ಸಾರಾಂಶ
ಶೃಂಗೇರಿ, ಮಕ್ಕಳಿಗೆ ತಮ್ಮದೇ ಆದ ಹಕ್ಕುಗಳಿವೆ. ಅವುಗಳ ರಕ್ಷಣೆ ಮಾಡಬೇಕು. ವಿದ್ಯಾರ್ಥಿಗಳಿಗೆ ಸಾಮಾನ್ಯ ಕಾನೂನಿನ ಬಗ್ಗೆ ತಿಳುವಳಿಕೆ ಇರಬೇಕು ಎಂದು ಶೃಂಗೇರಿ ಠಾಣಾ ಸಹಾಯಕ ಪೊಲೀಸ್ ಉಪನಿರೀಕ್ಷಕ ಡಾ.ಮೋಹನ್ ಕುಮಾರ್ ಸಲಹೆ ನೀಡಿದರು.
ಪಟ್ಟಣ ಠಾಣೆಯಲ್ಲಿ ಶ್ರೀ ರಾಮಕೃಷ್ಣ ಶಾಲಾ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ಶೃಂಗೇರಿಮಕ್ಕಳಿಗೆ ತಮ್ಮದೇ ಆದ ಹಕ್ಕುಗಳಿವೆ. ಅವುಗಳ ರಕ್ಷಣೆ ಮಾಡಬೇಕು. ವಿದ್ಯಾರ್ಥಿಗಳಿಗೆ ಸಾಮಾನ್ಯ ಕಾನೂನಿನ ಬಗ್ಗೆ ತಿಳುವಳಿಕೆ ಇರಬೇಕು ಎಂದು ಶೃಂಗೇರಿ ಠಾಣಾ ಸಹಾಯಕ ಪೊಲೀಸ್ ಉಪನಿರೀಕ್ಷಕ ಡಾ.ಮೋಹನ್ ಕುಮಾರ್ ಸಲಹೆ ನೀಡಿದರು.
ಪಟ್ಟಣ ಠಾಣೆಯಲ್ಲಿ ಮಾನಗಾರು ಶ್ರೀ ರಾಮಕೃಷ್ಣ ಆಂಗ್ಲಮಾದ್ಯಮ ಪ್ರೌಡಶಾಲಾ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮದಲ್ಲಿ ಕಾನೂನಿನ ಬಗ್ಗೆ ಮಾಹಿತಿ ನೀಡಿದರು. ರಸ್ತೆ ಸಂಚಾರಿ ನಿಯಮಗಳು, ಅಪರಾಧ ಕಾನೂನುಗಳ ಬಗ್ಗೆ ಸಾಮಾನ್ಯ ಜ್ಞಾನ ಮಕ್ಕಳಲ್ಲಿ ಇರಬೇಕು. ಮಕ್ಕಳು ಪೊಲೀಸರ ಬಗ್ಗೆ ಭಯ ಪಡಬಾರದು. ಪೊಲೀಸ್ ಜನಸ್ನೇಹಿ ಭಾವನೆ ಮೂಡಿಸಿಕೊಳ್ಳಬೇಕು.ಇತ್ತಿಚಿನ ದಿನಗಳಲ್ಲಿ ಮಕ್ಕಳ ಮೇಲೆ ಕಿರುಕುಳ, ದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದು ಮಕ್ಕಳು ಎಚ್ಚರಿಕೆ ವಹಿಸಬೇಕು. ಅಪರಿಚಿತ , ಅನುಮಾನಸ್ಪದ ವ್ಯಕ್ತಿಗಳ ಬಗ್ಗೆ ಎಚ್ಚರ ವಹಿಸಬೇಕು. ಪೋಕ್ಸೋ ಕಾಯ್ದೆ ಮಕ್ಕಳ ರಕ್ಷಣೆಗಾಗಿ ಇದೆ. ಪೋಕ್ಸೋ ಕಾಯ್ದೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು. ಕಾನೂನಿನ ಬಗ್ಗೆ ತಿಳುವಳಿಕೆ ಹೊಂದಿ ಜಾಗೃತರಾದರೆ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು. ಸಮಾಜದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗುತ್ತದೆ ಎಂದರು.
ಉಪನಿರೀಕ್ಷಕ ಎನ್.ಡಿ.ಜಕ್ಕಣ್ಣನವರ್ ಮಾತನಾಡಿ ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿ ದೇಶಭಕ್ತಿ, ಜನಸ್ನೇಹಿ ಪೊಲೀಸ್ ವ್ಯವಸ್ಥೆ, ವಾಕಿಟಾಕಿ,ಅಪರಾಧ, ಶಿಕ್ಷೆ ಈ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದರು.ಮಹೇಶ್ ಮೇಲಗಿರಿ ಪೋಕ್ಸೋ ಕಾಯ್ದೆ, ಮಕ್ಕಳ ಮೇಲಿನ ದೌರ್ಜನ್ಯ, ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕ ಕಿರಣ್, ಕು ಧನ್ಯಶ್ರೀ, ಸಿಬ್ಬಂದಿ ಅಶೋಕ್, ಗಿರೀಶ್, ಪ್ರಸನ್ನ, ದರ್ಶನ್, ಪ್ರವೀಣ್ ನಾಯ್ಕ ಮತ್ತಿತರರು ಇದ್ದರು.28 ಶ್ರೀ ಚಿತ್ರ 2-
ಶೃಂಗೇರಿ ಪಟ್ಟಣದ ಠಾಣೆಯಲ್ಲಿ ಶ್ರೀ ರಾಮಕೃಷ್ಣ ಆಂಗ್ಲಮಾದ್ಯಮ ಶಾಲೆ ವಿದ್ಯಾರ್ಥಿಗಳಿಗೆ ತೆರೆದ ಮನೆಕಾನೂನು ಮಾಹಿತಿ ಕಾರ್ಯಕ್ರಮ ನಡೆಯಿತು.