ಸಾರಾಂಶ
ಸರ್ವೋದಯ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ದಿ.15ರಂದು ನಡೆಯುವ ವಿಜ್ಞಾನೋತ್ಸವ ಕಾರ್ಯಕ್ರಮದಲ್ಲಿ ಉಚಿತ ತಾರಾಲಯ ಪ್ರದರ್ಶನ ಮತ್ತು ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರಾದ ನಾಗರಾಜ್ ತಿಳಿಸಿದರು, ಕುಣಿಗಲ್‌ನಲ್ಲಿ ವಿಜ್ಞಾನೋತ್ಸವ ನಿಮಿತ್ತ ಏರ್ಪಡಿಸಿದ್ದ ಸಿದ್ಧತೆಗಳನ್ನು ಪರಿಶೀಲಿಸಿ ನಂತರ ಪತ್ರಕರ್ತರ ಜತೆ ಮಾತನಾಡಿದರು,
ಸರ್ವೋದಯ ಸಂಸ್ಥೆ ನಾಗರಾಜ್ ಮಾಹಿತಿ । ವಿಜ್ಞಾನೋತ್ಸವ, ಸಿದ್ಧತೆ ಪರಿಶೀಲನೆ
ಕನ್ನಡಪ್ರಭ ವಾರ್ತೆ ಕುಣಿಗಲ್ಪಟ್ಟಣದ ಹೌಸಿಂಗ್ ಬೋರ್ಡ್‌ನ ಸರ್ವೋದಯ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ದಿ.15ರಂದು ನಡೆಯುವ ವಿಜ್ಞಾನೋತ್ಸವ ಕಾರ್ಯಕ್ರಮದಲ್ಲಿ ಉಚಿತ ತಾರಾಲಯ ಪ್ರದರ್ಶನ ಮತ್ತು ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರಾದ ನಾಗರಾಜ್ ತಿಳಿಸಿದರು,
ನಗರದ ಶಾಲಾ ಆವರಣದಲ್ಲಿ ವಿಜ್ಞಾನೋತ್ಸವ ನಿಮಿತ್ತ ಏರ್ಪಡಿಸಿದ್ದ ಸಿದ್ಧತೆಗಳನ್ನು ಪರಿಶೀಲಿಸಿ ನಂತರ ಪತ್ರಕರ್ತರ ಜತೆ ಮಾತನಾಡಿದರು,ಸರ್ವೋದಯ ಶಾಲೆ ಕಡಿಮೆ ಶುಲ್ಕದಲ್ಲಿ ಉತ್ತಮ ಶಿಕ್ಷಣ ನೀಡುತ್ತಿದ್ದು ಮಕ್ಕಳ ಸೇವಾ ಮನೋಭಾವದಿಂದ ಶಾಲೆಯನ್ನು ಪ್ರಾರಂಭಿಸಿದ್ದು ತೃಪ್ತಿ ತಂದಿದೆ. ಇಲ್ಲಿನ ವಿದ್ಯಾರ್ಥಿಗಳು ಕ್ರೀಡೆ ಸಂಗೀತ ಸೇರಿದಂತೆ ವಿಜ್ಞಾನ ಕ್ಷೇತ್ರದಲ್ಲೂ ಶಾಲೆಯ ಹೆಸರನ್ನು ರಾಷ್ಟ್ರ ಮಟ್ಟದಲ್ಲಿ ಗುರುತಿಸುವ ಕೆಲಸ ಮಾಡುತ್ತಿದೆ. ಅಂತಹ ಮಕ್ಕಳ ಅಭಿವೃದ್ಧಿಗಾಗಿ ಅವರ ಜ್ಞಾನವನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ ಸರ್ವೋದಯ ವಿಜ್ಞಾನೋತ್ಸವ ಎಂಬ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು,
ವಿಜ್ಞಾನದ ಆಸಕ್ತಿಯುಳ್ಳ ಹಲವಾರು ಮಕ್ಕಳು ಶಿಕ್ಷಕರು ಸೇರಿದಂತೆ ವಿವಿಧ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ಮಕ್ಕಳ ಆಸಕ್ತಿ ಹೆಚ್ಚಿಸುವ ಸಲುವಾಗಿ ಉಚಿತವಾಗಿ ತಾರಾಲಯ ವೀಕ್ಷಣೆ ಏರ್ಪಡಿಸಲಾಗಿದೆ ಕಾರ್ಯಕ್ರಮದಲ್ಲಿ ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಜತೆ ವಿದ್ಯಾರ್ಥಿಗಳು ಸಂವಾದ ನಡೆಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಬೋರೇಗೌಡ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದರು.