ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಸಾಧಿಸಲು ಶ್ರಮ ಅಗತ್ಯ

| Published : Mar 16 2024, 01:45 AM IST

ಸಾರಾಂಶ

ವಿದ್ಯಾರ್ಥಿಗಳು ಜೀವನದಲ್ಲಿ ಏನಾದರೂ ಸಾಧಿಸಬೇಕಾದರೆ ದೊಡ್ಡದಾದ ಗುರಿ ಹೊಂದಬೇಕು ಅಂದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ.

ಸಿರವಾರ: ವಿದ್ಯಾರ್ಥಿಗಳು ಜೀವನದಲ್ಲಿ ಏನಾದರೂ ಸಾಧಿಸಬೇಕಾದರೆ ದೊಡ್ಡದಾದ ಗುರಿ ಹೊಂದಬೇಕು ಅಂದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ'''''''' ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಅಯ್ಯನಗೌಡ ಏರಡ್ಡಿ ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕಶಾಲೆಯಲ್ಲಿ ಸರಸ್ವತಿ ಪೂಜೆ ಮತ್ತು 7ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಶಾಲಾ ಶಿಕ್ಷಕರಿಗೆ ಪಠ್ಯೇತರ ಕೆಲಸಗಳನ್ನು ಕಡಿಮೆ ಶಿಕ್ಷಣ ನೀಡಲು ಅವಕಾಶ ಮಾಡಿಕೊಟ್ಟರೆ ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತ ಉತ್ತಮ ಶಿಕ್ಷಣ ಸಿಗುತ್ತದೆ ಎಂದರು.

ವಿವಿಧ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಮತ್ತು ಅತಿಥಿ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಎಸ್ಡಿಎಂಸಿ ಅಧ್ಯಕ್ಷ ಪಿ.ಕೃಷ್ಣ, ಮುಖಂಡರಾದ ರಮೇಶ ದರ್ಶನಕರ್, ಶಿವರಾಜ ಗೌಡ ಬೆಳವಿನೂರ, ರಮೇಶ ಭೋವಿ, ವೆಂಕಟೇಶ ದೊರೆ, ಮುಖ್ಯ ಶಿಕ್ಷಕಿ ನಿರ್ಮಲಾ ಮ್ಯಾಗಳಮನಿ, ಉರ್ದು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅಮರೇಶ ಅಂಗಡಿ , ಶಿಕ್ಷಕರಾದ ಎಸ್. ಶಮಂತಕಮಣಿ, ರಾಜು, ಮಹ್ಮದ್ ಜಿಲಾನಿ ದೊಡ್ಮನಿ, ರಮಾದೇವಿ, ಮಹಾಲಕ್ಷ್ಮಿ, ದೀಪಾ, ಜ್ಯೋತಿ ಲಕ್ಷ್ಮೀ, ನಾಗರತ್ನ ಸೇರಿದಂತೆ ಮಕ್ಕಳು ಇದ್ದರು.