ಸಾರಾಂಶ
ಕುವೆಂಪು ಅವರ ಮಲೆಗಳಲ್ಲಿ ಮದುಮಗಳು, ಕಾನೂರು ಸುಬ್ಬಮ್ಮ ಹೆಗ್ಗಡತಿ, ರಾವ್ ಬಹದ್ದೂರರ ಗ್ರಾಮಾಯಣ, ಗಳಗನಾಥರ ಕನ್ನಡಿಗರ ಕರ್ಮಕಥೆ. ಪೂರ್ಣಚಂದ್ರ ತೇಜಸ್ವಿ ಇನ್ನೂ ಮುಂತಾದವರ ಸಾಹಿತ್ಯ ಕೃತಿ ಓದುವುದರ ಮೂಲಕ ವಿದ್ಯಾರ್ಥಿಗಳು ಬೌದ್ಧಿಕ ಜ್ಞಾನ ಹೆಚ್ಚಿಸಿಕೊಳ್ಳಬೇಕೆಂದು ಕರೆ
ಕುಷ್ಟಗಿ: ಇಂದಿನ ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಆಸಕ್ತಿ ವಹಿಸಿಕೊಳ್ಳದೆ ಮೊಬೈಲ್ ನೋಡುತ್ತಾ ಕಾಲಹರಣ ಮಾಡುತ್ತಿರುವುದು ಖೇದದ ಸಂಗತಿಯಾಗಿದೆ. ವಿದ್ಯಾರ್ಥಿಗಳು ಸಾಹಿತ್ಯ ರೂಢಿಸಿಕೊಳ್ಳಬೇಕು ಎಂದು ಪ್ರಾಂಶುಪಾಲ ಡಾ. ಎಸ್.ವಿ. ಡಾಣಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಶಿವರಾಮ ಕಾರಂತ ಕನ್ನಡ ವೇದಿಕೆ ಅಡಿಯಲ್ಲಿ ಕನ್ನಡ ವಿಭಾಗದಿಂದ ವಿದ್ಯಾರ್ಥಿಗಳಿಗೆ ಸಾಹಿತ್ಯದಿಂದಾಗುವ ಅನುಕೂಲಗಳು ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಕುವೆಂಪು ಅವರ ಮಲೆಗಳಲ್ಲಿ ಮದುಮಗಳು, ಕಾನೂರು ಸುಬ್ಬಮ್ಮ ಹೆಗ್ಗಡತಿ, ರಾವ್ ಬಹದ್ದೂರರ ಗ್ರಾಮಾಯಣ, ಗಳಗನಾಥರ ಕನ್ನಡಿಗರ ಕರ್ಮಕಥೆ. ಪೂರ್ಣಚಂದ್ರ ತೇಜಸ್ವಿ ಇನ್ನೂ ಮುಂತಾದವರ ಸಾಹಿತ್ಯ ಕೃತಿ ಓದುವುದರ ಮೂಲಕ ವಿದ್ಯಾರ್ಥಿಗಳು ಬೌದ್ಧಿಕ ಜ್ಞಾನ ಹೆಚ್ಚಿಸಿಕೊಳ್ಳಬೇಕೆಂದು ಕರೆ ನೀಡಿದರು.
ಯಲಬುರ್ಗಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ವೀರೇಶ ಗಜೇಂದ್ರಗಡ ವಿಶೇಷ ಉಪನ್ಯಾಸ ಕಾರ್ಯಕ್ರಮ ನೀಡಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಕೃತಿಗಳನ್ನು ಅಧ್ಯಯನ ಮಾಡುವುದರ ಮೂಲಕ ವೈಚಾರಿಕತೆ ಜೀವನದಲ್ಲಿ ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯ ಅಂಗವಾಗಿ ಮಹಾತ್ಮ ಗಾಂಧಿಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಪುಣ್ಯತಿಥಿ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರದ ಅಧ್ಯಾಪಕ ಅಶೋಕ ಕೆಂಚರಡ್ಡಿ, ಭೋಜರಾಜ, ಇಂಗ್ಲಿಷ ವಿಭಾಗದ ಮುಖ್ಯಸ್ಥ ವಿದ್ಯಾವತಿ ಗೋಟೂರು, ಕನ್ನಡ ವಿಭಾಗದ ಮುಖ್ಯಸ್ಥ ರವಿ, ಐ.ಎಸ್.ದ್ಯಾಮವ್ವನಗುಡಿ, ಮಂಜುನಾಥ ಹನುಮಸಾಗರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಹಾಂತೇಶ ಗವಾರಿ ನಿರೂಪಿಸಿದರು.