ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಬೇಕು: ಬಿ.ಕೆ.ನಂದನೂರ

| Published : Jun 15 2024, 01:12 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಮಹಾಲಿಂಗಪುರ: ಪ್ರೌಢ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಉತ್ತಮ ಅಂಕಗಳಿಸುವ ಛಲದೊಂದಿಗೆ ಜ್ಞಾನದ ಹಸಿವು ಇರಬೇಕು. ಅಂದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೆಶಕ ಬಿ.ಕೆ.ನಂದನೂರ ಹೇಳಿದರು.

ಕನ್ನಡಪ್ರಭ ವಾರ್ತೆ ಮಹಾಲಿಂಗಪುರ: ಪ್ರೌಢ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಉತ್ತಮ ಅಂಕಗಳಿಸುವ ಛಲದೊಂದಿಗೆ ಜ್ಞಾನದ ಹಸಿವು ಇರಬೇಕು. ಅಂದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೆಶಕ ಬಿ.ಕೆ.ನಂದನೂರ ಹೇಳಿದರು.ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಜೊತೆಗೆ ಸಂವಾದ ನಡೆಸಿದರು. ಸತತ ಪ್ರಯತ್ನವೇ ಯಶಸ್ಸಿನ ಮೂಲವಾಗಿದ್ದು, ಇರುವೆಯ ಪ್ರಯತ್ನಶೀಲತೆ ನಮಗೆಲ್ಲ ಮಾದರಿಯಾಗಬೇಕೆಂದರು. ನೂತನ ಪರೀಕ್ಷ ಪದ್ದತಿಗಳ ಅನುಕೂಲತೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಗ್ರಾಮೀಣ ಭಾಗದ ಈ ಶಾಲೆಯ ವಾತಾವರಣ, ಕಲಿಕಾ ಗುಣಮಟ್ಟದ ಕುರಿತು ಹರ್ಷವ್ಯಕ್ತಪಡಿಸಿದ ಅಧಿಕಾರಿಗಳು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿರುವುದಕ್ಕೆ ಪ್ರಭಾರ ಮುಖ್ಯೋಪಾದ್ಯಾಯೆ ಸೇರಿ ಶಿಕ್ಷಕ ವೃಂದವನ್ನು ಹಾಗೂ ಎಸ್‌ಡಿಎಂಸಿ ಪದಾಧಿಕಾರಿಗಳನ್ನು ಅಭಿನಂದಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ಬಸಣ್ಣವರ, ಕ್ಷೇತ್ರ ಸಮನ್ವಯ ಅಧಿಕಾರಿ ರಮೇಶ ಅವಟಿ, ಪ್ರೌಢಶಾಲೆಯ ಪ್ರಭಾರ ಮುಖ್ಯೋಪಾದ್ಯಾಯೆ ಎಂ.ಎಸ್.ಜಿಟ್ಟಿ ಈ ವೇಳೆ ಇದ್ದರು.