ಹೊಸ ಶಿಕ್ಷಣ ನೀತಿಗೆ ವಿದ್ಯಾರ್ಥಿಗಳ ಒತ್ತು: ಪ್ರೊ. ಅನಿಲ್‌ ಸಹಸ್ರಬುದ್ಧೆ ಕರೆ

| Published : Sep 16 2024, 01:54 AM IST / Updated: Sep 16 2024, 01:55 AM IST

ಹೊಸ ಶಿಕ್ಷಣ ನೀತಿಗೆ ವಿದ್ಯಾರ್ಥಿಗಳ ಒತ್ತು: ಪ್ರೊ. ಅನಿಲ್‌ ಸಹಸ್ರಬುದ್ಧೆ ಕರೆ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ, ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ವತಿಯಿಂದ ಶ್ರೀ ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ 2024ನೇ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಹೊಸ ಶಿಕ್ಷಣ ನೀತಿಗೆ ವಿದ್ಯಾರ್ಥಿಗಳು ಒತ್ತು‌ ನೀಡಬೇಕು. ಈ ನೀತಿಯಲ್ಲಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ಅಡಗಿದೆ ಎಂದು ನವದೆಹಲಿಯ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ ಅಧ್ಯಕ್ಷ ಪ್ರೊ. ಅನಿಲ್ ಸಹಸ್ರಬುದ್ಧೆ ಹೇಳಿದರು. ಅವರು ಭಾನುವಾರ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ, ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ವತಿಯಿಂದ ಶ್ರೀ ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ 2024ನೇ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ಉದ್ದೇಶಿಸಿ ಮಾತನಾಡಿದರು.

ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ, ಹೊಸ ಶಿಕ್ಷಣ ನೀತಿಯನ್ನು ಅನುಸರಿಸುವ ಮೂಲಕ ಮೌಲ್ಯ ಯುತವಾದ ಶಿಕ್ಷಣಕ್ಕೆ ಒತ್ತು ನೀಡಬೇಕಾಗಿದೆ, ಆಧುನಿಕ ತಂತ್ರಜ್ಞಾನದ ಶಿಕ್ಷಣ ಇಂದಿನ ಅಗತ್ಯವಾಗಿದೆ ಎಂದರು.

ಮಣಿಪಾಲ ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್ ಮಾತನಾಡಿ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನ ಆಧಾರಿತ ಶಿಕ್ಷಣ ಪಡೆಯುವತ್ತೆ ಗಮನಹರಿಸಬೇಕು ಎಂದರು. ಪ್ರಶಸ್ತಿ ಪ್ರದಾನ: ಜೀವಮಾನದ ಸಾಧನೆಗಾಗಿ ಮಂಗಳೂರಿನ ಶಾರದ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ.ಎಂ.ಬಿ. ಪುರಾಣಿಕ್ ಹಾಗೂ ಶಿಕ್ಷಣ ತಜ್ಞ ಹಾಗೂ ಬರಹಗಾರ ಡಾ. ಶಂಕರ್ ರಾವ್, ಕಾಲೇಜು ಆಡಳಿತ ನಿರ್ವಹಣೆಯಲ್ಲಿನ ಅತ್ಯುತ್ತಮ ಆಡಳಿತ ನಿರ್ವಾಹಕರಾಗಿ ಸಾಧನೆಗಾಗಿ ಮಂಗಳೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಜಗದೀಶ್ ಬಾಳ ಹಾಗೂ ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜು ಪ್ರಾಂಶುಪಾಲ ಡಾ.ಬಿ.ಎ. ಕುಮಾರ ಹೆಗ್ಡೆ, ಸಂಶೋಧನ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಶಿಕ್ಷಕರ ಅತ್ಯುತ್ತಮ ಸಂಶೋಧಕ ಪ್ರಶಸ್ತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ವಿಶಾಲಾಕ್ಷಿ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಶ್ರೀ ಭುವನೇಂದ್ರ ಕಾಲೇಜು ಪ್ರಾಂಶುಪಾಲ ಡಾ. ಮಂಜುನಾಥ್ ಕೋಟ್ಯಾನ್ ಹಾಗೂ ವಿರಾಜಪೇಟೆ ಕಾವೇರಿ ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ. ಆನಂದ ಕಾರ್ಲಾ ಅವರಿಗೆ ನೀಡಲಾಯಿತು.

ಅತ್ಯುತ್ತಮ ಗ್ರಂಥಪಾಲಕ ವಿಭಾಗದಲ್ಲಿ ಮಂಗಳೂರಿನ ಬೆಸೆಂಟ್ ಸಂಧ್ಯಾ ಕಾಲೇಜು ಗ್ರಂಥಪಾಲಕ ಡಾ. ವಾಸಪ್ಪ ಗೌಡ, ಅತ್ಯುತ್ತಮ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಸ್ತಿಯನ್ನು ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ದೈಹಿಕ ಶಿಕ್ಷಣ ಶಿಕ್ಷಕ ಕೆ. ಶಂಕರನಾರಾಯಣ ಕುಂದಾಪುರ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಸ್ಥಾಪಕ ಅಧ್ಯಕ್ಷ ಡಾ. ರಘು ಅಕ್ಕಮಂಚಿ ಅವರಿಗೆ ನೀಡಿ ಸನ್ಮಾನಿಸಲಾಯಿತು. ಭುವನೆಂದ್ರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿಎ ಶಿವಾನಂದ ಪೈ, ಬೆಂಗಳೂರು ಕೆಆರ್‌ಎಸ್‌ಎಸ್‌ ಅಧ್ಯಕ್ಷ ಡಾ. ಗುರುನಾಥ್ ಬಡಿಗೇರ್, ಕೆಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ಪ್ರೊ. ರೋಹಿಣಿ ಕುಮಾರ್ ಕಲಬುರ್ಗಿ, ರಾಜ್ಯ ಜಂಟಿ ಕಾರ್ಯದರ್ಶಿ ಡಾ. ಮಾಧವ ಎಂ.ಕೆ., ಉಡುಪಿ ಅಧ್ಯಾಪಕ ಸಂಘಟನೆಯ ಯಶವಂತ ಕುದ್ರೋಳಿ, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಮೋಹನ್ ಮತ್ತಿತರರಿದ್ದರು.