Students fall ill: Protest by blocking highway
ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಪೋಷಕರು, ಸಂಘಟನೆಗಳ ಮುಖಂಡರು ಸರ್ಕಾರಿ ಆಸ್ಪತ್ರೆ ಎದುರು ಕಲಬುರಗಿ-ವಿಜಯಪುರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಘಟನೆಗೆ ಸಂಬಂಧಿಸಿದಂತೆ ವಸತಿ ನಿಲಯದ ವಾರ್ಡನ್, ಪ್ರಾಂಶುಪಾಲರು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಅಡುಗೆ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದರು. ತಪ್ಪಿತಸ್ಥರನ್ನು ತಕ್ಷಣ ಅಮಾನತುಗೊಳಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.ಯೋಗಕ್ಷೇಮ ವಿಚಾರಣೆ: ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ ಸ್ಥಳಕ್ಕೆ ಭೇಟಿ ನೀಡಿ, ಅಸ್ವಸ್ಥಗೊಂಡ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು. ವೈದ್ಯರು ಹಾಗೂ ಅಧಿಕಾರಿಗಳಿಂದ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಪಡೆದು, ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಘಟನೆಯ ಕುರಿತು ಸಂಬಂಧಿತ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಜಂಟಿ ನಿರ್ದೇಶಕಿ, ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.