ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ಆ ನಲ್ಲಿ ಜರಗಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ
ಮೂಲ್ಕಿ: ವಿದ್ಯಾರ್ಥಿಗಳು ರಾಷ್ಟ್ರಭಕ್ತಿಯನ್ನು ಬೆಳೆಸಿಕೊಂಡು ಪರಿಶ್ರಮದ ಮೂಲಕ ಉನ್ನತ ಸಾಧನೆ ಮಾಡಿ ಭಾರತವನ್ನು ಮಹಾನ್ ರಾಷ್ಟ್ರವನ್ನಾಗಿ ರೂಪಿಸಲು ಪ್ರಯತ್ನಿಸಬೇಕೆಂದು ಕಿನ್ನಿಗೋಳಿ ಶ್ರೀ ಶಕ್ತಿದರ್ಶನ ಯೋಗಾಶ್ರಮದ ಯೋಗಾಚಾರ್ಯ ದೇವದಾಸ ರಾವ್ ಹೇಳಿದರು. ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ಆ ನಲ್ಲಿ ಜರಗಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.
ಮಂಗಳೂರಿನ ಉದ್ಯಮಿ ಜನಕರಾಜ ರಾವ್ ಮಾತನಾಡಿದ ವಿದ್ಯಾರ್ಥಿಗಳು ಸಂಸ್ಥೆಯ ಹೆಮ್ಮೆಯ ಜೊತೆಗೆ ದೇಶದ ಭವಿಷ್ಯವಾಗಿದ್ದು ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು, ದೇಶದ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವ ಜವಾಬ್ದಾರಿಯುತ ನಾಗರಿಕರಾಗಬೇಕೆಂದು ಶುಭ ಹಾರೈಸಿದರು. ಶಿಮಂತೂರು ಶ್ರೀ ಶಾರದಾ ಸೊಸೈಟಿಯ ಕೋಶಾಧಿಕಾರಿ ಕೊ.ಭುವನಾಭಿರಾಮ ಉಡುಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪದವಿಪೂರ್ವ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 9ನೇ ಸ್ಥಾನಗಳಿಸಿದ ಶಾಲೆಯ ಹಳೆಯ ವಿದ್ಯಾರ್ಥಿನಿ ಹರ್ಷಿತ ಶೆಟ್ಟಿ, ರಾಜ್ಯಮಟ್ಟದಲ್ಲಿ ಕರಾಟೆಯಲ್ಲಿ ಪ್ರಥಮ ಬಹುಮಾನ ಪಡೆದ ಕೌಶಿಕ್ ಕುಲಾಲ್, ದ್ವಿತೀಯ ಬಹುಮಾನ ಪಡೆದ ಆದಿಶ್ ಪೂಜಾರಿ ಲೂಪ್ತಿಕ, ನಿಶಾ ದೇವಾಡಿಗ, ಕುಶಿ ದೇವಾಡಿಗ ರನ್ನು ಗೌರವಿಸಲಾಯಿತು. ಶಾಲಾ ಸಂಚಾಲಕರಾದ ದೇವಪ್ರಸಾದ್ ಪುನರೂರು ಸ್ವಾಗತಿಸಿ, ಪ್ರಸ್ತಾವನೆಗ್ಯೆದರು, ಸಹ ಶಿಕ್ಷಕಿ ಅಮಿತಾ ಕಾರ್ಯಕ್ರಮ ನಿರೂಪಿಸಿದರು, ದೀಪ ಕುಡ್ವ ವಂದಿಸಿದರು.