ತಮ್ಮ ಸ್ನೇಹಿತರು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾದ ನೈಜ ಘಟನೆಗಳನ್ನು ಉದಾಹರಣೆ ನೀಡಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ ಜಿ.ಕೆ ಅವರು ಮಾತನಾಡಿ, ಗುರುಗಳು ಪಾಠ ಮಾಡುವುದರ ಜೊತೆಗೆ, ವಿದ್ಯಾರ್ಥಿಗಳಿಗೆ ಜೀವನಕ್ಕೆ ಬೇಕಾದ ಒಳ್ಳೆಯ ಸಂಸ್ಕಾರಗಳನ್ನು ಕೂಡ ಬೋಧಿಸುತ್ತಿದ್ದಾರೆ. ಪ್ರತಿಯೊಬ್ಬ ಪೋಷಕರಿಗೂ ತಮ್ಮ ಮಕ್ಕಳು ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳಾಗಿ ರೂಪುಗೊಳ್ಳಬೇಕೆಂಬ ಬಯಕೆ ಇರುತ್ತದೆ ಎಂದರು.
ಕನ್ನಡಪ್ರಭ ವಾರ್ತೆ ಹಾಸನ
ವಿದ್ಯಾರ್ಥಿಗಳಿಗೆ ಪ್ರಾಧ್ಯಾಪಕರುಗಳೇ ಎರಡನೇ ತಂದೆತಾಯಿ ಇದ್ದಂತೆ. ವಿದ್ಯಾರ್ಥಿಗಳು ಮೊಬೈಲ್ ಮತ್ತು ಮಾದಕ ವಸ್ತುಗಳ ವ್ಯಸನಿಗಳಾಗದೆ ಪೋಷಕರು ಮತ್ತು ಪ್ರಾಧ್ಯ್ಯಾಪಕರ ಮಾರ್ಗದರ್ಶನದಂತೆ ನಡೆದು ಜೀವನವನ್ನು ಸಾರ್ಥಕವಾಗಿಸಿಕೊಳ್ಳುವಂತೆ ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರು ತಿಳಿಸಿದ್ದಾರೆ.ನಗರದ ಡೇರಿ ವೃತ್ತದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದ ೬ನೇ ವರ್ಷದ ವಾರ್ಷಿಕೋತ್ಸವನ್ನು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಹಾಸನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಟ್ಟದ ಸಮನ್ವಯ ಸಂಸ್ಥೆ, ಭುವನೇಶ್ವರಿ ಮದ್ಯಪಾನ ಸೇವನಿಗಳ ಸಮಗ್ರ ಪುರ್ನವಸತಿ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೆಡ್‌ಕ್ರಾಸ್ ಘಟಕ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಸಹಯೋಗದೊಂದಿಗೆ ಇಂದು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಸ್ನೇಹಿತರು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾದ ನೈಜ ಘಟನೆಗಳನ್ನು ಉದಾಹರಣೆ ನೀಡಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ ಜಿ.