ಸಾರಾಂಶ
ವಿಜಯಪುರ: ವಿದ್ಯಾರ್ಥಿಗಳು ಸಮಯಕ್ಕೆ ಮಹತ್ವ ನೀಡಿ ಸದುಪಯೋಗ ಮಾಡಿಕೊಳ್ಳುವ ಮೂಲಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕು ಎಂದು ಶಾಲೆಯ ಮುಖ್ಯೋಪಾಧ್ಯಾಯ ಮಹೇಶ ನಾಡಗೇರಿ ಕಿವಿಮಾತು ಹೇಳಿದರು.
ವಿಜಯಪುರ: ವಿದ್ಯಾರ್ಥಿಗಳು ಸಮಯಕ್ಕೆ ಮಹತ್ವ ನೀಡಿ ಸದುಪಯೋಗ ಮಾಡಿಕೊಳ್ಳುವ ಮೂಲಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕು ಎಂದು ಶಾಲೆಯ ಮುಖ್ಯೋಪಾಧ್ಯಾಯ ಮಹೇಶ ನಾಡಗೇರಿ ಕಿವಿಮಾತು ಹೇಳಿದರು.
ನಗರದ ಜೋರಾಪುರ ಪೇಠನಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.10ರಲ್ಲಿ ನಡೆದ ಬೀಳ್ಕೊಡುವ ಸಮಾರಂಭ ಹಾಗೂ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು. ಬೀಳ್ಕೊಡುಗೆ ಸಂಭ್ರಮದ ಸಮಾರಂಭ, ಪರೀಕ್ಷೆ ಮಕ್ಕಳ ಶೈಕ್ಷಣಿಕ ಸಾಧನೆಗಾಗಿ. ಆದ್ದರಿಂದ ಮಕ್ಕಳು ಉನ್ನತ ಶಿಕ್ಷಣ ಹೊಂದಿ ಉನ್ನತ ಸ್ಥಾನ ಪಡೆದು ಶಾಲೆಗೆ ಕೀರ್ತಿ ತರಬೇಕು ಎಂದು ಹೇಳಿದರು.ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಮಾತನಾಡಿ, ನಾನು ಇದೇ ಶಾಲೆಯ ವಿದ್ಯಾರ್ಥಿಯಾಗಿದ್ದು, ಶಾಲೆಯ ಅಭಿವೃದ್ಧಿಪಡಿಸುವುದು ನನ್ನ ಕರ್ತವ್ಯ. ಖಾಸಗಿ ಶಾಲೆಗಿಂತ ಸರ್ಕಾರಿ ಶಾಲೆ ಶಿಕ್ಷಣಕ್ಕೆ ಉತ್ತಮ. ಖಾಸಗಿ ಶಾಲೆಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಡಿಗ್ರಿ ಪಾಸಾದವರಿಗೆ ತೆಗೆದುಕೊಳ್ಳುತ್ತಾರೆ. ಆದರೆ ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಕವಾಗಬೇಕಾದರೆ ಅವರಿಗೆ ಅನುಭವ ಮತ್ತು ಪರೀಕ್ಷೆಯಲ್ಲಿ ಪಾಸಾದವರಿಗೆ ನೇಮಕ ಮಾಡುತ್ತಾರೆ. ಹೀಗಾಗಿ, ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಕರಿರುತ್ತಾರೆ ಎಂದರು.ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆ, ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪಾರಿತೋಷಕ ಮತ್ತು ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶಿಕ್ಷಕಿ ಎಂ.ಪಿ.ಗೊಳಸಂಗಿ ಅವರಿಗೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಪಿ.ಜಿ.ನಾವಿ, ಶಿಕ್ಷಣ ಸಂಯೋಜಕ ಎ.ಕೆ.ದಳವಾಯಿ, ಸವಿತಾ.ಬಿ.ಎಂ, ಎ.ಎಫ್.ಅರಳಿಮಟ್ಟಿ, ಡಿ.ಕೆ.ತಾವಸೆ, ಎ.ಐ.ಮಾಗಿ, ಶಬಾನಾಬೇಗಂ, ಝಡ್.ಎಸ್.ಆಸ್ಕಿ, ಎಮ್.ಎನ್.ಮುಂಜನ್ನಿ, ಸಚಿನ ನಾಶಿ ಮತ್ತು ಸಿಬ್ಬಂದಿ, ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಪಾಲಕರು ಉಪಸ್ಥಿತರಿದ್ದರು.