ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ದೇಶದಲ್ಲಿ ಯುವಸಮೂಹ ವ್ಯಾಪಕವಾಗಿ ರ್‍ಯಾಗಿಂಗ್ ಸಮಸ್ಯೆ ಎದುರಿಸುತ್ತಿದೆ. ರ್‍ಯಾಗಿಂಗ್ ವ್ಯಸನ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುತ್ತಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಈ ಪಿಡುಗಿನಿಂದ ಹೊರಬರುವುದು ತುರ್ತು ಅಗತ್ಯವಾಗಿದೆ ಎಂದು ಬಿವಿವಿ ಸಂಘದ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ (ಬೇವೂರ) ಹೇಳಿದರು.ಬಿವಿವಿ ಸಂಘದ ಪಿಎಂಎನ್ಎಂ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ 2025-26ನೇ ಸಾಲಿನ ಬಿಡಿಎಸ್ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ಆ್ಯಂಟಿ- ರ್‍ಯಾಗಿಂಗ್ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಂತಚಿಕಿತ್ಸೆ ಕುರಿತು ಇಂದು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿದೆ. ದಂತವೈದ್ಯರಾಗಿ ಭವಿಷ್ಯದಲ್ಲಿ ಸಾರ್ವಜನಿಕರ ಆರೋಗ್ಯ ಸುಧಾರಣೆಗೆ ಮಹತ್ವದ ಕೊಡುಗೆ ನೀಡಿ. ದಂತ ವೈದ್ಯಕೀಯ ವೃತ್ತಿ ಹೆಚ್ಚು ತಾಳ್ಮೆ ಮತ್ತು ಪರಿಶ್ರಮ ಬಯಸುತ್ತದೆ. ಬಿವಿವಿ ಸಂಘದ ದಂತ ಮಹಾವಿದ್ಯಾಲಯ ರಾಜ್ಯದ ಪ್ರತಿಷ್ಠಿತ ಡೆಂಟಲ್ ಕಾಲೇಜು ಎನ್ನುವ ಗೌರವಕ್ಕೆ ಪಾತ್ರವಾಗಿದೆ.ಪ್ರವೇಶ ಪಡೆದ ವಿದ್ಯಾರ್ಥಿಗಳಲ್ಲಿ ಶೇ.70ಕ್ಕಿಂತ ಹೆಚ್ಚು ಮಹಿಳಾ ವಿದ್ಯಾರ್ಥಿಗಳಿರುವುದು ಬಿವಿವಿ ಸಂಘದಲ್ಲಿ ಮಹಿಳಾ ಶಿಕ್ಷಣಕ್ಕೆ ನೀಡುತ್ತಿರುವ ಆದ್ಯತೆಗೆ ದೃಷ್ಟಾಂತವಾಗಿದೆ. ಹೆಣ್ಣುಮಕ್ಕಳು ಶಿಕ್ಷಣ ಪಡೆದು ಸಬಲರಾಗಲು ಅಗತ್ಯವಾದ ವಾತಾವರಣವನ್ನು ಇಲ್ಲಿ ಸೃಷ್ಟಿಸಲಾಗಿದೆ ಎಂದು ಹೇಳಿದರು.
ಹಾಸ್ಟೆಲ್ ಕಮಿಟಿ ಕಾರ್ಯಾಧ್ಯಕ್ಷ ಕುಮಾರಸ್ವಾಮಿ ಹಿರೇಮಠ (ಚಿತ್ತರಗಿ) ಮಾತನಾಡಿ, ವಿದ್ಯಾರ್ಥಿಗಳಿಗೆ ಅತ್ಯುತ್ತಮ ವಸತಿ ಸೌಲಭ್ಯ ಒದಗಿಸಲಾಗಿದೆ ಮತ್ತು ದೈಹಿಕ ಚಟುವಟಿಕೆಗಳಿಗೆ ಅಗತ್ಯವಾದ ಕ್ರೀಡಾ ಸೌಲಭ್ಯಗಳು ಕಾಲೇಜಿನ ಆವರಣದಲ್ಲಿ ಲಭ್ಯವಿವೆ. ವಿದ್ಯಾರ್ಥಿಗಳು ಈ ಎಲ್ಲ ಸೌಲಭ್ಯಗಳ ಪ್ರಯೋಜನ ಪಡೆದು ಶೈಕ್ಷಣಿಕವಾಗಿ ಯಶಸ್ಸು ಹೊಂದಿರಿ ಎಂದರು.ಪ್ರಾಚಾರ್ಯ ಡಾ.ಶ್ರೀನಿವಾಸ ವನಕಿ ಅತಿಥಿಗಳನ್ನು ಮತ್ತು ವಿದ್ಯಾರ್ಥಿಗಳನ್ನು ಸ್ವಾಗತಿಸಿ ಕಾಲೇಜಿನ ಬೆಳವಣಿಗೆ ಕುರಿತು ಪ್ರಾಸ್ತಾವಿಕ ಮಾತನಾಡಿ, ಆ್ಯಂಟಿ- ರ್‍ಯಾಗಿಂಗ್ ಕುರಿತು ಉಪನ್ಯಾಸ ನೀಡಿದರು. ಡಾ.ಸಂಜೀವ ಕೊಳಗಿ, ಡಾ.ಪ್ರವೀಣ, ಡಾ.ಮಹಾಂತೇಶ ಮತ್ತು ಡಾ.ಮಹಾದೇವಿ ಅವರಿಂದ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದ ವಿಭಾಗಗಳ ಪರಿಚಯ ಮಾಡಿಕೊಡಲಾಯಿತು. ಡಾ.ಹಿರಣ್ಮಯಿ ಮತ್ತು ಡಾ.ಭೀಮಪ್ಪ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳನ್ನು ತಿಳಿಸಿದರು. ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ.ಸಜ್ಜನ (ಬೇವೂರ) ಏಪ್ರನ್ ವಿತರಿಸುವುದರ ಮೂಲಕ ವೈಟ್ ಕೋಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ.ನವೀನ.ಎಸ್ ವಿದ್ಯಾರ್ಥಿಗಳಿಗೆ ಶಪಥ ಬೋಧಿಸಿದರು. ಪಾಲಕರು ಕಾಲೇಜಿನ ಕುರಿತು ತಮ್ಮ ಅನಿಸಿಕೆಗಳನ್ನು ಹೇಳಿದರು. ಡಾ.ವಿಜಯಲಕ್ಷ್ಮಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಡಾ.ನಿವೇದಿತಾ ವಂದಿಸಿದರು. ಸಮಾರಂಭದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಕಾಶಿನಾಥ ಅರಬ್ಬಿ, ಮಹಾವಿದ್ಯಾಲಯದ ಎಲ್ಲ ವಿಭಾಗಳ ಮುಖ್ಯಸ್ಥರು, ವೈದ್ಯ ಸಿಬ್ಬಂದಿ, ಬೋಧಕೇತರ ಸಿಬ್ಬಂದಿ, ಪ್ರಥಮ ವರ್ಷದ ವಿದ್ಯಾರ್ಥಿಗಳು ಮತ್ತು ಪಾಲಕರು ಪಾಲ್ಗೊಂಡಿದ್ದರು.
;Resize=(128,128))
;Resize=(128,128))
;Resize=(128,128))