ವಿದ್ಯಾರ್ಥಿಗಳು ಅಂಬೇಡ್ಕರ್‌ ಆಶಯ ಈಡೇರಿಸಿ

| Published : Jul 28 2025, 12:31 AM IST

ಸಾರಾಂಶ

ಸಂವಿಧಾನ ಶಿಲ್ಪ ಡಾ. ಬಿ.ಅರ್. ಅಂಬೇಡ್ಕರ್ ಅವರು ನನ್ನ ಜನ ಶಿಕ್ಷಣ ಕಲಿತು ಆಳುವ ವರ್ಗಗಳಸಾಲಿನಲ್ಲಿರಬೇಕು ಎಂಬ ಆಶಯವನ್ನು ಹೊಂದಿದ್ದರು. ಅವರ ಕನಸು ನನಸು ಮಾಡುವ ಎಲ್ಲಾ ಶಕ್ತಿ ಸಾಮರ್ಥ್ಯ ನಿಮ್ಮಲ್ಲಿದೆ ಎಂದು ಸಚಿವ ಡಾ. ಎಚ್.ಸಿ. ಮಹದೇವಪ್ಪ ತಿಳಿಸಿದರು.

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಸಂವಿಧಾನ ಶಿಲ್ಪ ಡಾ. ಬಿ.ಅರ್. ಅಂಬೇಡ್ಕರ್ ಅವರು ನನ್ನ ಜನ ಶಿಕ್ಷಣ ಕಲಿತು ಆಳುವ ವರ್ಗಗಳಸಾಲಿನಲ್ಲಿರಬೇಕು ಎಂಬ ಆಶಯವನ್ನು ಹೊಂದಿದ್ದರು. ಅವರ ಕನಸು ನನಸು ಮಾಡುವ ಎಲ್ಲಾ ಶಕ್ತಿ ಸಾಮರ್ಥ್ಯ ನಿಮ್ಮಲ್ಲಿದೆ ಎಂದು ಸಚಿವ ಡಾ. ಎಚ್.ಸಿ. ಮಹದೇವಪ್ಪ ತಿಳಿಸಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ನೌಕರರ ಕ್ಷೇಮಾಭಿವೃದ್ದಿ ಸಂಘದಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ, ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗು ಜಿಲ್ಲಾ ಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಸೇವಾ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ. ಉನ್ನತ ಪದವಿಗಳನ್ನು ಪಡೆದುಕೊಳ್ಳುವ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಹ ತಯಾರಿಯಾಗಬೇಕು. ಅಂಬೇಡ್ಕರ್ ಅವರು ಸಮ ಸಮಾಜ ನಿರ್ಮಾಣದ ಕನಸು ಕಂಡಿದ್ದರು. ಸಂವಿಧಾನ ರಚನೆ ಮಾಡುವ ಮೂಲಕ ಎಲ್ಲರಿಗೂ ಶಿಕ್ಷಣದ ಹಕ್ಕು ನೀಡಿದ್ದರು. ಮೀಸಲಾತಿಯನ್ನು ಕಲ್ಪಿಸಿಕೊಟ್ಟರು. ಈಗಾಗಲೇ ನಮ್ಮ ಸರ್ಕಾರ ವೈದ್ಯಕೀಯ ಶಾಲೆಗಳಲ್ಲಿ ಸೀಟು ಪಡೆಯುವ ಪ್ರತಿಭಾವಂತ ವಿದ್ಯಾರ್ಥಿಗಳ ಶುಲ್ಕವನ್ನು ಪಾವತಿ ಮಾಡಲು ನಿರ್ಣಯ ಮಾಡಿದೆ. ಉನ್ನತ ವ್ಯಾಸಂಗಕ್ಕೆ ಹೆಚ್ಚಿನ ಒತ್ತು ನೀಡಿದೆ. ವಿದ್ಯಾರ್ಥಿ ವೇತನ ಹೆಚ್ಚಳ, ಹಾಸ್ಟೆಲ್ ಸೌಲಭ್ಯಗಳ ಆಧುನಿಕರಗೊಳಿಸಲು ಮುಂದಾಗಿದೆ ಎಂದು ತಿಳಿಸಿದರು. ಕೊಳ್ಳೇಗಾಲ ಶಾಸಕ ಎ.