ಕೆ ಅವರು ಮಾತನಾಡಿ, ಗುರುಗಳು ಪಾಠ ಮಾಡುವುದರ ಜೊತೆಗೆ, ವಿದ್ಯಾರ್ಥಿಗಳಿಗೆ ಜೀವನಕ್ಕೆ ಬೇಕಾದ ಒಳ್ಳೆಯ ಸಂಸ್ಕಾರಗಳನ್ನು ಕೂಡ ಬೋಧಿಸುತ್ತಿದ್ದಾರೆ. ಪ್ರತಿಯೊಬ್ಬ ಪೋಷಕರಿಗೂ ತಮ್ಮ ಮಕ್ಕಳು ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳಾಗಿ ರೂಪುಗೊಳ್ಳಬೇಕೆಂಬ ಬಯಕೆ ಇರುತ್ತದೆ ಎಂದರು. ಜೀವನಕ್ಕೆ ಹಾನಿ ಮಾಡುವ ಯಾವುದೇ ಕೆಲಸ-ಕಾರ್ಯಗಳನ್ನು ವಿದ್ಯಾರ್ಥಿಗಳು ಮಾಡಬಾರದು. ತಂದೆತಾಯಿಯರಿಗೆ ಒಳ್ಳೆಯ ಮಕ್ಕಳಾಗಿ ಬಾಳಬೇಕು ಹಾಗೂ ಎನ್‌ಡಿಪಿಎಸ್, ಆಕ್ಟ್ ಬಗ್ಗೆ ವಿವರಿಸುತ್ತಾ ವಾಣಿಜ್ಯವಾಗಿ ಕಾನೂನಿಗೆ ಬಾಹಿರವಾಗಿರುವ ಮಾದಕ ದ್ರವ್ಯಗಳನ್ನು ಮಾರಾಟ ಮಾಡುವವರಿಗೆ ೩೦ ವ?ಗಳು ಅಥವಾ ಜೀವಾವಧಿ ಶಿಕ್ಷೆಯನ್ನು ನೀಡಬಹುದು ಮತ್ತು ಮಾದಕ ವಸ್ತುಗಳ ಮಾರಾಟ, ಸೇವನೆ, ಕಳ್ಳ ಸಾಗಣಿಕೆ ಮಾಡುವವರಿಗೆ ಕಾನೂನಿನಲ್ಲಿರುವ ಶಿಕ್ಷೆಗಳ ಹಾಗೂ ದಂಡದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀನಿಧಿ ಅವರು ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಕ?ಪಟ್ಟು ಮೇಲೆ ಬರಬೇಕು. ವಿದ್ಯಾರ್ಥಿಗಳು ಜೀವನದಲ್ಲಿ ನೋವನ್ನು ಕ?ಗಳನ್ನು ಅನುಭವಿಸಬೇಕು ಆಗ ಮಾತ್ರ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ. ಜೀವನದಲ್ಲಿ ಎಲ್ಲರಿಗೂ ಬೆಲ್ಲದ ಆಸೆಯೇ ಜಾಸ್ತಿ, ಆದರೆ ಬೇವಿನ ಒಳ್ಳೆಯ ಔಷಧಿ ಗುಣಗಳೂ ಯಾರಿಗೂ ಬೇಡವಾಗಿದೆ. ಹಾಗೆಯೇ ಯುವಕರಿಗೆ ಜೀವನಕ್ಕೆ ಬೇಡವಾದ ಡ್ರಗ್ಸ್, ಮದ್ಯಪಾನ, ಧೂಮಪಾನ ಎಂಬ ದುಶ್ಚಟಗಳಿಗೆ ಮಾರು ಹೋಗದೆ ವಿದ್ಯಾರ್ಥಿಗಳು ಕೆಲವೊಂದಕ್ಕೆ ಸ್ವಯಂ ನಿಯಂತ್ರಣ ಹಾಕಿಕೊಂಡರೆ ಮಾತ್ರ ಜೀವನವನ್ನು ಶ್ರೇಷ್ಠವಾಗಿಸಿಕೊಳ್ಳಬಹುದು ಎಂದರು. ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಗಿರೀಶ್ ಅವರು ಮಾತನಾಡಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವಾಗ ತಂದೆ-ತಾಯಿಗಳ ಕಷ್ಟಗಳನ್ನು ಅರ್ಥ ಮಾಡಿಕೊಂಡು ವ್ಯಾಸಂಗ ಮಾಡಿ ಹಾಗೂ ಯಾವುದೇ ಮಾದಕ ವಸ್ತುಗಳಿಗೆ ದಾಸರಾಗದೇ, ತಂದೆ-ತಾಯಿಯರಿಗೆ ದ್ರೋಹ ಮಾಡದಿದ್ದರೇ ಜೀವನವೂ ನಿಮ್ಮನ್ನು ತಾನಾಗಿಯೇ ಉನ್ನತ ಮಟ್ಟಕ್ಕೆ ಕರೆದೊಯ್ಯುತ್ತದೆ ಎಂದರು. ಭುವನೇಶ್ವರಿ ಮದ್ಯಪಾನ ಸೇವನಿಗಳ ಸಮಗ್ರ ಪುನರ್ವಸತಿ ಕೇಂದ್ರದ ಯೋಜನ ನಿರ್ದೇಶಕರದ ಅಂಜಲಿದೇವಿ ಗೋವಿಂದರಾಜು ಮತ್ತಿತರರು ಉಪಸ್ಥಿತರಿದ್ದರು.