಿ: ಡಾ.ರ‍್ಯಾಖಾ
Share this Article
  • FB
  • TW
  • Linkdin
  • Email

ಸಾರಾಂಶ

ಯಾದಗಿರಿ ನಗರದ ಗಂಜ್ ಏರಿಯಾದಲ್ಲಿನ ಸುಭಮ ಕಾಲೇಜಿನಲ್ಲಿ ನಡೆದ 2023-24ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಲಾಯಿತು.

ಕನ್ನಡಪ್ರಭ ವಾರ್ತೆ ಯಾದಗಿರಿ

ಭಾರತ ದೇಶದಲ್ಲಿ ಸಾಮೂಹಿಕವಾಗಿ ವಿದ್ಯಾರ್ಥಿಗಳು ಸೇವಾ ಮನೋಭಾವನೆ ಬೆಳೆಸಿಕೊಂಡು ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸಬೇಕು. ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಯಾಗಲು ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗಿದೆ ಎಂದು ಆರ್‌.ಕೆ. ಸೂಪರ್‌ ಸ್ಪೆಷಾಲಿಟಿಯ ವೈದ್ಯರಾದ ಡಾ. ರವಿಕುಮಾರ್ ರ‍್ಯಾಖಾ ಹೇಳಿದರು.

ನಗರದ ಗಂಜ್ ಏರಿಯಾದಲ್ಲಿನ ಸುಬಮ ಕಾಲೇಜಿನಲ್ಲಿ ರಾಯಚೂರು ವಿವಿ ಹಾಗೂ ಸುಭಮ ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯುಕ್ತಾಶ್ರಯದಲ್ಲಿ ನಡೆದ 2023-24ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆ ಜೊತೆಗೆ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಳ್ಳಬೇಕು. ರಾಷ್ಟ್ರೀಯ ಸೇವಾ ಯೋಜನೆಯು ವ್ಯಕ್ತಿತ್ವ ವಿಕಸನ, ಕೌಶಲ್ಯ ತರಬೇತಿ, ಸ್ವಚ್ಛತೆ, ಸಮಯಪ್ರಜ್ಞೆ, ರಾಷ್ಟ್ರ ಅಭಿಮಾನ, ಪರಿಸರ ಸಂರಕ್ಷಣೆ ಮೊದಲಾದವುಗಳನ್ನು ಯುವ ಮನಸ್ಸುಗಳಿಗೆ ಮೂಡಿಸುತ್ತದೆ. ಜತೆಗೆ ವಿದ್ಯಾರ್ಥಿಗಳಲ್ಲಿ ಕ್ರಿಯಾತ್ಮಕ ಚಟುವಟಿಕೆ ಬೆಳೆಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗುತ್ತದೆ ಎಂದರು.

ಪತ್ರಕರ್ತ ಶಂಕ್ರಪ್ಪ ಅರುಣಿ ಮತ್ತು ಉದ್ಯಮಿ ಮಲ್ಲಿಕಾರ್ಜುನ ಶಿರಗೋಳ ಮಾತನಾಡಿದರು. ಸಾಯಬಣ್ಣ ಸ್ವಾಗತಿಸಿದರು. ಸಬಮ ಕಾಲೇಜಿನ ಪ್ರಾಧ್ಯಾಪಕ ಬಸವರಾಜ ಮಾನೇಗಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷತೆ ವಹಿಸಿ ಆಡಳಿತಾಧಿಕಾರಿ ಎಸ್‌. ಬಿ. ರ‍್ಯಾಖಾ ಮಾತನಾಡಿದರು.

ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಎಂ.ಡಿ. ಅಸ್ಲಾಂ ವೇದಿಕೆಯಲ್ಲಿದ್ದರು. ನಂತರ ಕಾಲೇಜು ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಜರುಗಿತು. ಈ ವೇಳೆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಇದ್ದರು.