ಆರ್‌. ಕೃಷ್ಣಮೂರ್ತಿ ಮಾತನಾಡಿ, ಪ್ರತಿಭಾವಂತ ಮಕ್ಕಳನ್ನು ಪ್ರೋತ್ದಾಹಿಸುವ ಕೆಲಸವಾಗಬೇಕು. ಪರಿಶಿಷ್ಟ ಜಾತಿ ನೌಕರರ ಸಂಘ ಇಂಥ ಮಕ್ಕಳನ್ನು ವೇದಿಕೆಯಲ್ಲಿ ಸನ್ಮಾನಿಸುವ ಮೂಲಕ ಅವರ ಅತ್ಮಸ್ಥೈರ್ಯವನ್ನು ಹೆಚ್ಚಿಸುವ ಕೆಲಸ ಮಾಡುತ್ತಿದೆ. ರಾಜ್ಯ ಸರ್ಕಾರ ಈಗ ಪಾಸಿಂಗ್ ಮಾರ್ಕ್ಸ್ ಅನ್ನು ೩೫ ರಿಂದ ೩೩ಕ್ಕೆ ಇಳಿಕೆ ಮಾಡಿದೆ. ಅದರು, ಸಹ ನಮ್ಮ ಜಾತಿಯ ೧೮೦ಕ್ಕು ಹೆಚ್ಚು ಮಕ್ಕಳು ೯೦ಕ್ಕಿಂತ ಹೆಚ್ಚು ಅಂಕ ಪಡೆದ್ದೀರಿ ಎಂದರೆ ಹೆಮ್ಮೆ ತಂದಿದೆ. ಶಿಕ್ಷಣ ಮೌಲ್ಯಗಳನ್ನು ಹೆಚ್ಚಿಸುವ ಕೆಲಸವಾಗಬೇಕು ಎಂದರು. ಮೈಸೂರಿನ ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ್‌ ಸ್ವಾಮೀಜಿ ಮಾತನಾಡಿ, ಅಂಬೇಡ್ಕರ್ ಅವರು ಅಂದೇ ಶಿಕ್ಷಣ ಪಡೆದ ವ್ಯಕ್ತಿ ಹುಲಿ ಹಾಲು ಕುಡಿದಂತೆ, ಯಾವಾಗಲು ಹುಲಿಯಂತೆ ಘರ್ಜಿಸುತ್ತಾರೆ ಎಂದು ಹೇಳಿದ್ದಾರೆ. ಅಂಬೇಡ್ಕರ್ ಅವರ ವಂಶಸ್ಥರಾದ ನೀವು ಹುಲಿಗಳಂತೆ ಘರ್ಜಿಸಬೇಕು. ಶಿಕ್ಷಣ ಪಡೆಯುವ ಜೊತೆಗೆ ತಂದೆ ತಾಯಿಗಳು, ಹಿರಿಯರನ್ನು ಗೌರವಿಸುವುದನ್ನು ಕಲಿಯಬೇಕು. ಅವರನ್ನು ಅಶ್ರಮಕ್ಕೆ ಕಳುಹಿಸುವ ಕೆಲಸ ಮಾಡಬೇಡಿ, ದುಶ್ಚಟಗಳಿಂದ ದೂರ ವಿರಿ, ನಿಮ್ಮ ಕುಟುಂಬವನ್ನು ನೆಮ್ಮದಿಯಾಗಿಟ್ಟುಕೊಳ್ಳಿ, ದೇಶವು ಸಹ ನೆಮ್ಮದಿಯಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ೯೦ಕ್ಕಿಂತ ಹೆಚ್ಚು ಅಂಕ ಪಡೆದ ೧೮೦ಕ್ಕು ಹೆಚ್ಚು ವಿದ್ಯಾರ್ಥಿಗಳನ್ನು ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ೪೦ಕ್ಕು ಹೆಚ್ಚು ಸರ್ಕಾರಿ ನೌಕರರಿಗೆ ಅಂಬೇಡ್ಕರ್ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್, ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅರುಳ್‌ಕುಮಾರ್, ಎಸ್ಪಿ ಡಾ.ಬಿ.ಟಿ. ಕವಿತಾ, ಅಹಾರ ಇಲಾಖೆಯ ಉಪ ನಿರ್ದೇಶಕ ಯೋಗಾನಂದ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಬಿಂದ್ಯಾ, ಎಸಿ ಮಹೇಶ್, ನಗರಸಭೆ ಆಯುಕ್ತ ರಾಮದಾಸ್, ನೌಕರರ ಸಂಘದ ಜಿಲ್ಲಾಧ್ಯಕ್ಷೆ ಡಾ. ರೇಣುಕಾದೇವಿ, ತಹಶೀಲ್ದಾರ್ ಗಿರಿಜಾ, ಬಿಇಓ ಹನುಮಶೆಟ್ಟಿ, ಸಂಘದ ಜಿಲ್ಲಾಧ್ಯಕ್ಷ ಸಿ.ಕೆ. ರಾಮಸ್ವಾಮಿ, ಜಿಲ್ಲಾ ಕಾರ್ಯದರ್ಶಿ ನಂಜುಂಡಸ್ವಾಮಿ, ಲತಾಪುಟ್ಟಸ್ವಾಮಿ ಮಹದೇವಸ್ವಾಮಿ, ಗಜೇಂದ್ರ, ಜಿಲ್ಲಾ ಹಾಗು ತಾಲೂಕು ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ಉಪಸ್ಥಿತಿದ್ದರು.